ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್

Our government's sole objective is to inform the people about the truth in the Dharmasthala case: DCM D.K. Shivakumar

ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.

ಸುಪ್ರೀಂ ಕೋರ್ಟಿನಲ್ಲಿ ಪಿಐಎಲ್ ವಜಾ ಆಗಿದ್ದರೂ ಸರ್ಕಾರದ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದಾಗ, “ಈಗ ಆ ವಿಚಾರ ಚರ್ಚೆ ಬೇಡ. ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದು, ಅದು ವಜಾಗೊಂಡಿದೆ. ಪಿಐಎಲ್ ಹಾಕಿದವರಿಗೆ ಸ್ಥಳೀಯವಾಗಿ ತನಿಖೆ ಮಾಡಲಿ ಎಂದು ಕೋರ್ಟ್ ಬೈದು ಕಳುಹಿಸಿದ್ದು ಎಲ್ಲವೂ ಗೊತ್ತಿದೆ. ಸುಪ್ರೀಂ ಕೋರ್ಟಿನ ನಿರ್ದೇಶನದ ಬಗ್ಗೆ ಯಾರು ಹೇಳುವುದಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದರು. ಅದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಆದರೆ ತನಿಖಾ ತಂಡದಿಂದ ಅಧಿಕೃತವಾಗಿ ನಮಗೆ ವರದಿ ಬರಲಿ” ಎಂದು ತಿಳಿಸಿದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]