ಬೆಂಗಳೂರು: ನಿರಂತರವಾಗಿ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.
ಇದುವರೆಗೂ ಪುನೀತ್ ಅವರು 14 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಸವನಗುಡಿ ಠಾಣೆಯ ಪೊಲೀಸರು ಬಿಎನ್‌ಎಸ್‌ಎಸ್ ಸೆಕ್ಷನ್ 127ರ ಅಡಿ ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಎದುರು ಹಾಜರು ಪಡಿಸಿದ್ದರು.
ಇನ್ನ ಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ದಂಡಾಧಿಕಾರಿಯವರು ಆರೋಪಿ ಪುನೀತ್‌ಗೆ ಸೂಚನೆ ನೀಡಿದರು. ಆದರೆ, ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆಂದು ವರದಿಯಾಗಿದೆ.