ಬೆಂಗಳೂರು: ಪದ್ಮಭೂಷಣ ಪುರಸ್ಕೃತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (S.LM Bhyrappa ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧವಿಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಕಳೆದ ಕೆಲದಿನಗಳಿಂದ ವಯಸೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಎಲ್ ಭೈರಪ್ಪ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.
ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ( Cmsiddaramaiah), ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda), ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿದ್ದಾರೆ.
ಪ್ರಧಾನಿ ಮೋದಿ: ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ.
ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು… pic.twitter.com/yAWYGxx4GI
— Narendra Modi (@narendramodi) September 24, 2025
ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ: ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
— Siddaramaiah (@siddaramaiah) September 24, 2025
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. pic.twitter.com/D3y4Ep2H8J
ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್: ಇಹದ “ಯಾನ” ಅಂತ್ಯ. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ.
ಇಹದ "ಯಾನ" ಅಂತ್ಯ..
— DK Shivakumar (@DKShivakumar) September 24, 2025
ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ… pic.twitter.com/lJ4LC7cNXk
ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ: ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ.ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು.
ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ.
https://x.com/H_D_Devegowda/status/1970792745720766843?t=5JTP898Uaelvpb1allwq2Q&s=08
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ‘ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು.
'ಪರ್ವ' ಮತ್ತು 'ಉತ್ತರಕಾಂಡ' ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 24, 2025
ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ… pic.twitter.com/YLKodAUCug
ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ: ಕನ್ನಡ ಸಾಹಿತ್ಯಕ್ಕೆ ವಿಶ್ವಮಾನ್ಯತೆ ತಂದು ಕೊಡುವ ಮೂಲಕ ರಾಷ್ಟ್ರ ಹಿತಾಸಕ್ತಿಯ ವಿಚಾರಗಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ನಾಡಿನ ಮಹಾನ್ ಚೇತನ, ಸರಸ್ವತಿ ಸಮ್ಮಾನ್ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್. ಭೈರಪ್ಪ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.
ಕನ್ನಡ ಸಾಹಿತ್ಯಕ್ಕೆ ವಿಶ್ವಮಾನ್ಯತೆ ತಂದು ಕೊಡುವ ಮೂಲಕ ರಾಷ್ಟ್ರ ಹಿತಾಸಕ್ತಿಯ ವಿಚಾರಗಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ನಾಡಿನ ಮಹಾನ್ ಚೇತನ, ಸರಸ್ವತಿ ಸಮ್ಮಾನ್ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್. ಭೈರಪ್ಪ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.
— Vijayendra Yediyurappa (@BYVijayendra) September 24, 2025
ತಮ್ಮ ಸಾಹಿತ್ಯದ ಮೂಲಕ ಸಾಮಾನ್ಯ ಓದುಗರನ್ನೂ ಆಕರ್ಷಿಸುವ… pic.twitter.com/q5a5owZ17z
ತಮ್ಮ ಸಾಹಿತ್ಯದ ಮೂಲಕ ಸಾಮಾನ್ಯ ಓದುಗರನ್ನೂ ಆಕರ್ಷಿಸುವ ಕಾದಂಬರಿಗಳನ್ನು ರಚಿಸಿ ಅಸಂಖ್ಯಾತ ಓದುಗರನ್ನು ಹೊಂದಿದ್ದ, ಹಲವು ಭಾಷೆಗಳಿಗೆ ಅನುವಾದಗೊಂಡು ಜಗತ್ತಿನಾದ್ಯಂತ ಸಾಹಿತ್ಯಾಭಿಮಾನಿಗಳನ್ನು ಹೊಂದಿದ್ದ ಕರುನಾಡಿನ ಹೆಮ್ಮೆ ಎಸ್.ಎಲ್.ಭೈರಪ್ಪನವರು ಈ ನೆಲದ ಸೊಬಗು ಹಾಗೂ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿ ಕನ್ನಡಿಗರ ಹೆಗ್ಗಳಿಕೆಯಾಗಿದ್ದರು.
ಸಾಮಾಜಿಕ ಬದಲಾವಣೆ ಹಾಗೂ ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವ ಹಾಗೂ ಅಸ್ತಿತ್ವ ಉಳಿಸುವ ಬದ್ಧತೆಯನ್ನು ತಮ್ಮ ಸಂಶೋಧನಾತ್ಮಕ ಕಾದಂಬರಿಗಳ ಮೂಲಕ ಸಾಕ್ಷೀಕರಿಸಿದ್ದರು. ಸಾಹಿತ್ಯಲೋಕದಲ್ಲಿ ಭೈರಪ್ಪನವರಿಗೆ ಭೈರಪ್ಪನವರೇ ಸಾಟಿಯಾಗಿ ನಿಲ್ಲಬಲ್ಲ ವ್ಯಕ್ತಿತ್ವ ಹಾಗೂ ಪ್ರತಿಭೆ ಅವರದ್ದಾಗಿತ್ತು. ರಾಷ್ಟ್ರೀಯ ಚಿಂತನೆ ಅವರ ಆದ್ಯತೆಯಾಗಿದ್ದರೆ, ಕನ್ನಡ ನಾಡು, ನುಡಿ, ಜನರ ಪರವಾದ ಚಿಂತನೆ ಅವರ ಬದ್ಧತೆಯಾಗಿತ್ತು.
ಕನ್ನಡ ಸಾಹಿತ್ಯ ಲೋಕದ ಅತ್ಯಂತ ಸೃಜನಶೀಲ ಕಾದಂಬರಿಕಾರರಾಗಿ ಪದ್ಮಭೂಷಣ ಗೌರವಕ್ಕೂ ಪಾತ್ರರಾಗಿದ್ದ ಮಾನ್ಯ ಎಸ್.ಎಲ್.ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗ ಹಾಗೂ ಕೋಟ್ಯಂತರ ಕನ್ನಡ ಸಾಹಿತ್ಯಾಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ: ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಒಂದು ಅನರ್ಘ್ಯ ರತ್ನವನ್ನು ಕಳೆದುಕೊಂಡಿದೆ.
ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಒಂದು ಅನರ್ಘ್ಯ ರತ್ನವನ್ನು ಕಳೆದುಕೊಂಡಿದೆ.
— R. Ashoka (@RAshokaBJP) September 24, 2025
ತಮ್ಮ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದ ಭೈರಪ್ಪನವರು, ಕನ್ನಡ ಮಾತ್ರವಲ್ಲದೆ ತಮ್ಮ ಅನುವಾದಿತ ಕೃತಿಗಳು ಮೂಲಕ ಭಾರತಾದ್ಯಂತ… pic.twitter.com/VSPU8zoPcR
ತಮ್ಮ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದ ಭೈರಪ್ಪನವರು, ಕನ್ನಡ ಮಾತ್ರವಲ್ಲದೆ ತಮ್ಮ ಅನುವಾದಿತ ಕೃತಿಗಳು ಮೂಲಕ ಭಾರತಾದ್ಯಂತ ಅನೇಕ ಭಾಷೆಗಳಲ್ಲಿ ಅಸಂಖ್ಯಾತ ಓದುಗ ಬಳಗವನ್ನು ಸಂಪಾದಿಸಿದ್ದರು.
ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬಕ್ಕೆ, ಅಸಂಖ್ಯಾತ ಓದುಗ ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.