ಗುಡ್ಮಾರ್ನಿಂಗ್ ನ್ಯೂಸ್: ನಶಾ ಮುಕ್ತ ಭಾರತ ಅಭಿಯಾನ.. 3 ದಿನಗಳ ಬೈಕ್ ಜಾಥಾ

Drug-free India campaign.. 3-day bike rally

ಬಳ್ಳಾರಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಆಗಸ್ಟ್ 29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ (Bike rally) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ.

ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.

ಈ ಬೃಹತ್ ಅಭಿಯಾನವನ್ನು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್,
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್, ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.

ದೇಶಾದ್ಯಂತ 1 ಲಕ್ಷ ಕಿಲೋಮೀಟ‌ರ್ ಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್ ನಂದಿನಿ ಮಿಥುನ್ ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.

ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.

ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]