ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಹೆಚ್.ಡಿ. ಕುಮಾರಸ್ವಾಮಿ

Enough with the hit and run, put the documents against me before the people: DK Shivakumar challenges H.D. Kumaraswamy

ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ ಮಾಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಗುಡುಗಿದರು.

ನಗರದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ರಚನೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದರಲ್ಲದೆ ಕೆಲವು ಶಕ್ತಿಗಳ ಒತ್ತಡಕ್ಕೆ ಮಣಿದು ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಧರ್ಮಸ್ಥಳದ ವಿಚಾರದಲ್ಲಿ ಈ ಸರ್ಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ ಶ್ರೀ ಮಂಜುನಾಥ ಸ್ವಾಮಿ ಶಿಕ್ಷೆ ನೀಡುವುದು ಖಚಿತ. ಆರಂಭಿಕ ಹಂತದಿಂದ ಕೂಡ ಸರ್ಕಾರ ಸರಿಯಾಗಿ ನಡೆದುಕೊಂಡಿಲ್ಲ. ಇಲ್ಲಿ ರಾಜಕೀಯ ಅಥವಾ ಧರ್ಮವನ್ನು ತರುವುದಿಲ್ಲ. ಆದರೆ ಕ್ಷೇತ್ರದ ಬಗ್ಗೆ ಸರ್ಕಾರ ನಡೆದುಕೊಂಡ ರೀತಿ ಮಾತ್ರ ಅಪಮಾನ ಉಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿದೆ. ಇದು ಅಕ್ಷಮ್ಯ ಎಂದು ಅವರು ಹೇಳಿದರು.

ಆರಂಭದಿಂದಲೂ ತನಿಖೆಯ ನಾಟಕ ನಡೆದಿದೆ. ಸಿ.ಎಸ್. ದ್ವಾರಕಾನಾಥ್ ಎನ್ನುವ ವ್ಯಕ್ತಿ ಮೊದಲು ದೂರು ನೀಡಿರುತ್ತಾರೆ. ಅವರು ದೂರು ನೀಡಿದ ತಕ್ಷಣ ಮುಖ್ಯಮಂತ್ರಿಗಳು ಅತ್ಯಂತ ವೇಗವಾಗಿ ಕ್ರಮ ಕೈಗೊಂಡು ಎಸ್ ಐಟಿ ರಚನೆಗೆ ಆದೇಶ ಮಾಡುತ್ತಾರೆ. ಇದರ ಹಿಂದೆ ಕೆಲ ಎಡಪಂಥೀಯ ಶಕ್ತಿಗಳ ಹುನ್ನಾರದ ಜತೆಗೆ ಕಾಣದ ಶಕ್ತಿಗಳ ಬಹುದೊಡ್ಡ ಕುತಂತ್ರ ಅಡಗಿದೆ ಎಂದು ಅವರು ಆಪಾದಿಸಿದರು.

ಬಾನು ಮುಷ್ತಾಕ್ ವಿವಾದ ವಿಚಾರ

ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ‌ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ನೇರವಾಗಿ ಹೇಳಿದರು.

ತಾಯಿಯ ಮೆರವಣಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಕೆಲವರು ಈ ಬಗ್ಗೆ ಬಹಳ ಉದ್ಧಟತನ‌ದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ಬೇಡ, ಬೇಕಾಗಿಯೂ ಇಲ್ಲ. ಬಾನು ಮುಷ್ತಾಕ್ ಅವರಿಂದ ಪೂಜೆ‌ ಮಾಡಿಸುವುದು ಬೇರೆ. ಆದರೆ ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಸರಿಯಲ್ಲ. ಇದು ಕಾಂಗ್ರೆಸ್ ಸರ್ಕಾರಕ್ಕೆ ಆಪತ್ತು ತರಲಿದೆ ಎಂಬುದನ್ನು ಮರೆಯಬಾರದು ಎಂದು ಅವರು ಕಟು ಶಬ್ದಗಳಲ್ಲಿ ಹೇಳಿದರು.

ರಾಜ್ಯದ ಡಿಸಿಎಂ ಆರ್ ಎಸ್ ಎಸ್ ಗೀತೆ ಹಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು; ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಾರೆ. ತಮಾಷೆಗೂ ಆ ರೀತಿ ಹೇಳುವುದನ್ನು ಕಾಂಗ್ರೆಸ್ ನಾಯಕರು ಒಪ್ಪಲ್ಲ. ಈಗ ಅವರಿಗೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗಿದೆ ಎಂದರು ಕೇಂದ್ರ ಸಚಿವರು.

ರಾಜ್ಯದಲ್ಲಿ ವಿಪರೀತ ಮಳೆ ಆಗುತ್ತಿದೆ. ನೆರೆಯಿಂದ, ಬೆಳೆ ಹಾನಿಯಿಂದ ಜನರು ತತ್ತರಿಸುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸುವುದು ಬಿಟ್ಟು ಇಂಥ ವಿಷಯಗಳಲ್ಲಿ ಕಾಲಹರಣ ಮಾಡುತ್ತಿದೆ. ಅತ್ಯಂತ ನೋವಿನಿಂದ ನಾನು ಈ ಮಾತು ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]