ದೊಡ್ಡಬಳ್ಳಾಪುರ (Doddaballapura): ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಮತದಾನವು ನಿರ್ವಂಚನೆಯಿಂದ ನಡೆಯಬೇಕಿದೆ. ಈ ದಿಸೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು. ಆದರೆ, ಅದು ಬಿಜೆಪಿ ಪರ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ವೆಂಕಟರಮಣಯ್ಯ ಆರೋಪಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮತ ಕಳ್ಳತನ (ವೋಟ್ ಚೋರಿ) ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತ ಕಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ದೇಶದಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತದೆ. ಸಹಿ ಸಂಗ್ರಹ ಪೂರ್ಣಗೊಂಡ ನಂತರ ಚುನಾವಣಾ ಆಯೋಗಕ್ಕೆ ಹಕ್ಕೊತ್ತಾಯ ಮಾಡಲಾಗುವುದು.
ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಿ, ಸರಕಾರದಲ್ಲಿ ಏನಾದರೂ ನಡೆದರೆ, ಅದನ್ನು ಪ್ರಶ್ನಿಸುವ ಅಧಿಕಾರ ಹೊಂದಿದ್ದಾರೆ. ಆದರೆ, ಸರ್ಕಾರ ಹಾಗೂ ಸಂಬಂಧಿತ ಸಂಸ್ಥೆಗಳು ಬೇಜವಬ್ದಾರಿತನದಿಂದ ಉತ್ತರ ಕೊಡುವುದು ಸರಿಯಲ್ಲ ಎಂದರು.
ಈ ವೇಳೆ ಮತ ಕಳ್ಳತನ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಸಹಿ ಸಂಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, ಡಿಪಿಎ ನಿರ್ದೇಶಕ ಅಂಜನಮೂರ್ತಿ, ಮುಖಂಡರಾದ ರವಿಕುಮಾರ್, ಡಿ.ಸಿದ್ದರಾಮಯ್ಯ ಮೊದಲಾದವರು ಹಾಜರಿದ್ದರು.