ನವದೆಹಲಿ: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ (C.P. Radhakrishnan) ಅವರು ದೇಶದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
President Droupadi Murmu administered the Oath of Office of Vice President of India to Shri C. P. Radhakrishnan at a Swearing-in-Ceremony held at Ganatantra Mandap, Rashtrapati Bhavan. The ceremony was attended by Prime Minister Shri Narendra Modi, former President of India Shri… pic.twitter.com/EcRgJe4gul
— President of India (@rashtrapatibhvn) September 12, 2025
ಅನುಮಾನಾಸ್ಪದವಾಗಿ ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್ ವಿಜೇತರಾಗಿದ್ದರು.
ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ 300 ಮತಗಳನ್ನು ಗಳಿಸಿದ್ದರು.