ಕುಂದು ಕೊರತೆ ಸಭೆ ಪೊಲೀಸ್ ಠಾಣೆ ಬದಲು ಸಾರ್ವಜನಿಕರ ಬಳಿಗೆ: ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ

Grievances meeting to be held with the public: District Police Superintendent C.K. Baba

ಬೆಂ.ಗ್ರಾ.ಜಿಲ್ಲೆ: ಮನೆ ಮನೆಗೆ ಪೋಲಿಸ್ (Police) ಅಭಿಯಾನದ ಜೊತೆಯಲ್ಲಿ ಇದೀಗ ಮನೆ-ಮನೆಗೆ ಸರ್ಕಾರ ಎಂಬ ಅಭಿಯಾನವನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ 2013 ರ ಸಮಿತಿ ಸಭೆ, ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆ ಮನೆಗೆ ಕಾರ್ಯಾಂಗ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ. ಜೊತೆಗೆ ನಿಮ್ಮ ಸಮಸ್ಯೆಯನ್ನು ಅವರಿಗೆ ಕ್ಷಣಾರ್ಧದಲ್ಲಿ ತಿಳಿಸಬಹುದು. ಇದರಿಂದ ಅಧಿಕಾರಿಗಳನ್ನು ಹುಡುಕಿಕೊಂಡು ಕಚೇರಿಗಳಿಗೆ ಸುತ್ತುವುದು ತಪ್ಪುತ್ತದೆ ನಿಮ್ಮ ಸಮಸ್ಯೆಗೆ ಬೇಗನೆ ಪರಿಹಾರ ಸಿಗುತ್ತದೆ ಎಂದರು.

ಮನೆ ಮನೆಗೆ ಸರ್ಕಾರ ಅಭಿಯಾನದಡಿ ಸರ್ಕಾರದ ಕಾರ್ಯಾಂಗ ವೈಖರಿ ಸಾರ್ವಜನಿಕರಿಗೆ ಇನ್ನಷ್ಟು ಹತ್ತಿರ ವಾಗಬೇಕು ಎಂಬ ಉದ್ದೇಶ. ಆರಂಭಿಕ ಹಂತದಲ್ಲಿ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಲಾಗಿದ್ದು ಕಾರ್ಯಾರಂಭ ಮಾಡಲಾಗುತ್ತದೆ ಎಂದರು.

13 ದೌರ್ಜನ್ಯ ಪ್ರಕರಣ ದಾಖಲು

ಜುಲೈ 1 ರಿಂದ ಇಲ್ಲಿಯವರೆಗೂ ಒಟ್ಟು 13 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 13 ಪ್ರಕರಣಗಳಲ್ಲಿ ನೊಂದ 44 ಸಂತ್ರಸ್ತರಿಗೆ ಒಟ್ಟು 22.30 ಲಕ್ಷ ರೂ.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ನೀಡಿ

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿ ಮಾಡಿ ಪಾವತಿಯಲ್ಲಿ ವಿಳಂಬವಾದರೆ ಕ್ರಮ ವಹಿಸಲಾಗುವುದು. ಅವರಿಗೆ ಸಿಗಬೇಕಾದಂತಹ ನಿವೇಶನ, ಮನೆ ಒದಗಿಸಬೇಕು, ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ. ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು

ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಜೊತೆಗೆ ಆರೋಗ್ಯ ಕಾಳಜಿ ಮುಖ್ಯ, ಕೆಲಸದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಕೈ-ಕಾಲಿಗೆ ಗ್ಲೌಸ್, ರಕ್ಷಣಾತ್ಮಕ ಬಟ್ಟೆ ಧರಿಸುವುದರ ಬಗ್ಗೆ ಅರಿವಿರುವುದಿಲ್ಲ. ಪ್ರತಿ ತಿಂಗಳು ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ ಹಾಗೂ ಕೆಲಸದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಗಾರ ಏರ್ಪಡಿಸಿ ಜಾಗೃತಿ ಮೂಡಿಸಿ ಎಂದು ಆರೋಗ್ಯ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತಾನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಒಂದು ಕ್ಯೂಆರ್ ಕೋಡ್ ಅಂಟಿಸಲಾಗಿದೆ ನೀವು ಅದನ್ನು ಸ್ಕ್ಯಾನ್ ಮಾಡಿ ಅದರಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆಯಬಹುದು ಮತ್ತು ಕೆಲವು ಬಾರಿ ಪೊಲೀಸ್ ಅಧಿಕಾರಿಗಳು ದೂರು ತೆಗೆದುಕೊಳ್ಳುವುದಿಲ್ಲ ಎಂಬ ಮಾತು ಕೇಳಿ ಬರುತ್ತವೆ ಅದಕ್ಕಾಗಿ ನೀವು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಅದರಲ್ಲಿ ಜಿಲ್ಲೆಯ ಎಲ್ಲಾ ಪೋಲಿಸ್ ಅಧಿಕಾರಿಗಳನ್ನು ಸಂಪರ್ಕಿಸಲು ದೂರವಾಣಿ ಸಂಖ್ಯೆ ಸಿಗುತ್ತದೆ. ನೀವು ಅದರ ಮೂಲಕ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

ಇನ್ನೂ ಮುಂದೆ ಕುಂದು ಕೊರತೆ ಸಭೆಗಳನ್ನು ಠಾಣಾ ವ್ಯಾಪ್ತಿಯಲ್ಲಿ ನಡೆಸುವುದಿಲ್ಲ ನಾವೇ ನಿಮ್ಮ ಬಳಿ ಬಂದು ಸಭೆಯನ್ನು ನಡೆಸುತ್ತೇವೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಡಿವೈಎಸ್ಪಿ ರವಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]