ಸೆ.26 ರಿಂದ ಕಾವೇರಿ ಆರತಿ.. ಭರ್ಜರಿ ಸಿದ್ಧತೆ: Video ನೋಡಿ

Cauvery Aarti from September 26

ಮೈಸೂರು; “ರೈತರ ಒಳಿತಿಗಾಗಿ ಕಾವೇರಿ ಮಾತೆಯನ್ನು ಪೂಜಿಸಿ, ಪಾರ್ಥಿಸುವ ಕಾವೇರಿ ಆರತಿ (Cauvery Aarti) ಕಾರ್ಯಕ್ರಮಕ್ಕೆ ರೈತರ ವಿರೋಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಸ್ಪಷ್ಟಪಡಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಈ ರೀತಿ ಉತ್ತರಿಸಿದರು.

ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು ಕೇಳಿದಾಗ, “ರೈತರ ವಿರೋಧ ಇದೆ ಎಂದು ಯಾರು ಹೇಳಿದರು? ಪೂಜೆ ಮಾಡಲು ಯಾರಾದರೂ ವಿರೋಧ ಮಾಡುತ್ತಾರಾ? ನೀವು ವಿರೋಧ ಮಾಡಬಹುದು” ಎಂದು ತಿಳಿಸಿದರು.

“ಕೆಆರ್ ಎಸ್ ನಲ್ಲಿ ಈ ಬಾರಿ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಿದ್ದೇನೆ. ನಾವು ದೊಡ್ಡದಾಗಿ ಮಾಡಬೇಕು ಎಂದುಕೊಂಡಿದ್ದ ಜಾಗದಲ್ಲಿ ಈ ಬಾರಿ ಕಾರ್ಯಕ್ರಮ ಮಾಡುತ್ತಿಲ್ಲ” ಎಂದು ತಿಳಿಸಿದರು.

ನೇರ, ನಿಷ್ಠುರ ನಡೆಯ ಕ್ರಾಂತಿಕಾರಿ ಸಾಹಿತಿ ಎಸ್.ಎಲ್. ಬೈರಪ್ಪ

ಸಾಹಿತಿ ಎಸ್.ಎಲ್. ಬೈರಪ್ಪ ಅವರ ನಿಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಎಸ್.ಎಲ್. ಬೈರಪ್ಪ ಅವರು ಕ್ರಾಂತಿಕಾರಿ ಸಾಹಿತಿಗಳು. ಯಾರಿಗೂ ಹೆದರದೆ ನೇರ, ನಿಷ್ಠುರವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು. ಈ ಹಿಂದೆ ಕನಕಪುರದಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಾಹಿತ್ಯ ಲೋಕಕ್ಕೆ ಮಾತ್ರವಲ್ಲ ಎಲ್ಲಾ ರಂಗದ ವ್ಯಕ್ತಿಗಳಿಗೂ ಮಾರ್ಗದರ್ಶನ ನೀಡುವಂತಹ ವ್ಯಕ್ತಿತ್ವ ಇವರದ್ದಾಗಿತ್ತು. ತಮ್ಮಪಾಡಿಗೆ ಕೆಲಸ ಮಾಡುತ್ತಾ ಹೋದವರು. ಇಡೀ ಸಾಹಿತ್ಯ ಕ್ಷೇತ್ರದಲ್ಲಿ ಇವರ ಹೆಸರು ಶಾಶ್ವತವಾಗಿ ಉಳಿದುಕೊಂಡಿದೆ” ಎಂದರು.

“ಬೈರಪ್ಪ ಅವರ ಆತ್ಮಕ್ಕೆ ಶಾಂತಿ ದೊರಕಲಿ. ಕರ್ನಾಟಕ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಅವರ ನಿಧನಕ್ಕೆ ಕಂಬನಿ ಮಿಡಿಯುತ್ತದೆ. ಅವರ ಕುಟುಂಬ ವರ್ಗ ‌ಸೇರಿದಂತೆ ಅಭಿಮಾನಿಗಳಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.

ಕಾವೇರಿ ಆರತಿ ಪರಿಶೀಲನೆ

ಸೆ.26 ರಿಂದ ಕಾವೇರಿ ಆರತಿ.. ಭರ್ಜರಿ ಸಿದ್ಧತೆ: Video ನೋಡಿ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಇಂದು ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ (Cauvery Aarti) ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು.

ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ ಉಪ ಮುಖ್ಯ ಮಂತ್ರಿಗಳು ಅಧಿಕಾರಿಗಳಿಗೆ ಕಾರ್ಯಕ್ರಮವು ಯಾವುದೇ ಲೋಪವಿಲ್ಲದೆ ನಡೆಸಲು ಸೂಚನೆ ನೀಡಿದರು.

ಕಾವೇರಿ ಆರತಿ ಸಮಿತಿ ಅಧ್ಯಕ್ಷರೂ ಆದ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತರಾದ ರಾಮ್ ಪ್ರಸಾತ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷು ಕುರಿತು ಡಿಸಿಎಂ ಅವರಿಗೆ ವಿವರಿಸಿದರು.

ಉಪಮುಖ್ಯಮಂತ್ರಿಗಳು ಕಾವೇರಿ ಆರತಿ ಪೂರ್ವ ತಾಲೀಮು ವೀಕ್ಷಣೆ ಮಾಡಿದರು.

ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜತೆಗಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]