ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6,7,8,9 ಮತ್ತು 11ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ 6 ತಿಂಗಳ ಕರಾಟೆ (karate) -ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲು ಅರ್ಹ ಮಹಿಳಾ ತರಬೇತಿದಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನುರಿತ ಮತ್ತು ಅರ್ಹ ಮಹಿಳಾ ತರಬೇತಿದಾರರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 10 ರೊಳಗೆ ಸಲ್ಲಿಸಬೇಕು.
ಅಭ್ಯರ್ಥಿಯು ಸಾಮಾನ್ಯ ಪದವಿಯನ್ನು ಪಡೆದಿರಬೇಕು. ನುರಿತ ಮಹಿಳಾ ತರಬೇತಿದಾರರಾಗಿರಬೇಕು.
ಅಂಗೀಕೃತ ಸಂಸ್ಥೆಯಿಂದ ಮಾಸ್ಟರ್ ಕಾರ್ಡ್/ಗುರುತಿನ ಚೀಟಿ ಹಾಗೂ ಬ್ಲಾಕ್ ಬೆಲ್ಟ್ ಪಡೆದಿರಬೇಕು. ಕರಾಟೆ ತರಬೇತಿಯಲ್ಲಿ ಸೇವಾ ಅನುಭವ ಪ್ರಮಾಣ ಪತ್ರ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ।, ದೇವನಹಳ್ಳಿ ತಾ||-562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿ ದೂರವಾಣಿ ಸಂಖ್ಯೆ:080-29787455 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.