Working women to get one day of paid leave per month..!

ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕಿನ ನಕ್ಷೆ ಮಾಡುವ ಕಾರ್ಯವನ್ನು ಮಾಡಿ ಮುಗಿಸಿದ್ದೇವೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ ರಸ್ತೆಗಳನ್ನು ನಕ್ಷೆಗಳಲ್ಲಿ ನಮೂದಿಸಿದ್ದು, ಗಣತಿದಾರರು ಸಮೀಕ್ಷೆ (Socio-educational survey) ಮಾಡಬೇಕಾದ ಮನೆಯನ್ನು ತಲುಪಲು ಅನುಕೂಲವಾಗುವಂತೆ ಮಾಡಿದ್ದೇವೆ ಎಂದು ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್. ನಾಯ್ಕ್ ಅವರು ತಿಳಿಸಿದರು.

ವಸಂತನಗರದ ದೇವರಾಜು ಅರಸು ಭವನದಲ್ಲಿ ಆಯೋಜಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದ ಸಮಸ್ತ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಗಣತಿ ಸಮೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ.

ಒಬ್ಬ ಸಮೀಕ್ಷಕರಿಗೆ ಸುಮಾರು 140 ರಿಂದ 150 ಮನೆಗಳನ್ನು ಹೊಂದಿರುವ ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಮನೆಗಳ ಸಮೀಕ್ಷಾ ಕಾರ್ಯವನ್ನು ಅವರಿಗೆ ವಹಿಸಿಕೊಡಲಾಗಿದೆ. ಸುಮಾರು 2 ಲಕ್ಷ ಶಿಕ್ಷಕರು ಹಾಗೂ ಇತರ ಸಿಬ್ಬಂದಿಗಳು ಸಮೀಕ್ಷೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಲಿದ್ದು, ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ಮಾಡಲಿದ್ದಾರೆ.

ಒಬ್ಬ ಸಮೀಕ್ಷಕರು ಒಂದು ದಿನಕ್ಕೆ ಅಂದಾಜು 7 ರಿಂದ 8 ಮನೆಗಳನ್ನು ಸಮೀಕ್ಷೆ ಮಾಡಿದಲ್ಲಿ ರಾಜ್ಯಾದ್ಯಂತ ಇರುವ ಸುಮಾರು ಎರಡು ಕೋಟಿ ಕುಟುಂಬಗಳ ಮಾಹಿತಿಯನ್ನು 16 ದಿನಗಳಲ್ಲಿ ಮೊಬೈಲ್ ಆಪ್‌ನಲ್ಲಿ ಸಂಗ್ರಹಿಸಬಹುದಾಗಿದೆ.
ಸಮೀಕ್ಷೆಯಲ್ಲಿ ಕುಟುಂಬಗಳ ದತ್ತಾಂಶಗಳನ್ನು ವಿಶೇಷ ತಂತ್ರಾಂಶ ಹೊಂದಿರುವ ಮೊಬೈಲ್ ಆಪ್ ಮೂಲಕ ಸಂಗ್ರಹಿಸಲಾಗುತ್ತದೆ.

ಸಮೀಕ್ಷಾ ಕಾರ್ಯಕ್ಕಾಗಿ ಸಮೀಕ್ಷಾದಾರರಿಗೆ ಮತ್ತು ಮೇಲ್ವಿಚಾರಕರಿಗೆ ಅಗತ್ಯ ಪ್ರಮಾಣದ ತರಬೇತಿಯನ್ನು ನೀಡಲಾಗಿದೆ. ಸಮೀಕ್ಷಾ ನಮೂನೆಯಲ್ಲಿ ಒಟ್ಟು 60 ಪ್ರಶ್ನೆಗಳ ಕಾಲಂ ಗಳಿದ್ದು ಮಾಹಿತಿಯನ್ನು ಸಂಗ್ರಹಿಸಲಾಗುವುದು. ನಾಗರಿಕರು ಒಂದಕ್ಕಿಂತ ಹೆಚ್ಚು ಬಾರಿ ಸಮೀಕ್ಷೆಗೆ ಒಳಪಡುವುದನ್ನು ತಪ್ಪಿಸಲು ಆಧಾರ್ ಸಂಖ್ಯೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಆರು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರೂ ಆಧಾ‌ರ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಳ್ಳಲು ವಿನಂತಿಸಲಾಗಿದೆ. ಕುಟುಂಬದ ಬಳಿ ರೇಷನ್ ಕಾರ್ಡ್ ಇದ್ದಲ್ಲಿ ಅದರ ಸಂಖ್ಯೆಯನ್ನು ನಮೂದಿಸಿದರೆ ಅದರಲ್ಲಿ ಇರುವ ಮಾಹಿತಿಯು ಸ್ವಯಂಚಾಲಿತವಾಗಿ (auto populated) ಪ್ರದರ್ಶಿತವಾಗುತ್ತದೆ. ಇದರಿಂದ ಸಮಯ ಉಳಿತಾಯವಾಗುತ್ತದೆ ಮತ್ತು ಪರಿಶೀಲನೆಯ ನಂತರ ಸಮೀಕ್ಷೆ ಮುಂದುವರಿಯುತ್ತದೆ.

ಕೆಲಸದ ಮೇಲೆ ಹೊರಗೆ ಹೋಗಿರುವವರ ಮಾಹಿತಿಯನ್ನು ಪಡೆಯುವ ದೃಷ್ಠಿಯಿಂದ ಆಧಾರ್ ಪರಿಶೀಲನೆ ಮೂಲಕ ಆನ್‌ಲೈನ್‌ನಲ್ಲಿ ಸಮೀಕ್ಷೆ ನಡೆಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಅದರ ಮಾಹಿತಿಯನ್ನು ವೆಬ್ ಸೈಟ್ ವಿಳಾಸ https://kscbc.karnataka.gov.in ರಲ್ಲಿ ಪಡೆಯಬಹುದಾಗಿದೆ. ಹಾಗೂ ಏನಾದರೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಸಹಾಯವಾಣಿ ಸಂಖ್ಯೆ 8050770004
ಸಂಪರ್ಕಿಸಬಹುದಾಗಿದೆ.

ಕೆಲವು ಅನಗತ್ಯ ವಿವಾದಗಳನ್ನು ಪರಿಹರಿಸಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಜಾತಿಗಳನ್ನು ಸೃಷ್ಟಿಸುವ ಕೆಲಸವನ್ನು ಆಯೋಗ ಮಾಡಿರುವುದಿಲ್ಲ. ಹಿಂದಿನ ವರ್ಷಗಳಲ್ಲಿ ಅಸ್ತಿತ್ವದಲ್ಲಿ ಇವೆ ಎಂದು ಹೇಳಲಾದ ಜಾತಿಗಳನ್ನು ಸಮೀಕ್ಷಾದಾರರ ಅನುಕೂಲಕ್ಕಾಗಿ ಮೊಬೈಲ್ ಆಪ್‌ನ ಡ್ರಾಪ್ ಡೌನ್‌ನಲ್ಲಿ ಪಟ್ಟಿಮಾಡಿ ಒದಗಿಸಲಾಗಿದೆ. ಇದು ಸಮೀಕ್ಷಾದಾರರ ಆಂತರಿಕ ಬಳಕೆಗೆ ಮಾತ್ರ ಇರುತ್ತದೆ. ಇದು ಸಾರ್ವಜನಿಕ ದಾಖಲೆ ಅಲ್ಲ, ಈ ಪಟ್ಟಿಗೆ ಯಾವುದೇ ಕಾನೂನು ಮಾನ್ಯತೆಯೂ ಇಲ್ಲ. ಜಾತಿಗಳನ್ನು ಸುಲಭವಾಗಿ ಗುರುತಿಸುವ ಉದ್ದೇಶದಿಂದ ಉಪಯೋಗಿಸಲಾಗುತ್ತದೆಯೇ ಹೊರತು ಯಾರೂ ಅದನ್ನು ಬೇರೆ ಉದ್ದೇಶಕ್ಕೆ ಬಳಸಲು ಸಾಧ್ಯವಿರುವುದಿಲ್ಲ ಎಂದು ತಿಳಿಸಿದರು.

ಸಮೀಕ್ಷೆ ಮುಗಿದ ನಂತರ ಸಂಗ್ರಹಿಸಲಾದ ಮಾಹಿತಿಗಳನ್ನು ಆಯೋಗವು ವಿಶ್ಲೇಷಿಸುತ್ತದೆ. ವೈಜ್ಞಾನಿಕ ವಿಶ್ಲೇಷಣೆಯ ನಂತರ ಮಾತ್ರ ವಿವಿಧ ಜಾತಿ ಜನಾಂಗಗಳಿಗೆ ಒದಗಿಸಬಹುದಾದ ಅನುಕೂಲತೆಗಳ ಬಗ್ಗೆ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ತಪ್ಪು ಸಂದೇಶ ಹಬ್ಬಿದ ಕಾರಣ ಆಯೋಗವು ಜನರ ಆತಂಕಗಳನ್ನು ಪರಿಗಣಿಸಿ ಈ ಕ್ರಮ ಕೈಗೊಂಡಿರುತ್ತದೆ. ಧರ್ಮ ಹಾಗೂ ಜಾತಿ,ಉಪಜಾತಿ ಆಯ್ಕೆ ಕುಟುಂಬದ ನಿರ್ಧಾರ, ಕುಟುಂಬದ ಸದಸ್ಯರು ಏನು ತಿಳಿಸುತ್ತಾರೋ ಅದನ್ನು ದಾಖಲಿಸಲು ಕಾಲಮ್ ನೀಡಲಾಗಿದೆ. ಸಮೀಕ್ಷಕರು ಬಳಸುವ ಪ್ರಾಪ್‌ಡೌನ್ ಆಯ್ಕೆ ವ್ಯವಸ್ಥೆಯಲ್ಲಿ ನಾಗರಿಕರಿಗೆ ಗೊಂದಲಕ್ಕೆ ಒಳಗಾಗಿರುವ ಕೆಲವು ಜಾತಿಗಳ ಹೆಸರನ್ನು ಪಟ್ಟಿಯಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. ಈ ವ್ಯವಸ್ಥೆಯಿಂದ ಯಾವುದೇ ಜಾತಿಯ ಹೆಸರನ್ನು
ಸ್ವ -ಇಚ್ಛೆಯಿಂದ ನಮೂದಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆಯ ಸಮಯದಲ್ಲಿ KYC ನಡೆಸುವಲ್ಲಿ ಎದುರಾಗುತ್ತಿದ್ದ ಅಡಚಣೆಗಳನ್ನು ಕೂಡ ಪರಿಹರಿಸಲು ಮುಖ ಚಹರೆ ಗುರುತಿಸುವ (Face recognition) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಸಾರ್ವಜನಿಕರ ಸಂಪೂರ್ಣ ಸಹಕಾರದೊಂದಿಗೆ ನಿಗದಿತ ಅವಧಿಯೊಳಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಆಯೋಗವು ಹೊಂದಿದೆ ಎಂದು ತಿಳಿಸಿದರು.

ಈ ವೇಳೆ ಹಿಂದುಳಿದ ವರ್ಗದ ಇಲಾಖೆಯ ಆಯುಕ್ತರೂ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ ಅವರು ಉಪಸ್ಥಿತರಿದ್ದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!