ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ.
ಮೃತ ಬಾಲಕಿ 17 ವರ್ಷದ ಅಪ್ರಾಪ್ತೆಯಾದ ಕಾರಣ ಹೆಸರು ಗೌಪ್ಯತೆ ಕಾಪಾಡಲಾಗಿದೆ.
ಮೃತರ ಪೋಷಕರು ಬಾಗೇಪಲ್ಲಿ ಮೂಲದವರಾಗಿದ್ದು, ಹಲವು ವರ್ಷಗಳ ಹಿಂದೆ ದೊಡ್ಡಬಳ್ಳಾಪುರಕ್ಕೆ ಬಂದು ಪಾಲನಜೋಗಿಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗೌರಿಬಿದನೂರಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೃತ ಬಾಲಕಿ, ಇಂದು ಕಾಲೇಜಿನಿಂದ ಬಂದವಳು ಮನೆಯಲ್ಲಿ ಯಾರು ಇರದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲವಾಗಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.