Inauguration of legal advice centers in schools, colleges, hospitals and panchayats: High Court Justice Ravi V. Hosamani

ಶಾಲಾ, ಕಾಲೇಜು, ಆಸ್ಪತ್ರೆ ಮತ್ತು ಪಂಚಾಯಿತಿಗಳಲ್ಲಿ ಕಾನೂನು ಸಲಹಾ ಕೇಂದ್ರಗಳ ಉದ್ಘಾಟನೆ: ಹೈಕೋರ್ಟ್ ನ್ಯಾಯಮೂರ್ತಿ ರವಿ ವಿ.ಹೊಸಮನಿ

ದಾವಣಗೆರೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಒದಗಿಸುವ ದೃಷ್ಠಿಯಿಂದ ಜಿಲ್ಲೆಯಲ್ಲಿ 900 ಕ್ಕೂ ಹೆಚ್ಚು ಕಾನೂನು ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ರವಿ ವಿ.ಹೊಸಮನಿ (Justice Ravi V. Hosamani) ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್‍ನ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾನೂನು ಸಲಹಾ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಿ ನ್ಯಾಯ, ಹಕ್ಕುಗಳು ಮತ್ತು ಸರ್ಕಾರದ ಜನ ಕಲ್ಯಾಣ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ ಅರ್ಹರಿಗೆ ತಲುಪುವಂತೆ ಮಾಡಲು ಗ್ರಾಮ ಮಟ್ಟದಿಂದ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾನೂನು ಜಾಗೃತಿಗಾಗಿ ಜಿಲ್ಲೆಯಲ್ಲಿ ಕಾನೂನು ಸಲಹಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಸಮಾಜದಲ್ಲಿ ಎಲ್ಲರೂ ಒಂದೇ ಸಮನಾಗಿಲ್ಲವಾದ್ದರಿಂದ ಸಂವಿಧಾನ ಪೀಠಿಕೆಯನ್ವಯ ವಿದ್ಯಾರ್ಥಿಗಳು, ಹಿರಿಯ ನಾಗರೀಕರು, ಅಂಗವಿಕಲರು, ಮಹಿಳೆಯರು, ತೃತೀಯ ಲಿಂಗಿಗಳಿಗೂ ಸಮಾನ ನ್ಯಾಯ, ಸರ್ಕಾರದ ಯೋಜನೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ ಇಂದಿಗೂ ಕೆಲವರಿಗೆ ಸಮರ್ಪಕವಾಗಿ ಕಾನೂನಾತ್ಮಕ ನ್ಯಾಯ ಲಭಿಸುತ್ತಿಲ್ಲ, ಇಂತಹವರಿಗೆ ಪಾರದರ್ಶಕವಾಗಿ ಸ್ಥಳೀಯ ಮಟ್ಟದಲ್ಲಿ ನ್ಯಾಯ ದೊರಕಿಸಿಕೊಡುವ ಹಿತದೃಷ್ಠಿಯಿಂದ ಸಲಹಾ ಕೇಂದ್ರಗಳನ್ನು ಸ್ಥಾಪಿಸಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಕೊಳ್ಳುವಂತೆ ತಿಳಿಸಿದರು.

ಸಂವಿಧಾನದ ಉದ್ದೇಶ, ಮೂಲಭೂತ ಹಕ್ಕುಗಳು ಎಲ್ಲರಿಗೂ ಸಲ್ಲಬೇಕು, ತನ್ನ ಹಕ್ಕುಗಳನ್ನು ಪ್ರತಿಪಾದನೆ ಮಾಡಿ ಪಡೆದುಕೊಳ್ಳಲು ಪ್ರತಿಯೊಬ್ಬ ನಾಗರಿಕನು ಕಾನೂನನ್ನು ಅರಿತವನಾಗಿರಬೇಕು. ಆಗ ಮಾತ್ರ ತನ್ನ ಹಕ್ಕುಗಳ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ. ಸರ್ಕಾರ ಕಾನೂನುಗಳನ್ನು ರಚನೆ ಮಾಡಿದೆ, ಆ ಕಾನೂನುಗಳು ಎಲ್ಲಾ ಜನರಿಗೂ ತಲುಪುತ್ತಿಲ್ಲವೆಂಬುದನ್ನು ಮನಗಂಡು ಏನು ಅರಿಯದ ಜನರಿಗೆ ಕಾನೂನಿನ ಅರಿವು ಮೂಡಿಸಲು ಈ ಕೇಂದ್ರಗಳಿಂದ ಸಹಕಾರಿಯಾಗಲಿದೆ ಎಂದರು.

ಭಾರತ ಸಂವಿಧಾನದ ಪೀಠಿಕೆ ಅದ್ಬುತವಾಗಿದೆ, ಯಾಕೆಂದರೆ ಅದರಲ್ಲಿ ಅಡಗಿರುವ ಉದ್ದೇಶ ಕಾರಣವಾಗಿದೆ. ಯಾವುದೇ ಒಂದು ಯೋಜನೆಯನ್ನು ಜಾರಿಗೊಳಿಸುವ ಮೊದಲು ಎಲ್ಲರನ್ನು ಒಟ್ಟುಗೂಡಿಸಿಕೊಂಡು ಆ ಯೋಜನೆಯನ್ನು ಜಾರಿಗೊಳಿಸಬೇಕು. ಆದರೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಆ ಯೋಜನೆ ತಲುಪಬಾರದು, ತಲುಪಿದರೆ ಆ ಯೋಜನೆ ವಿಫಲವಾದಂತೆ ಎಂದರು.

ಜನರಿಗೆ ಇರುವ ಸಮಸ್ಯೆಗಳ ಬಗ್ಗೆ ಅಥವಾ ಯಾವ ವಿಷಯದ ಬಗ್ಗೆ ಕಾನೂನು ಸಲಹೆ ಅಗತ್ಯವಿರುತ್ತದೆ ಅಂತಹವರು ಉಚಿತ ಸಹಾಯವಾಣಿ ಸಂಖ್ಯೆಗೆ 15100 ಗೆ ಕರೆಮಾಡಿ ಮಾಹಿತಿ ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲಾಧಿಕಾರಿ ಜಿ,ಎಂ.ಗಂಗಾಧರಸ್ವಾಮಿ ಮಾತನಾಡಿ, ಜಿಲ್ಲೆಯಾದ್ಯಂತ ಈವರೆಗೂ ಪೋಕ್ಸೋ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ, ಮಹಿಳಾ ರಕ್ಷಣೆ, ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು, ರಸ್ತೆ ಸುರಕ್ಷತೆ ಸೇರಿದಂತೆ ಹಲವಾರು ಜಾಗೃತಿ ಕಾರ್ಯಗಾರ ಆಯೋಜಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಸಾಕಷ್ಟು ಅರಿವು ಮೂಡಿಸಲಾಗಿದೆ. ರಸ್ತೆ ಸುರಕ್ಷತೆ ಕಾರ್ಯಗಾರದಿಂದ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.30ರಷ್ಟು ಅಪಘಾತ ಪ್ರಕರಣ ಇಳಿಕೆಯಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪ್ರಾರಂಭಿಸಿರುವ ಕಾನೂನು ಸಲಹಾ ಕೇಂದ್ರಗಳಿಂದ ಅತ್ಯುತ್ತಮ ಕಾರ್ಯವಾಗಲಿದೆ. ಇದರಿಂದ ಜಿಲ್ಲೆಯಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸ್ಥಳೀಯ ಮಟ್ಟದಲ್ಲಿಯೇ ತನ್ನ ಹಕ್ಕು ಮತ್ತು ನ್ಯಾಯ ಪಡೆಯಲು ಸಹಕಾರಿಯಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಂಡೋಪ ತಂಡವಾಗಿ ಕಾರ್ಯನಿರ್ವಹಿಸಿ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತೇವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, ಶಿಕ್ಷಣ ಜ್ಞಾನವಿದ್ದರಷ್ಟೇ ಸಾಲದು. ಶಿಕ್ಷಣದ ಜೊತೆಗೆ ಕಾನೂನಿನ ಅರಿವು ಇರಬೇಕು. ಮಹಿಳಾ ಮತ್ತು ಮಕ್ಕಳ ದೌರ್ಜನ್ಯಕ್ಕೆ ಒಳಗಾದಾಗ ಪ್ರತಿಯೊಬ್ಬರು ನಮ್ಮ ಹಕ್ಕುಗಳ ರಕ್ಷಣೆ ಮಾಡಿಕೊಳ್ಳುವ ಸಾಮಥ್ರ್ಯ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ. ಅದರಲ್ಲೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ವಿದ್ಯಾವಂತರೇ ಡಿಜಿಟಲ್ ಅರೆಸ್ಟ್ ಗೆ ಒಳಗಾಗುತ್ತಿದ್ದಾರೆ. ಇಲಾಖೆ ವತಿಯಿಂದ ಯಾವುದೇ ಕಾರ್ಯಕ್ರಮ, ಕಾರ್ಯಗಾರ ಆಯೋಜನೆ ಮಾಡಿದರೂ ಸಹ ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ತಮ್ಮಗಳ ಸಹಕಾರ ಮುಖ್ಯ. ಆಗಾಗಿ ಜಿಲ್ಲೆಯಲ್ಲಿ ಇಂತಹ ಕಾರ್ಯಗಾರ ಅಗತ್ಯ ಎಂದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ವೇಲಾ ಡಿ.ಕೆ ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ವಂದಿಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠಲ ರಾವ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುರುಬಸವರಾಜ್, ವಿವಿಧ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ವಕೀಲರು ಉಪಸ್ಥಿತರಿದ್ದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!