Crop damage due to rain; Nikhil Kumaraswamy demands compensation of ₹25,000 per acre

ಮಳೆಯಿಂದ ಬೆಳೆ ಹಾನಿ; ಒಂದು ಎಕರೆ ಪ್ರದೇಶಕ್ಕೆ ₹25 ಸಾವಿರ ಪರಿಹಾರಕ್ಕೆ ನಿಖಿಲ್ ಕುಮಾರಸ್ವಾಮಿ ಒತ್ತಾಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕೆಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಒತ್ತಾಯಿಸಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ

ಈ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಅಭಿವೃದ್ಧಿ ಮಾಡುವಲ್ಲಿ ಈ ಸರ್ಕಾರ ವಿಫಲವಾಗಿದೆ. ಘೋಷಿಸಿದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರದ ಖಜಾನೆಯಲ್ಲಿ ದುಡ್ಡ ಇದಿಯೋ, ಇಲ್ಲವೋ ಸರ್ಕಾರನೇ ಉತ್ತರಿಸಬೇಕೆಂದು ನಿಖಿಲ್ ಅವರು ಆಗ್ರಹಿಸಿದರು.

ಕೆಕೆಆರ್ ಡಿ ಬಿ ಯ ಕೆಲಸಗಳನ್ನು ಶೇ 30% ಗೆ ಲ್ಯಾಂಡರ್ಮಿಗೆ ಮಾರಿಕೊಂಡಿದ್ದಾರೆ. KKRDB ಇರೋದು ದುಡ್ಡು ಮಾಡಕ್ಕೆ. ಕಮಿಷ ನಡೆಯೋಕೆ. ಪರ್ಸೆಂಟೇಜ್ ರಾಜಕಾರಣಕ್ಕೆ ಇಟ್ಟಿರುವುದು. ಅಭಿವೃದ್ಧಿ ವಿಷಯ ಬಂದಾಗ ಕೆಕೆಆರ್ ಡಿಬಿ ಹೆಸರನ್ನು ಮುಂದೆ ಇಡುತ್ತಾರೆ ಎಂದು ಆರೋಪಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಕಲ್ಯಾಣ ಆಗ್ತಿಲ್ಲ, ರಸ್ತೆಗಳೆಲ್ಲ ಗುಂಡಿಗಳು ಬಿದ್ದಿವೆ

ಕಲ್ಬುರ್ಗಿ ನಗರದ ರಸ್ತೆಗಳೆಲ್ಲ ಗುಂಡಿಗಳು ಬಿದ್ದಿವೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5000 ಕೊಟ್ಟಿದೆ ಅಂತ ಹೇಳ್ತಾರೆ. ಕಲ್ಬುರ್ಗಿಯ ರಸ್ತೆಗಳನ್ನು ನಿರ್ಮಿಸುವುದನ್ನು ಬಿಡಿ. ಗುಂಡಿಗಳನ್ನು ಮುಚ್ಚುವ ಕೆಲಸ ಕಲ್ಬುರ್ಗಿಯಿಂದ ಆರಂಭಿಸಲಿ ಎಂದು ಸರ್ಕಾರ ವಿರುದ್ಧ ಗುಡುಗಿದರು.

ಇಡೀ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಸರ್ಕಾರಿ ಹಾಗೂ ಖಾಸಗಿ ಆಸ್ತಿ ಹಾಳು ಮಾಡಿದೆ. ಜನ ಜಾನುವಾರುಗಳ ಮೇವು ಕೂಡ ಪರಿಣಾಮ ಆಗಿದೆ.
ರೈತರ ಮೇಲೆ ಮಳೆ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಆಗಸ್ಟ್ ತಿಂಗಳಲ್ಲಿ ಬಾರಿ ಮಳೆ ಆಗಿದೆ. 1ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಉದ್ದು ಹೆಸರು ಮತ್ತಿತರ ಬೆಳೆಗಳು ಹಾಳಗಿದೆ ಎಂದು ತಿಳಿಸಿದರು.

ಈಗಾಗಲೇ ಸರ್ಕಾರಿಂದ ವರದಿ ಕೂಡ ಸಿದ್ದ ಮಾಡಿದ್ದಾರೆ. ಕಲಬುರಗಿ ಜಿಲ್ಲೆ ತೊಗರಿ ಕಣಜ.50 ಸಾವಿರ ಹೆಕ್ಟೇರ್ ಪ್ರದೇಶ ಸಂಪೂರ್ಣ ಹಾಳಾಗಿದೆ.
ರಾಜ್ಯದಲ್ಲಿ ಬೆಳೆ ಹಾನಿ ಪ್ರದೇಶದಲ್ಲಿ ಸಂತ್ರಸ್ತರ ಬೇಟಿ ಮಾಡುತ್ತಿದ್ದೆವೆ ನಮ್ಮ ಪಕ್ಷದಿಂದ ವರದಿ ತಯಾರು ಮಾಡುತ್ತೆವೆ. ಅದನ್ನ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.

ಕಲಬುರಗಿ ನಗರದ ಎಪಿಎಂಸಿಯಲ್ಲಿ ರೈತರ ಜೊತೆಗೆ ಸಂವಾದ ಮಾಡಿದ್ದೆ. ರೈತರ ಸಮಸ್ಯೆಗಳನ್ನು ಕುಮಾರಣ್ಣ ಮೂಲಕ ಕೇಂದ್ರದ ಗಮಕ್ಕೆ ತಂದಿದ್ದೇನೆ. ರೈತರು ಪ್ರತಿ ವರ್ಷ ಎರಡು ಮೂರು ಬೆಳೆ ಬೆಳೆಯಲು ಸಾಲಸೂಲ ಮಾಡುತ್ತಾನೆ. ಒಂದು ಎಕರೆಗೆ ಆರರಿಂದ ಎಂಟು ಕ್ಟಿಂಟಲ್ ಬೆಳೆ ಬೆಳೆಯುತ್ತಿದ್ದಾನೆ. ಆದರೂ ಅರ್ಧ ಕ್ವಿಂಟಲ್ ಬೆಳೆಯಲು ಸಾದ್ಯ ಆಗುತ್ತಿಲ್ಲ. ಎಕರೆಗೆ 25 ಸಾ ಪರಿಹಾರ ನೀಡಿ ಅಂತ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಸರ್ಕಾರ ನಡೆಸುವಂತವರು ಅತಿವೃಷ್ಟಿಯನ್ನ ಗಂಭೀರವಾಗಿ ಪರಿಗಣಿಸಬೇಕು. ಬಾರಿ ಪ್ರಮಾಣದ ಮಳೆ ಆಗಿದೆ ಇದು ರೈತರ ಮೇಲೆ ಪರಿಣಾಮ ಬೀರಿದೆ. ಇನ್ಸೂರೆನ್ಸ್ ಕಂಪನಿಗಳು ಏನ್ ಮಾಡುತ್ತಿವೆ ,ರಾಜ್ಯ ಸರ್ಕಾರ ಎಷ್ಟರ ಮಟ್ಟಿಗೆ ವೈಜ್ಞಾನಿಕವಾಗಿ ತಲುಪಿಸಲು ಹೊರಟಿದೆ ಎಂದು ಕಿಡಿಕಾರಿರದು.

ಬೆಳೆಹಾನಿ ಸಮೀಕ್ಷೆ ಮಾಡುವವರು ನಮ್ಮ ಹೊಲಗಳಿಗೆ ಬಂದಿಲ್ಲ ಎಂದು ರೈತರು ಆತಂಕದಲ್ಲಿ ಇದ್ದಾರೆ. ರಾಜ್ಯ ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೆನೆ. 100 ಕ್ಕೂ ಅಧಿಕ ಜಾನುವಾರುಗಳು ಸತ್ತಿವೆ ಜನರು ಸತ್ತಿದ್ದಾರೆ. ಸಿಎಂ ಅವರು ವಿಡಿಯೋ ಕಾಲ್ ಮೂಲಕ ಸಭೆ ಮಾಡಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಸಚಿವರಾ? ರಾಜ್ಯದ ಸಚಿವರಾ.?

ರಾಜ್ಯದ ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಸಚಿವರಾ ಅಥವಾ ರಾಜ್ಯದ ಸಚಿವರಾ.? ಇಷ್ಟು ಮಳೆ ಆದರು ಯಾವುದೇ ಪ್ರದೇಶಕ್ಕೆ ಭೇಟಿ ನೀಡಿಲ್ಲ. ರೈತರ ಸಂಕಷ್ಟದ ದಿನಗಳಲ್ಲಿ ಸರ್ಕಾರ ಯಾವ ರೀತಿ ನೆರವು ನೀಡುತ್ತದೆ ಎಂದು ಉತ್ತರ ಕೋಡಬೇಕು ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಎಕರೆಗೆ 25,000 ಸಾವಿರ ಪರಿಹಾರ ಸರ್ಕಾರ ನೀಡಬೇಕು. ಮುಂದಿನ ದಿನಗಳಲ್ಲಿ ರೈತರಿಗೆ ಬೀಜ ರಸಗೊಬ್ಬರ ನೀಡಬೇಕು. ರೈತರಿಗೆ ಉಳಿಸುವ ಕೆಲಸ ಸರ್ಕಾರ ಮಾಡಬೇಕು. ಕೇಂದ್ರದ NDRF ಪ್ರಕಾರ ಹೆಕ್ಟೇರ್ ಗೆ 6 ಸಾವಿರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕುಮಾರಣ್ಣವರು ಕೂಡ ರೈತರ ಜೊತೆಗೆ ದೂರವಾಣಿ ಮೂಲಕ ಕರೆ ಮಾಡಿ ಭರವಸೆ ನೀಡಿದ್ದಾರೆ. ರೈತರಿಗೆ ಕೇಂದ್ರದಿಂದ ಪರಿಹಾರ ಕೋಡಿಸುವ ಭರವಸೆ ನೀಡಿದ್ದಾರೆ. ತುಂಬಾಕು ಬೆಳೆಯನ್ನು ಕುಮಾರಸ್ವಾಮಿಯವರ ಗಮನಕ್ಕೆ ತಂದು ಖರೀದಿ ಮಾಡಿಸಲಾಗಿತ್ತು ಅದೇ ರೀತಿ ಈ ಭಾಗದ ರೈತರ ಪರ ಕೆಲಸ ಮಾಡುತ್ತೆನೆ ಅವರು ರೈತರಿಗೆ ಭರವಸೆ ನೀಡಿದ್ದಾರೆ.

ರೈತರ ವಿಷಯಕ್ಕೆ ಬಂದಾಗ ರಾಜಕೀಯ ಮಾಡಲ್ಲ

ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ರೈತರು ಕುಮಾರಣ್ಣ ರೈತ ಸಾಲ ಮನ್ನಾ ವಿಚಾರ ಸ್ಮರಿಸಿದ್ದಾರೆ. 14 ತಿಂಗಳ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಾಲ ಮನ್ನಾ ಮಾಡಿದ್ದಾರೆ. ರೈತರ ವಿಷಯಕ್ಕೆ ಬಂದಾಗ ರಾಜಕೀಯ ಮಾಡಲ್ಲ. ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಕೆಕೆಆರ್ ಡಿಬಿ ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಇದೆ.

ಅಭಿವೃದ್ಧಿಗೆಂತ 5000 ಕೋಟಿ ಹಣ ಮೀಸಲು ಇಡುತ್ತಾರೆ ಆದ್ರೆ ರಸ್ತೆ ದುರಸ್ತಿ ಮಾಡಲು ಆಗುತ್ತಿಲ್ಲ. ಯಾವುದೇ ಕಾರಣಕ್ಕೂ ಜೆಡಿಎಸ್ ರೈತರ ವಿಚಾರದಲ್ಲಿ ಹಿಂದೆ ಸರಿಯಲ್ಲ. ರೈತರ ಜೊತೆಯಲ್ಲಿ ನಿಂತು ಹೋರಾಟ ಮಾಡುತ್ತೆವೆ.

ಈ ಸಂದರ್ಭದಲ್ಲಿ ದೊಡ್ಡಪ್ಪಗೌಡ ನರಿಬೋಳ್, ಬಾಲರಾಜ್ ಗುತ್ತೇದಾರ್, ಶಿವಕುಮಾರ್ ನಾಟಿಕರ್, ಕೃಷ್ಣಾರೆಡ್ಡಿ, ಸೇರಿದಂತೆ ಜಿಲ್ಲೆಯ ಪ್ರಮುಖರು ಜೊತೆಯಲ್ಲಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!