ಮದ್ದೂರು: ನಿನ್ನೆ ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ವಿಧಾನಪರಿಷತ್ ಸದಸ್ಯ ಸಿಟಿ ರವಿ (C.T. Ravi) ಅವರಿಗೆ ಸಂಕಷ್ಟ ಎದುರಾಗಿದೆ.
ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ನಡೆದ ಶೋಭಾಯಾತ್ರೆ ವೇಳೆ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬಿಜೆಪಿ MLC ಸಿ.ಟಿ ರವಿ ಬುಧವಾರ ಮದ್ದೂರಿನಲ್ಲಿ ಭಾಷಣ ವೇಳೆ ನಮಗೆ ತೊಡೆ ತಟ್ಟಲು ಬರಬೇಡಿ “ತೊಡೆ ಮುರಿತೀವಿ, ತಲೆನೂ ತೆಗೆತ್ತೇವೆ ಎಂದು ಹೇಳಿದ್ದರು. ಈ ಮಾತಿಗೆ ಆಕ್ಷೇಪ ವ್ಯಕ್ತವಾಗಿತ್ತು. ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು.
ಕಳೆದ ಭಾನುವಾರ ಸಂಜೆ ಮದ್ದೂರಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಪ್ರತಿಕ್ರಿಯೆಯಾಗಿ ಹಿಂದುತ್ವ ಸಂಘಟನೆಗಳು ಸಾಮೂಹಿಕ ಗಣೇಶ ವಿಸರ್ಜನೆ ಆಯೋಜಿಸಿದ್ದವು.