ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ್ ಸಮಸ್ಯೆ ಬಗೆಹರಿಸುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ

DCM D.K. Shivakumar has taken responsibility to resolve the problem; H.D. Kumaraswamy

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ (D.K. Shivakumar) ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು.

ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ? ಹಾಗಾದರೆ ಇವರು ಕಾಂತರಾಜ್ ವರದಿಯನ್ನೇ ಭಟ್ಟಿ ಇಳಿಸುತ್ತಾರ? ಇಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪರೇಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ. ಈ ಸರ್ಕಾರ ಬೆಂಕಿ ಹಚ್ಚಲು ಏನ್ ಬೇಕೋ ಅದನ್ನು ಮಾಡಿದೆ. ಇದರ ಪ್ರತಿಪ್ರಲ ಮುಂದೆ ಗೊತ್ತಾಗುತ್ತದೆ. ವಾಸ್ತವಾಂಶದ ಬಗ್ಗೆ ಮಾತ್ರ ಚರ್ಚೆ ಆಗಬೇಕು ಎಂದು ಅವರು ಕಿಡಿಕಾರಿದರು.

ಜಾತಿ ವಿಚಾರದಲ್ಲಿ ಒಕ್ಕಲಿಗರಿಗೆ ದೊಡ್ಡಮಟ್ಟದ ಪೆಟ್ಟು ಬಿದ್ದಿದೆ. ಬೆಂಗಳೂರಿನಲ್ಲಿ ಹೆಚ್ಚು ಭೂಮಿಯನ್ನು ಕಳೆದುಕೊಂಡಿದ್ದು ಒಕ್ಕಲಿಗರ ಸಮಾಜ. ಡಿ.ಕೆ ಶಿವಕುಮಾರ್ ಎಲ್ಲಾ ಸಮಸ್ಯೆ ಬಗೆಹರಿಸಲು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮುಂದೆ ನೋಡೋಣ, ಏನಾಗುತ್ತದೆ ಅಂತ. ಇದು ಇನ್ನೊಂದು ಕಾಂತರಾಜ್ ವರದಿ ಅಲ್ಲ, ಅದಕ್ಕಿಂತಲೂ ಕೆಟ್ಟದಾಗಿ ಇರುತ್ತದೆ ಎಂದು ದೂರಿದರು ಕೇಂದ್ರ ಸಚಿವರು.

ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ವರದಿ ಕೊಡಬೇಕು ಅಂತ ಮೂರನೇ ಆಯೋಗ ರಚನೆ ಮಾಡಿದೆ. ಮಧುಸೂದನ್ ನಾಯ್ಕ್ ಆಯೋಗ ರಚನೆ ಆಗಿದೆ. ಕೇವಲ ಹದಿನೈದು ದಿನಗಳಲ್ಲಿ ವರದಿ ಕೊಡಬೇಕು ಅಂತೆ. ಆಯೋಗ ಸ್ಟ್ಯಾಚುಟರಿ ಬಾಡಿ, ಹೀಗಾಗಿ ನಾನು ಏನು ಡೈರೆಕ್ಷನ್ ಕೊಡಲು ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಏನಾದರೂ ಬದಲಾವಣೆ ತರಲು ಪವರ್ ಇಲ್ಲ ಅಂತಾರೆ ಎಂದ ಕುಮಾರಸ್ವಾಮಿ ಅವರು; ನಮ್ಮ ಸಮಾಜದ ಭವಿಷ್ಯಕ್ಕಾಗಿ ಹಾಗೂ ಸಮಾಜಕ್ಕೆ ಆದ ಅನ್ಯಾಯದ ಬಗ್ಗೆ ಧ್ವನಿ ಎತ್ತುವ ಸಲುವಾಗಿ ಸಭೆ ಮಾಡಿದ್ದೇವೆ. ಸ್ವಾಮೀಜಿಗಳ ಸೂಚನೆ ಮೇರೆಗೆ ಇಲ್ಲಿ ಸೇರಿದ್ದೇವೆ ಎಂದರು.

ಕ್ರಿಶ್ಚಿಯನ್ ಒಕ್ಕಲಿಗ ಜಾತಿಯನ್ನು ಹೇಗೆ ತೆಗೆಯುತ್ತಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; ಸಮಯದ ಅಭಾವ ಇದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು,ಈಗ ಏನಿದೆ ಅದನ್ನೇ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೊಬ್ಬ ಮಂತ್ರಿ ಹೇಳಿದ್ದಾರೆ, ಈಗಿನ ಆಯೋಗ ಉತ್ತಮವಾದ ಆಯೋಗವಂತೆ. ಒಳ್ಳೆಯ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ನಾನು ಆ ಮಂತ್ರಿಯನ್ನು ಕೇಳಲು ಬಯಸುತ್ತೇನೆ, ಇದು ಸತ್ಯದ ಆಯೋಗವೇ? ರಾಜ್ಯ ನೆಮ್ಮದಿಯಾಗಿ ಇದೆ. ಈ ಆಯೋಗ ಬೆಂಕಿ ಹಚ್ಚುವ ಕೆಲಸ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ಮುಂಜಾಗ್ರತೆ ಕ್ರಮವಾಗಿ ಯಾವುದೇ ಆಲೋಚನೆ ಮಾಡಿಲ್ಲ ಎಂದು ಕೇಂದ್ರ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಮಯ ಮುಂದೂಡುವುದು ಮುಖ್ಯವಲ್ಲ. ವಾಸ್ತವಾಂಶದ ಪರಿಹಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಬೆಂಗಳೂರು ನಗರದ ಅಭಿವೃದ್ಧಿ ಬಗ್ಗೆ ಪದೇ ಪದೇ ಚರ್ಚೆ ಮಾಡುತ್ತೇವೆ. ಬೆಂಗಳೂರು ನಗರದ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗಾಗಿ ಎಷ್ಟು ರೈತರ ಭೂಮಿ ಬಳಕೆ ಆಗಿದೆ, ಅದರಲ್ಲಿ ಬಹುಪಾಲು ಭೂಮಿ ಕಳೆದುಕೊಂಡವರು ಒಕ್ಕಲಿಗರು. ಈಗಲೂ ಗ್ರೇಟರ್ ಬೆಂಗಳೂರು ಹೆಸರಲ್ಲಿ ನಡೆಯುತ್ತಿದೆ ಭೂಮಿಯನ್ನು ಕಿತ್ತುಕೊಳ್ಳುವುದು ನಡೆಯುತ್ತಿದೆ ಎಂದರು ಅವರು.

ಏರ್ ಪೋರ್ಟ್ ಮಾಡುವುದಕ್ಕೆ 50 ಸಾವಿರ ಎಕರೆ ಭೂಮಿ ಬೇಕು. ಇದಕ್ಕೆ ಯಾವ ಸಮಾಜದ ಜಮೀನು ಜಾಸ್ತಿ ಹೋಗುತ್ತಿದೆ? ಬೇರೆ ಸಮಾಜಗಳ ಜನರ ಭೂಮಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಹೋಗಿರಬಹುದು. ಆದರೆ ಹೆಚ್ಚಿನ ಭೂಮಿ ಕಳೆದುಕೊಂಡಿದ್ದು ಒಕ್ಕಲಿಗರು. ಜಮೀನು ಮಾರಿ ಯಾವುದೋ ಒಂದು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆಲ್ಲ ಏನ್ ಕೊಟ್ಡಿದ್ದಾರೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ನಡೆ ನೋಡಿದರೆ ಇದು ಕಾಂತರಾಜ್ ವರದಿಗಿಂತಲೂ ಕೆಟ್ಟದಾಗಿ ಇರುತ್ತದೆ. ಈ ಬಗ್ಗೆ ಯಾವ ಸಂಶಯವೂ ಬೇಡ ಎಂದು ಅವರು ಕಳವಳ ವ್ಯಕ್ತಪಡಿಸಿದರು.

331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಂಡಿತು ನಿಖಿಲ್ ಕುಮಾರಸ್ವಾಮಿ ಕೆಂಡ

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮಾತನಾಡಿ, ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿ ಗುರುತಿಸಿ ತಯಾರಿಸುವ ಜಾತಿಗಣತಿಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಇದು ಅವೈಜ್ಞಾನಿಕವಾಗಿ ತಯಾರಿಸಿರುವ ವರದಿ ಆಗಿದ್ದು, ವಿರೋಧಿಸುತ್ತೇವೆ’ ಎಂದು ಹೇಳಿದರು.

ಸಮಾಜ ಸಮಾಜ ಜೊತೆ ಸಂಘರ್ಷ ತರಲು ರಾಜ್ಯ ಸರ್ಕಾರ ಹೊರಟಿದೆ. 331 ಹೊಸ ಜಾತಿ ಎಲ್ಲಿ ಹುಟ್ಟಿಕೊಂಡಿದೆ ಗೊತ್ತಿಲ್ಲ ಎಂದು ಜಾತಿ ಸಮೀಕ್ಷೆ ಬಗ್ಗೆ ವ್ಯಂಗ್ಯವಾಡಿದರು.

ಕುಮಾರಣ್ಣನವರು ಕಾಂತರಾಜು ವರದಿಯನ್ನ ರಿಜೆಕ್ಟ್ ಮಾಡ್ತಾರೇ, ಮಧೂಸುದನ್ ಅಧ್ಯಕ್ಷರಾದ 15 ದಿನದಲ್ಲಿ 2 ಕೋಟಿ ಜನರ ಮಾಹಿತಿ ಕಲೆ ಹಾಕಲು ಸಾಧ್ಯವಾ.? ಎಂದು ಪ್ರಶ್ನಿಸಿದರು.

ಜಾತಿ ಸಮೀಕ್ಷೆಗಳು ಆಗಬೇಕಾಗಿರೋದು ಕಟ್ಟಕಡೆಯ ವ್ಯಕ್ತಿ ಮೇಲೆತ್ತಲು ಮಾಡಬೇಕು. ಆರ್ಥಿಕ ಮತ್ತು ಸಾಮಾಜಿಕವಾಗಿ ನ್ಯಾಯವಾದಿಸುವ ನಿಟ್ಟಿನಲ್ಲಿ ಈ ಸಮೀಕ್ಷೆಗಳು ಆಗುವದರಲ್ಲಿ ನಮ್ಮ ಸ್ವಾಗತ ಇದೆ. ಆದರೆ ಇದರ ಹಿಂದೆ ದುರುದ್ದೇಶಗಳನ್ನು ಇಟ್ಟುಕೊಂಡು ಒಂದು ಸಮುದಾಯವನ್ನು ಮೇಲೆತ್ತಿಕೊಳ್ಳುವುದಕ್ಕೆ. ಇನ್ನೊಂದು ಪ್ರಬಲ ಸಮುದಾಯದ ನಂಬರ್ ಗಳನ್ನು ಮುಂದಿಟ್ಟು ಸಮಾಜ ಸಮಾಜಗಳ ನಡುವೆ ಸಂಘರ್ಷ ಉಂಟು ಮಾಡುವುದಕ್ಕೆ ಸರ್ಕಾರ ಮುಂದಾಗಬಾರದು ಎಂದು ಹೇಳಿದರು.

ಇಲ್ಲಿ 331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಳ್ಳುತ್ತೋ ಗೊತ್ತಿಲ್ಲ. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ಮಾಡಿಕೊಂಡು 180 ಕೋಟಿ ಖರ್ಚು ಮಾಡಿದರು, ಈಗ ಮಧುಸೂದನ್ ಅವರ ಅಧ್ಯಕ್ಷತೆಯಲ್ಲಿ ಹೊಸ ಆಯೋಗವನ್ನು ರಚಿಸಿ 15 ದಿನದಲ್ಲಿ 2 ಕೋಟಿ ಜನರ ಮಾಹಿತಿ ಕಲೆ ಹಾಕಲು ಸಾಧ್ಯವಾ..,? ಇಂದು ಕಿಡಿಕಾರಿದರು.

10 ವರ್ಷದಲ್ಲಿ ಆಗದೆ ಇರುವಂತಹ ಜಾತಿ ಸಮೀಕ್ಷೆ ಹೀಗ್ಯಾಕೆ.? ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡೋದಕ್ಕೆ ಅಧಿಕಾರವಿದೆ. ಆದರೆ ಅಂತಿಮವಾಗಿ ಕೇಂದ್ರ ಸರ್ಕಾರ ಜಾತಿ ಗಣತಿ ಕಾಲಂ ನನ್ನ ಸೇರಿಸಿದ್ದಾರೆ. ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಇಡೀ ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಜಾತಿಗಣತಿ ವಿಚಾರದಲ್ಲಿ ಸರ್ಕಾರ ಆಗಾಗ ಕೆಲವೊಂದಿಷ್ಟು ಹೆಜ್ಜೆಗಳನ್ನ ಇಡುವುದನ್ನು ನೋಡಿದ್ದೇವೆ.ಈ ಹಿಂದೆಯೂ ಕೂಡ ಇದೇ ರೀತಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತ ಪಕ್ಷದ ಮಂತ್ರಿಗಳಲ್ಲೇ ಅಪಸ್ವರ, ಭಿನ್ನಾಭಿಪ್ರಾಯ ಇರುವುದನ್ನ ನೋಡಿದ್ದೇವೆ ಎಂದು ಹೇಳಿದರು.

ಜಾತಿಗಣತಿ ಎಲ್ಲಾ ಸಮುದಾಯದಲ್ಲಿ ಗೊಂದಲದ ವಾತಾವರಣ ಸೃಷ್ಟಿ ಮಾಡಿದೆ. ಈ ನೆಲೆಯಲ್ಲಿ ಪರಮ ಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಸರ್ವ ಪಕ್ಷದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ ಶ್ರೀ ಸ್ಫಟಿಕಪುರಿ ಮಠದ ಶ್ರೀ ನಂಜಾವಾಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್, ಸಚಿವರಾದ ಚಲುವರಾಯಸ್ವಾಮಿ, ಸುಧಾಕರ್, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಡಿಸಿಎಂ ಅಶ್ವಥ್ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಇನ್ನಿತರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]