ದೊಡ್ಡಬಳ್ಳಾಪುರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮದ್ದೂರಿನಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟ ಖಂಡಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ನಾಳೆ ಪ್ರತಿಭಟನೆಗೆ (Protest) ಕರೆ ನೀಡಲಾಗಿದೆ.
ಈ ಕುರಿತಂತೆ ಬಜರಂಗದಳ ಕೋಲಾರ ವಿಭಾಗ ಸಂಯೋಜಕ ನರೇಶ್ ರೆಡ್ಡಿ ಮಾಹಿತಿ ನೀಡಿದ್ದು, ಮದ್ದೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟ ಹಾಗೂ ಪ್ರತಿಭಟನೆ ವೇಳೆ ಹಿಂದೂಪರ ಕಾರ್ಯಕರ್ತರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಗುರುವಾರ ಬೆಳಗ್ಗೆ 11ಗಂಟೆಗೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ.
ಹಿಂದು ಪರ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ನರೇಶ್ ರೆಡ್ಡಿ ಮನವಿ ಮಾಡಿದ್ದಾರೆ.