ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿನ ಬೀದಿನಾಟಕ/ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲು ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾಡು ಮತ್ತು ನಾಟಕ ವಿಭಾಗ / ಕನ್ನಡ ಮತ್ತು ಸಂಸ್ಕೃತಿ ಇಲಾಖೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಣಿ / ಆಯ್ಕೆ ಆಗಿರುವ ಕಲಾ ತಂಡಗಳನ್ನು ಮಾತ್ರ ಪರಿಗಣಿಸಲಾಗುವುದು.
ಪ್ರತಿ ಬೀದಿ ನಾಟಕ/ಜಾನಪದ ಸಂಗೀತ ಕಲಾ ತಂಡದಲ್ಲಿ 8 ಜನ ಕಲಾವಿದರು ಮತ್ತು ಅದರಲ್ಲಿ ಕಡ್ಡಾಯವಾಗಿ ಕನಿಷ್ಟ ಇಬ್ಬರು ಮಹಿಳಾ ಕಲಾವಿದರನ್ನು ಒಳಗೊಂಡಿರಬೇಕು.
ಕಾರ್ಯಕ್ರಮಗಳನ್ನು ನೀಡುವ ಮುಂಚೆ ಜಿಲ್ಲೆಯಲ್ಲಿ ಕಲಾ ತಂಡಗಳನ್ನು ಆಯ್ಕೆ ಮಾಡಲು ಸಮಿತಿಯ ಸದಸ್ಯರುಗಳ ನೇತೃತ್ವದಲ್ಲಿ ಸಭೆ ನಡೆಸಿ ಸಭೆಯಲ್ಲಿ ಪ್ರಾತ್ಯಕ್ಷಿಕೆ (ಡೆಮೊ) ನೀಡಿದ ಕಲಾ ತಂಡಗಳನ್ನು ಆಯ್ಕೆ ಮಾಡಿದ ಕಲಾ ತಂಡಗಳಿಗೆ ಮಾತ್ರ ಕಾರ್ಯಕ್ರಮಗಳನ್ನು ನೀಡಲಾಗುವುದು.
ಆಸಕ್ತ ಕಲಾ ತಂಡಗಳು ಸೆಪ್ಟೆಂಬರ್ 25 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಐ.ಇ.ಸಿ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ. 207, 2ನೇ ಮಹಡಿ, ಜಿಲ್ಲಾಢಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಐ.ಇ.ಸಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.