ಬೆಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ ಅನ್ವಯಿಕೆ ಹೊಂದಿರುವ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಬೆಂಗಳೂರು ನಗರ ವಿಶ್ವವಿದ್ಯಾಲಯ (Bangalore University) ಮತ್ತು ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನ ಭಾರತಿ)ಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ), ಉನ್ನತ ಶಿಕ್ಷಣ ಇಲಾಖೆಯ ಶಶಿಕಲಾ ಅವರು ಆದೇಶಿಸಿದ್ದಾರೆ.
ಈ ಆದೇಶದ ಅನ್ವಯ ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಮ ನಿರ್ದೇಶಿತ ಸದಸ್ಯರನ್ನಾಗಿ ಕಿರಣ್ ಹೆಚ್.ಎಸ್ ಸೇರಿದಂತೆ 7 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಅಲ್ಲದೆ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನ ಭಾರತಿ)ಗೆ 6 ಮಂದಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ
ಬೆಂಗಳೂರು ವಿಶ್ವವಿದ್ಯಾಲಯ ನಾಮನಿರ್ದೇಶಕ ಸದಸ್ಯರಾಗಿ ಆಯ್ಕೆಯಾಗಿರುವ ಕಿರಣ್ ಹೆಚ್.ಎಸ್ (Kiran H.S) ಅವರಿಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ಪ್ರಧಾನ ಕಾರ್ಯದರ್ಶಿ ಶಿವರಾಜ್, ತಾಲೂಕು ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ, ಕಸಬಾ ಬ್ಲಾಕ್ ಅಧ್ಯಕ್ಷ ಜಯಸಿಂಹ, ದೊಡ್ಡಬಳ್ಳಾಪುರ ತಾಲೂಕು ಎನ್‌ಎಸ್‌ಯುಐ ಅಧ್ಯಕ್ಷ ಅಶ್ವಥ್ ರೆಡ್ಡಿ ಶುಭಕೋರಿದ್ದಾರೆ.