ಬೆಂ.ಗ್ರಾ.ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ: 101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ ಘೋಷಣೆ

Teachers' Day: Model schools declared in 101 panchayats; K.H. Muniyappa

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾಗಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ (K.H. Muniyappa) ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದರು.

ರಾಜ್ಯದಲ್ಲಿ ಪ್ರತಿ ವರ್ಷ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಪ್ರಥಮ ಸ್ಥಾನದಲ್ಲಿರುತ್ತವೆ. ಶಿಕ್ಷಣದಲ್ಲಿ ಮುಂದುವರೆದ ಜಿಲ್ಲೆಗಳಾಗಿವೆ. ಆ ಸಾಲಿಗೆ ನಮ್ಮ ಜಿಲ್ಲೆಯು ಸೇರಬೇಕು. ನಮ್ಮ ಜಿಲ್ಲೆಯು ಕೂಡ ಶಿಕ್ಷಣದಲ್ಲಿ ಮುಂದುವರೆಯಬೇಕು.

ಈ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು. ಶಿಕ್ಷಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲಾ ರೀತಿಯ ನೆರವು ನೀಡಲು ನಾವು ಸಾದಾ ಸಿದ್ದರಿದ್ದೇವೆ. ಜಿಲ್ಲೆಯನ್ನು ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಕೆಲಸ ಶಿಕ್ಷಕರಾದ ನಿಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಅಂದಿನ ಕಾಲದಲ್ಲಿ ಶಿಸ್ತಿನ ಪಾಠ ಈಗಿನ ಕಾಲಕ್ಕೆ ಮಾದರಿ, ಎಲ್ಲರೂ ಒಂದಲ್ಲ ಒಂದು ದಿನ ನಿವೃತ್ತಿ ಹೊಂದುವವರೇ ಆದರೆ ಅವರು ನೀಡಿರುವ ಕೊಡುಗೆಗಳು, ಗುರುತುಗಳು ಅಜರಾಮರವಾಗಿರಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡಿ ಹಲವಾರು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಅಗ್ರಗಣ್ಯ ದೇಶಗಳ ಜೊತೆಗೆ ನಮ್ಮ ದೇಶ ಬೆಳೆಯಬೇಕು. ಸಿಇಟಿ, ನೀಟ್ ನಂತಹ ಪರಿಕ್ಷೆಗಳಲ್ಲಿ ನಮ್ಮ ಸರ್ಕಾರಿ ಶಾಲೆ ಮಕ್ಕಳು ಬೆಳೆಯಬೇಕು. ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಿ ದೇಶದ ಅಭಿವೃದ್ಧಿಗೆ ಅವರನ್ನು ಬೆಳೆಯುವಂತೆ ಮಾಡುವುದು ಶಿಕ್ಷಕರ ಕೈಯಲ್ಲಿದೆ ಎಂದರು.

ರಾಜ್ಯಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯಲ್ಲಿ 4 ರಿಂದ 5 ಪಬ್ಲಿಕ್ ಶಾಲೆ, ಜೊತೆಗೆ 101 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನದಲ್ಲಿ ಸಿ.ಎಸ್.ಆರ್ ಅನುದಾನದಡಿ ಸರ್ಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಆಧುನಿಕ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಕಾನ್ವೆಂಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೋಡಿ ರಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಿ ಭಾರತ ಅತ್ಯಂತ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿರುವ ದೇಶ. ಅಂದಿನ ಕಾಲದಲ್ಲಿ ಅಕ್ಷರ ಸಂಸ್ಕೃತಿ ಎಲ್ಲರಿಗೂ ಸಿಗುತ್ತಿರಲಿಲ್ಲ, ಅಂತಹ ಸಮಯದಲ್ಲಿದ್ದ ಅನೇಕ ಸಂಪ್ರದಾಯಗಳು ಹಾಗೂ ಮೂಡನಂಬಿಕೆಗಳನ್ನು ಹೋಗಲಾಡಿಸಲು ಸಮಾಜದಲ್ಲಿನ ಮಹಾನ್ ವ್ಯಕ್ತಿಗಳಾದ ಬುದ್ಧ, ಬಸವಣ್ಣ, ಜ್ಯೋತಿಭಾ ಫುಲೆ, ಸಾವಿತ್ರಿಬಾಯಿ ಫುಲೆ, ಡಾ.ಬಿ.ಆರ್ ಅಂಬೇಡ್ಕರ್ ಅವರು ಈ ರೀತಿಯ ಅನಿಷ್ಟ ಪದ್ಧತಿಗಳನ್ನು ದಿಕ್ಕರಿಸಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದರು.

ನಮ್ಮ ದೇಶವು ಮುನ್ನೆಲೆಗೆ ಬರಬೇಕೆಂದರೆ ಮೊದಲು ಶಿಕ್ಷಣ ಕ್ಷೇತ್ರದಲ್ಲಿ ಅಚ್ಚುಕಟ್ಟಾದ ಕೆಲಸ ಮಾಡಬೇಕು. ಆದ್ದರಿಂದ ಕಡ್ಡಾಯ ಶಿಕ್ಷಣ ನೀಡಬೇಕು ಎಂಬುದನ್ನು ಶಾಸನ ಬದ್ದವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ 45 ನೇ ವಿಧಿಯಲ್ಲಿ ಪರಿಚಯಿಸಿದರು. ಈ ರೀತಿಯ ಕಾನೂನುಗಳನ್ನು ಜಾರಿಗೆ ತಂದು ಮಹಿಳೆಯರಿಗೆ, ದಲಿತರಿಗೆ, ಕಾರ್ಮಿಕರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಶಿಕ್ಷಣ ಸಿಕ್ಕಂತಾಯಿತು.

ಹಾಗೇ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆ ಮಾಡಿದವರು, ಆದ್ದರಿಂದ ಸತತ ಎರಡು ಬಾರಿ ರಾಷ್ಟ್ರಪತಿಯಾಗಿ ಆಯ್ಕೆಯಾಗುತ್ತಾರೆ. ಆದ್ದರಿಂದ ಶಿಕ್ಷಕರು ಇವರ ಆದರ್ಶಗಳನ್ನು ಪಾಲನೆ ಮಾಡಬೇಕು. ಶಿಕ್ಷಕರ ದಿನಾಚರಣೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆಶಯಗಳಿಗೆ ನಿಜವಾದ ಅರ್ಥ ಸಿಗಬೇಕೆಂದರೆ ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿರುವ ಪೋಷಕರಿಗೆ ನಾವೆಲ್ಲರೂ ಸೇರಿ ಸರ್ಕಾರಿ ಶಾಲೆಗಳ ಮೇಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು.

ಕಳೆದ ಮೂರು ನಾಲ್ಕು ವರ್ಷಗಳಿಂದ ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಕುಸಿಯುತ್ತಿದೆ. ಎಷ್ಟೋ ಸರ್ಕಾರಿ ಶಾಲೆಯಲ್ಲಿ ಬೆರಳೆಣಿಕೆಯಷ್ಟು ಮಕ್ಕಳಿದ್ದರೆ, ಇನ್ನೂ ಕೆಲವು ಶಾಲೆಗಳಲ್ಲಿ ಒಂದನೇ ತರಗತಿಗೆ ಒಂದು ಮಗು ಕೂಡ ಇಲ್ಲದಂತಾಗಿದೆ.

ನಾವು ಮುಖ್ಯವಾಗಿ ಮಕ್ಕಳ ಕಲಿಯುವ ಕ್ರಮವನ್ನು ಅಧ್ಯಯನ ಮಾಡಿ ಬದಲಾಯಿಸಬೇಕು. ಈ ಕಾರ್ಯವನ್ನು ಕೇವಲ ಶಿಕ್ಷಕರು ಮಾತ್ರ ಮಾಡಬೇಕು. ನೀವು ಶಾಲೆಗೆ ಬರುವ ಮಕ್ಕಳನ್ನು ನಿಮ್ಮ ಮಕ್ಕಳು ಎಂಬ ಭಾವನೆಯಿಂದ ಶಿಕ್ಷಣವನ್ನು ಧಾರೆಯರಿಯಬೇಕು ಅದು ಒಂದಲ್ಲ ಒಂದು ದಿನ ಉತ್ತಮ ಫಲ ನೀಡುತ್ತದೆ, ಅಂದು ಮಕ್ಕಳು ನಿಮ್ಮನ್ನು ಪೂಜಿಸುತ್ತಾರೆ ಎಂದು ತಿಳಿಸಿದರು.

ಜಿಲ್ಲೆಯ 15 ಶಿಕ್ಷಕರಿಗೆ ಅತ್ಯುತ್ತಮ ಪ್ರಶಸ್ತಿ, ಒಬ್ಬರಿಗೆ ರಾಜ್ಯ ಪ್ರಶಸ್ತಿ, ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುನಾಥ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇ.ಒ ಶ್ರೀನಾಥ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರ ವೃಂದ, ಸಾರ್ವಜನಿಕರು ಭಾಗವಹಿಸಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]