ಮುತ್ತೂರು ದುರ್ಘಟನೆ; ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಬಾಲಕ ಸಾವು..!

Muttur incident; Another boy dies due to ineffective treatment

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ (Muttur) ಸಂಭವಿಸಿದ ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

ಮೃತ ದುರ್ದೈವಿಯನ್ನು ಯೋಗೇಶ್ (15 ವರ್ಷ) ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ 5.30ರ ವೇಳೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಪಟಾಕಿ ಸ್ಪೋಟದ ಹಿನ್ನೆಲೆಯಲ್ಲಿ 15 ವರ್ಷದ ಮುನಿ (ಧನುಷ್ ರಾವ್) ಎಂಬ ಓರ್ವ ಬಾಲಕ ಮರಣ ಹೊಂದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಯೋಗೇಶ್‌ನನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಸಾವನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂವರಿಗೆ ಬಂಧನ

ಆಯೋಜಕರಲ್ಲಿ ಮೂವರನ್ನು ದೊಡ್ಡಬಳ್ಳಾಪುರ ನಗರಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ‌.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಜಾಕೀರ್ ಹುಸೇನ್, ನಾಗರಾಜು, ಪವರ್ ಲಿಫ್ಟ್ ವಾಹನ ಆಪರೇಟರ್ ಮುನಿರಾಜು, ಚೇತನ್, ಗಣೇಶ್, ಲೋಕೇಶ್, ಮುನಿಅಕ್ಕಯ್ಯಮ್ಮ, ಧನಂಜಯ ಸೇರಿ 09 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪಟಾಕಿ ನಿಷೇಧ

ಮುತ್ತೂರು 2025-26ನೇ ಸಾಲಿನ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕ ಹಿತದೃಷ್ಟಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಾಗಲೀ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]