ಹಿಂದುಳಿದ ವರ್ಗಗಳ ಸಮೀಕ್ಷೆಗೆ ಸಹಕರಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Cooperate in the survey of backward classes: Deputy Commissioner A.B. Basavaraju

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2025 ನಮ್ಮ ಸಮೀಕ್ಷೆ (Survey) ನಮ್ಮ ಜವಬ್ದಾರಿ ಎಂಬ ಮನೆ ಮನೆ ಸಮೀಕ್ಷೆ ಇದೇ ತಿಂಗಳು ಅಂದರೆ ಸೆಪ್ಟೆಂಬರ್ 22ನೇ ತಾರೀಖಿನಿಂದ ಪ್ರಾರಂಭವಾಗಿ ಅಕ್ಟೋಬರ್ 7 ರವರೆಗೆ ನಡೆಯಲಿದ್ದು ಈ ಸಮೀಕ್ಷೆಗೆ ಜನರು ಸೂಕ್ತ ಮಾಹಿತಿ ನೀಡಿ ಸಹಕರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು (A.B. Basavaraju) ತಿಳಿಸಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆಯಲಿರುವ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕುರಿತು ಜಿಲ್ಲೆಯ ಸಮುದಾಯ ಮುಖಂಡರುಗಳು ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳಿಗೆ ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು

ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು ಸಮೀಕ್ಷೆ ಕಾರ್ಯವನ್ನು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದ ಮೇಲೆ ಸಮೀಕ್ಷಾದಾರರು ಸಮೀಕ್ಷೆ ಮಾಡುವುದರಿಂದ ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ನೀವು ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆದಾರ್ ಕಾರ್ಡಿನ ಸಂಖ್ಯೆ ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ ಸಿದ್ದ ಮಾಡಿ ಇಟ್ಟುಕೊಂಡಿದ್ದರೆ ಸಮೀಕ್ಷೆ ಸುಲಭವಾಗುತ್ತದೆ ಮತ್ತು ವೇಗವಾಗುತ್ತದೆ. ಜೊತೆಗೆ ಕುಟುಂಬದ ಎಲ್ಲಾ ಸದಸ್ಯರಗಳ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಓಟಿಪಿ ಬರುವುದರಿಂದ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿದೆ ಎಂಬುದನ್ನು ಖಚಿತ ತಪಡಿಸಿಕೊಳ್ಳಿ ಎಂದರು.

ಸಮೀಕ್ಷೆ ಸಂಧರ್ಭದಲ್ಲಿ ಅವರ ಮನೆಯಲ್ಲಿ ಇಲ್ಲದಿದ್ದರೆ ಆ ಸಂಧರ್ಭದಲ್ಲಿ ಮನೆಯಲ್ಲಿ ಇರುವ ಸದಸ್ಯರು ಮನೆಯಲ್ಲಿ ಇಲ್ಲದಿರುವ ಸದಸ್ಯರಿಗೆ ಫೋನ್ ಮಾಡಿ ಒಟಿಪಿ ಪಡೆದು ಮಾಹಿತಿ ನೀಡಬೇಕಾಗುತ್ತದೆ. ಆಧಾರ್ ಕಾರ್ಡ್ ಇದ್ದು ಲಿಂಕ್ ಆಗಿರುವ ಮೊಬೈಲ್ ಫೋನ್ ನಂಬರ್ ಇಲ್ಲದಿದ್ದರೆ ಹತ್ತಿರದ ಆಧಾರ್ ಎನ್ರೊಲ್ ಮೆಂಟ್ ಸೆಂಟರ್ ಗೆ ಭೇಟಿ ನೀಡಿ ಈಗ ಬಳಸುತ್ತಿರುವ ಮೊಬೈಲ್ ನಂಬರ್ ಗೆ ಲಿಂಕ್ ಮಾಡಿಸಿಕೊಳ್ಳಿ ಎಂದರು

ಮಾಹಿತಿ ಅಗತ್ಯವಿದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಕರೆ ಮಾಡಿ ಅಥವಾ ವೆಬ್ಸೈಟ್ https://kscbc.karnataka.gov.in ಮೂಲಕ ಮಾಹಿತಿ ಪಡೆಯಬಹುದು .

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್ ಅನುರಾಧ ಅವರು ಮಾತಾನಾಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ನೀತಿ ನಿರೂಪಣೆಯನ್ನು ಕೈಗೊಳ್ಳುಲು ಆಧಾರವಾಗಿರುತ್ತದೆ. ಸಮೀಕ್ಷೆ ಕಾರ್ಯವೂ ಸೇವೆಯ ಒಂದು ಭಾಗವಾಗಿದೆ. ಈ ಕಾರ್ಯವನ್ನು ಅನುಷ್ಟಾನವಾಗುವಂತೆ ಮಾಡುವುದು ನಮ್ಮ ನಿಮ್ಮೆಲ್ಲರ ಜವಬ್ದಾರಿ ಎಂದರು.

ಪ್ರಶ್ನಾವಳಿಯಲ್ಲಿ ಪ್ರತಿ ಸದಸ್ಯರ ವಿದ್ಯಾರ್ಹತೆ, ಕೌಶಲ್ಯ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮುಂತಾದ ವಿಷಯಗಳು ಸೇರಿದಂತೆ ಎಲ್ಲಾ ಪ್ರಶ್ನೆಗಳಿಗೂ ಕುಟುಂಬದ ಸದಸ್ಯರು ಸರಿಯಾದ ಮಾಹಿತಿ ನೀಡಬೇಕು ಎಂದರು.

ಕಾರ್ಯಗಾರದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಜಯ ಶ್ರೀ ಯಂಡೆಗಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮಾ, ಸಾಂಕಿಕ ಇಲಾಖೆಯ ಉಪ ನಿರ್ದೇಶಕರಾದ ಲಕ್ಷ್ಮೀ ಕಾಂತ್ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು ಮತ್ತು ಸಮುದಾಯ ಮುಖಂಡರುಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]