Police department needs to keep a close eye on drug trafficking and sale: C.K. Baba

ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ: ಸಿ.ಕೆ. ಬಾಬಾ

ಬೆಂ.ಗ್ರಾ.ಜಿಲ್ಲೆ: ಮಾದಕ ವಸ್ತುಗಳ (Drug) ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು (A.B. Basavaraju) ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ, ಜೀವನದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಹಾಗಾಗಿ ಅದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಜನರಿಗೆ ಜಾಗೃತಿ ಮೂಡಿಸಿ. ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಅಧಿಕಾರಿಗಳು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ.

ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.

ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!