ಗಣಿಗಾರಿಕೆ ಓವರ್ ಲೋಡ್ ವಾಹನಗಳ ವಿರುದ್ಧ ದಂಡ ವಿಧಿಸಿರುವ ಮಾಹಿತಿ ನೀಡಿ : ಶೋಭಾ ಕರಂದ್ಲಾಜೆ

Provide information on fines imposed against mining-laden vehicles: Shobha Karandlaje

ಬೆಂಗಳೂರು: ನಿಗದಿಗಿಂತ ಅಧಿಕ ಪ್ರಮಾಣದಲ್ಲಿ ಜಲ್ಲಿ, ಸೈಜುಗಲ್ಲು, ಮರಳು ಮತ್ತು ಎಂ.ಸ್ಯಾಂಡ್ ಸಾಗಿಸುವ ವಾಹನಗಳ ವಿರುದ್ಧ ಕೈಗೊಂಡಿರುವ ಕ್ರಮ ಹಾಗೂ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರಿಗಳ ಕರ್ತವ್ಯ ಲೋಪದಿಂದಾಗಿ ಸರ್ಕಾರಕ್ಕೆ ಸಂದಾಯವಾಗಬೇಕಿದ್ದ ರಾಜಸ್ವ ಬರುತ್ತಿಲ್ಲ. ನಿಯಮ ಉಲ್ಲಂಘಿಸಿದ ಲಾರಿಗಳಿಗೆ ಜಿಲ್ಲಾಧಿಕಾರಿಗಳು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ. ಆದರೆ, ಅಧಿಕಾರಿಗಳು ದಂಡ ವಸೂಲಿ ಮಾಡಲು ಮೀನಾಮೇಷ ಎಣಿಸುತ್ತಿದ್ದಾರೆ. ಇನ್ನೂ ಮುಂದೆ ಮಿತಿಮೀರಿ ಲೋಡ್ ಸಾಗಿಸುವ ವಾಹನಗಳಿಗೆ ಮುಲಾಜಿಲ್ಲದೆ ದಂಡ ಹಾಕಬೇಕು. ಆದಾಯ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕ್ರೀಡಾ ಇಲಾಖೆಯ ಅಧಿಕಾರಿಗಳು ‘ಖೇಲೋ ಇಂಡಿಯಾ’ಕ್ಕೆ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕು. ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಅದಕ್ಕೆ ತಕ್ಕಂತೆ ಇಲಾಖೆಯ ಅಧಿಕಾರಿಗಳು ಕೆಲಸ ಮಾಡಬೇಕು.

ತನ್ಮೂಲಕ ಮುಂದಿನ ದಿನಗಳಲ್ಲಿ ‘ಖೇಲೋ ಇಂಡಿಯಾ’ ಕ್ರೀಡಾಕೂಟಕ್ಕೆ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿದ್ದು, ಕೆಲವೆಡೆ ಕಾಮಗಾರಿ ನಡೆಸದೆ ಗುತ್ತಿಗೆದಾರರು ಬಿಲ್ ಪಡೆದಿರುವ ಬಗ್ಗೆ ದೂರುಗಳು ಬಂದಿವೆ. ಸಾಕಷ್ಟು ಮನೆಗಳಿಗೆ ನಲ್ಲಿ ಸಂಪರ್ಕವನ್ನೇ ಕಲ್ಪಿಸದಿರುವುದು ಕಂಡುಬಂದಿದ್ದು, ಅಂತಹ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅವರು ತಿಳಿಸಿದರು.

ಮಹದೇವಪುರ ಕ್ಷೇತ್ರ ಹಾಗೂ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಉದ್ಘಾಟನೆಗಳಿಗೆ ಲೋಕಸಭಾ ಸದಸ್ಯರನ್ನು ಆಹ್ವಾನ ಮಾಡುವಂತೆ ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಹಾಯಕ ಕಾರ್ಯಪಾಲ ಇಂಜನಿಯರ್ ರವರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವಂತಹ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಪಾದರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ ನಿಗದಿಪಡಿಸಿದ ಮೆನು ಚಾರ್ಟ್ ಪ್ರಕಾರ ಆಹಾರವನ್ನು ವಿತರಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಮಾತನಾಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 44 ಮೆಟ್ರಿಕ್ ನಂತರದ ಮತ್ತು 13 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 7 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ನಿಗದಿಪಿಡಿಸಿರುವ ಮೆನು ಚಾರ್ಟ್ ಪ್ರಕಾರ ಆಹಾರವನ್ನು ನೀಡಲಾಗುತ್ತಿದೆ . ಅಲ್ಲದೇ, ವಿದ್ಯಾರ್ಥಿ ನಿಲಯಗಳಲ್ಲಿ ಟೇಸ್ಟ್ ರಿಜಿಸ್ಟರ್ ನ್ನು ನಿರ್ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯತೀಶ್.ಆರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]