District-level Teachers' Day celebrated on September 8th

ಸೆ.8ಕ್ಕೆ ಬೆಂ.ಗ್ರಾ.ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ: ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಇಲ್ಲಿದೆ

ಬೆಂ. ಗ್ರಾ. ಜಿಲ್ಲೆ: ಭಾರತರತ್ನ ಡಾ॥ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು (Teacher’s Day) ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್, ಡಾ॥ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ದೇವನಹಳ್ಳಿ, ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೆರಿಸಲ್ಲಿದ್ದಾರೆ.

ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮತ್ತು ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತರಾಯಪ್ಪ ಕೆ, ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರಾದ ಕೋಡಿ ರಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ

ಕಿರಿಯ ಪ್ರಾಥಮಿಕ ಶಾಲಾ ವಿಭಾಗ

  1. ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
  2. ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
  3. ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
  4. ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು

ಹಿರಿಯ ಪ್ರಾಥಮಿಕ ಶಾಲಾ ವಿಭಾಗ

  1. ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
  2. ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
  3. ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
  4. ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು

ಪ್ರೌಢ ಶಾಲಾ ವಿಭಾಗ

  1. ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
  2. ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
  3. ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು.
  4. ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!