ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿಘ್ನವಿನಾಶಕ ಶ್ರೀ ಗಣೇಶ ತಮ್ಮೆಲ್ಲರ ಬಾಳಲ್ಲೂ ಸುಖ, ಶಾಂತಿ, ಸಂತೋಷ ಮತ್ತು ನೆಮ್ಮದಿಯನ್ನು ತಂದು ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನಾಡಿನಲ್ಲಿ ನೆಮ್ಮದಿಯ ವಾತಾವರಣ ಇರಲಿ. ಎಲ್ಲರಿಗೂ ಸುಖ ಸಂತೋಷ ನೆಮ್ಮದಿ ಸಮೃದ್ಧಿ ಕರುಣಿಸಿ, ನಾಡಿನೆಲ್ಲೆಡೆ ಸರ್ವರಿಗೂ ಒಳ್ಳೆಯದು ಆಗಲಿ ಎಂದು ಮಾಜಿ ಪ್ರಧಾನಿಗಳು ಹಾರೈಸಿದ್ದಾರೆ.