A defamation suit is inevitable if the news is distorted; D.K. Sivakumar Warning

ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ: ವಿಪಕ್ಷಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು.

100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ

“ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. “ಬಗರ್ ಹುಕುಂ ಸೇರಿದಂತೆ, ಭೂ ಸುಧಾರಣಾ ಕಾಯ್ದೆಯಡಿ ಮಂಜೂರಾತಿಗೆ ಬಾಕಿ ಇರುವ ಭೂಮಿಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ದೇವರು ಅವಕಾಶ ಮಾತ್ರ ಕೊಡುತ್ತಾನೆ. ಸಿಕ್ಕಂತಹ ಅವಕಾಶವನ್ನು ಬಳಸಿಕೊಂಡು ಬಡ ಜನರ ಏಳಿಗೆ ಮಾಡದಿದ್ದರೆ ಅಧಿಕಾರವಿದ್ದು ಏನು ಲಾಭ? ಕನಕಪುರದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಮಹಿಳೆಯರ ಹೆಸರಿಗೆ ಈ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ನಾನು ಸುಮಾರು 8 ಸಾವಿರ ಮಂದಿಗೆ ಬಗರ್ ಹುಕುಂ ಜಮೀನು ನೀಡಿದ್ದೇನೆ. ಈಗ ಡಿ.ಕೆ.ಸುರೇಶ್ ಅವರಿಗೆ ಈ ಸಮಿತಿಯ ಜವಾಬ್ದಾರಿ ನೀಡಲಾಗಿದೆ.” ಎಂದರು.

“ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು, ಬಡವರಿಗೆ ನಿವೇಶನ ಹಂಚಲು ಆಗಲಿಲ್ಲ. ಹೀಗಿದ್ದ ಮೇಲೆ ರಾಜಕಾರಣ ಏಕೆ ಮಾಡಬೇಕು? ರಾಜಕೀಯ ಮಾಡುವ ಅವಕಾಶವನ್ನೇ ಜನತಾದಳದವರು ಕಳೆದುಕೊಂಡಿದ್ದಾರೆ” ಎಂದರು.

“ಮಾಜಿ ಸಚಿವ ಅಶ್ವಥ ನಾರಾಯಣ ಅವರು ಜಿಲ್ಲೆಗೆ ಬಂದಿದ್ದರು. ವೀರಾಧಿವೀರ ಗಂಡು. ಯಾರಾದರೂ ಗಂಡಸರು ಇದ್ದೀರಾ? ಎಂದು ಪ್ರಶ್ನಿಸಿದ್ದರು. ಅವರಿಗೂ ಸಹ ಒಂದೇ ಒಂದು ನಿವೇಶನ ಹಂಚಲು ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಒಬ್ಬರಿಗೂ ಸಹಾಯ ಮಾಡಲು ಆಗಲಿಲ್ಲ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಜಿಬಿಎ ತೆಗೆದು ಹಾಕುವುದಾಗಿ ಯಾರೋ ಬಿಜೆಪಿ ನಾಯಕರು ಇತ್ತೀಚೆಗೆ ಹೇಳಿದ್ದಾರಂತೆ. ಮಿಸ್ಟರ್ ಅಶೋಕ್, ಅಶ್ವಥ ನಾರಾಯಣ, ಜನತಾ ದಳದ ನಾಯಕರೇ ನಿಮ್ಮ ಯಾರ ಹಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಬರೆದಿಲ್ಲ. ಅಶೋಕಣ್ಣಾ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಲು 2028 ಕ್ಕೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಈ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ನೀವು ಇನ್ನು ಅಧಿಕಾರ ಮರೆತುಬಿಡಿ” ಎಂದರು ವ್ಯಂಗ್ಯವಾಡಿದರು.

ಬಸವಣ್ಣನವರ ಕಾಲದಲ್ಲಿ ವಚಮ ಚಳುವಳಿಯ ನೇತೃತ್ವ ವಹಿಸಿದ್ದ ಹಿಂದುಳಿದ ವರ್ಗಕ್ಕೆ ಸೇರಿದ ಅಲ್ಲಮ ಪ್ರಭು ಅವರು ʼಕೊಟ್ಟ ಕುದುರೆಯನ್ನು ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನನ್ನೂ ಮಾಡದವರು ಇನ್ನೆಂದೂ ಕೆಲಸ ಮಾಡಲೂ ಸಾಧ್ಯವಿಲ್ಲ” ಎಂದು ಕುಟುಕಿದರು.

“ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಸರ್ಕಾರ ನೀಡಿದ ಯೋಜನೆಗಳನ್ನು ಹಾಗೂ ಜನರಿಗೆ ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ ದಾಖಲೆಯಿದ್ದರೆ ನೀಡಬೇಕು. ಫಲಾನುಭವಿಗಳು ಯಾರಾದರೂ ಇದ್ದರೆ, ಕೈ ಎತ್ತಿ ತಿಳಿಸಿ” ಎಂದರು.

ಜಾತಿ ಹೆಸರು ಸರಿಯಾಗಿ ನಮೂದಿಸಿ

“ಈ ದೇಶದ ಬಡವರು, ಹಿಂದುಳಿದ ವರ್ಗದವರ ಪರವಾಗಿ ಕೆಲಸ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಓಬಿಸಿಗಳ ಏಳಿಗೆಗಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ನಿಮ್ಮ ಜಾತಿಯನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಬರೆಸಬೇಕು. ನೀವು ಸರಿಯಾಗಿ ನಿಮ್ಮ ಜಾತಿ ನಮೂದಿಸದಿದ್ದರೆ ಇಡೀ ಸಮಾಜಕ್ಕೆ ಅನ್ಯಾಯ ಎಸಗಿದಂತೆ, ಆತ್ಮಸಾಕ್ಷಿಗೆ ಮೋಸ ಮಾಡಿದಂತೆ” ಎಂದರು.

“ನಮ್ಮನ್ನು ಟೀಕೆ ಮಾಡಿದ ವಿರೋಧ ಪಕ್ಷಗಳು ಈಗ ನಮ್ಮನ್ನೇ ಅನುಕರಣೆ ಮಾಡುತ್ತಿವೆ. ಹರಿಯಾಣ, ಮಹಾರಾಷ್ಟ್ರ, ಗೋವಾ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಬದುಕಿನ ಮೇಲೆ ನಾವು ರಾಜಕಾರಣ ಮಾಡುವ ನಾವು ಕಳೆದ ಎರಡು ವರ್ಷದಲ್ಲಿ ಸುಮಾರು 1 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಖಾತೆಗೆ ಹಾಕಿದ್ದೇವೆ. ಮಹಿಳೆಯರು ಸಂಸಾರವನ್ನು ತೂಗಿಸುತ್ತಾರೆ ಎಂದು ಅವರಿಗೆ ಹೆಚ್ಚು ಪ್ರಯೋಜನ ನೀಡಲಾಗಿದೆ. ಅವರು ಮಕ್ಕಳ ಭವಿಷ್ಯಕ್ಕೆ ಗ್ಯಾರಂಟಿ ಯೋಜನೆಗಳ ಹಣ ಬಳಕೆ ಮಾಡುತ್ತಾರೆ ಎಂಬುದು ನಮ್ಮ ಆಲೋಚನೆ” ಎಂದರು.

“ಆಧಾರ್ ಕಾರ್ಡ್, ಪಿಂಚಣಿ, ಉಳುವವನೆ ಭೂಮಿಯ ಒಡೆಯ ಸೇರಿದಂತೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಒಂದೇ ಒಂದು ಯೋಜನೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಆಗಿಲ್ಲ. ನಮ್ಮ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಮರು ಜನ್ಮವೆತ್ತಿ ಬಂದರೂ ದಳ ಹಾಗೂ ಬಿಜೆಪಿಯವರು ನಿಲ್ಲಿಸಲು, ಬದಲಾವಣೆ ಮಾಡಲು ಆಗುವುದಿಲ್ಲ. ಈ ಮಾತನ್ನು ದೇವರಾಜ ಅರಸು ಅವರ ಭಾವಚಿತ್ರದ ಮುಂದೆ ಹೇಳುತ್ತಿದ್ದೇನೆ” ಎಂದರು.

“ಜನರ ಬದುಕು ಬದಲಾವಣೆ ಮಾಡುವಂತಹ ಕಾರ್ಯಕ್ರಮಗಳನ್ನು ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ್ದರು. ಬಡವರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದವರು ದೇವರಾಜ ಅರಸು ಅವರು. ಸಾಮಾಜಿಕ ನ್ಯಾಯ ನೀಡಿದವರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ತಂದರು. ವೃದ್ದಾಪ್ಯ ವೇತನ ನೀಡುವುದನ್ನು ರಾಜ್ಯದಲ್ಲಿ ಜಾರಿಗೆ ತಂದರು. ವಿಧವಾ ಪಿಂಚಣಿ, ಬಡವರಿಗೆ ನಿವೇಶನಗಳನ್ನು ನೀಡಲಾಯಿತು. ಹೀಗೆ ಇಲ್ಲದವರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಯಿತು. ಬಗರ್ ಹುಕುಂ ಸಾಗುವಳಿ ಭೂಮಿ ನೀಡುವ ಕೆಲಸವೂ ಆಯಿತು. ರಾಮನಗರದಲ್ಲಿ ಶಾಸಕರಾಗಿದ್ದ ಸಿ.ಎಂ. ಲಿಂಗಪ್ಪ ಅವರು ನೂರಾರು ಜನರಿಗೆ ಭೂಮಿ ಹಂಚಿಕೆ ಮಾಡಿದರು. ಈ ಜಿಲ್ಲೆಯವರಾದ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ನಿರ್ಮಿಸಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ” ಎಂದರು.

“ದೇವರಾಜ ಅರಸು ಅವರು ರಾಜಮನೆತನಕ್ಕೆ ಸೇರಿದವರು. ಆದರೆ ಬಡವರ ಪರವಾಗಿ ಕೆಲಸ ಮಾಡಿದರು. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮುದಾಯ ಎನ್ನದೇ ಸಕಲ ಹಿಂದುಳಿದ ಸಮುದಾಯಗಳ ಪರವಾಗಿ ನಿಂತು ಕೆಲಸ ಮಾಡಿದವರು ಅರಸು ಅವರು” ಎಂದರು.

“ವಿದ್ಯಾರ್ಥಿ ನಾಯಕನಾಗಿದ್ದಾಗ ಬಂಗಾರಪ್ಪ ಅವರ ಗರಡಿಯಲ್ಲಿ ಬೆಳೆದ ವ್ಯಕ್ತಿ ನಾನು. ಕಲ್ಲಿನ ಕ್ವಾರಿ ಕೆಲಸ ನೋಡಲು ಜಿಲ್ಲೆಗೆ ಬಂದಿದ್ದೆ. ಆಗ ನನಗೆ ದೂರವಾಣಿ ಕರೆ ಬಂತು. ತಕ್ಷಣ ಬೆಂಗಳೂರಿಗೆ ಹೊರಡಲು ಹೇಳಲಾಯಿತು. ಆಗ ನನಗೆ ತಿಳಿಯಿತು ಅವರ ಸಂಪುಟದಲ್ಲಿ ಸಚಿವಸ್ಥಾನ ನೀಡಿದ್ದಾರೆ ಎಂದು. ಒಬ್ಬ ಹಿಂದುಳಿದ ವರ್ಗದ ನಾಯಕ ಬಂಗಾರಪ್ಪ ಅವರು ಈ ಶಿವಕುಮಾರ್ ನನ್ನು ಬೆಳೆಸಿದರು. ಅವರ ಋಣ ತೀರಿಸಬೇಕು ಎಂದು ಅವರ ಮಗ ಮಧು ಬಂಗಾರಪ್ಪ ಅವರನ್ನು ದಳದಿಂದ ಕರೆತಂದು ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವ ಸ್ಥಾನ ನೀಡಲಾಗಿದೆ” ಎಂದರು.

ರಾಜಕೀಯ

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ಬೆಂ.ಗ್ರಾ ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್

[ccc_my_favorite_select_button post_id="115398"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!