ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ (Navodaya School) ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಉದ್ಯಮಿ ಸಂದೀಪ್ (Sandeep) ಅವರು ರಸ್ತೆ ಕಾಮಗಾರಿ ನಡೆಸಲು ಮುಂದಾಗಿದ್ದಾರೆ.
ಹೌದು ನವೋದಯ ಶಾಲೆಯ ಆವರಣದಲ್ಲಿ ರಸ್ತೆ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರು ಓಡಾಡಲು ಕಷ್ಟವಾಗಿದೆ ಎಂದು ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಉದ್ಯಮಿ ಸಂದೀಪ್ ಅವರ ಗಮನಕ್ಕೆ ತಂದಿದ್ದರು.
ಇದಕ್ಕೆ ಸ್ಪಂದಿಸಿದ ಸಂದೀಪ್ ಸುಮಾರು 5 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಇಂದು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗಂಟ್ಟಿಗಾನಹಳ್ಳಿ ಗ್ರಾಮದ ಯುವ ಮುಖಂಡರಾದ ವಿಜಯ್‌ಕುಮಾರ್ ಶಾಲೆಯ ಪ್ರಾಂಶುಪಾಲರಾದ ಟಿ.ಪಳನಿವೇಲು, ದೈಹಿಕ ಶಿಕ್ಷಕ ರಾಮಾಂಜಿನಪ್ಪ .ಕೆ., ಗುತ್ತಿಗೆದಾರರಾದ ಮಂಜು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.