Farmers' revolution in Doddabelavangala.. Food providers took to the streets..!

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ರೈತ ಕ್ರಾಂತಿ.. ರಸ್ತೆಗಿಳಿದ ಅನ್ನದಾತರು..! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಗ್ರಾಮ ಗ್ರಾಮಗಳಲ್ಲಿ ಅನ್ನದಾತ ರೈತರು ಸಭೆ ನಡೆಸುತ್ತಿದ್ದು, ಒಟ್ಟಾಗಿ ರಸ್ತೆಗಿಳಿಯುವ ಮೂಲಕ ದೊಡ್ಡಮಟ್ಟದ ರೈತ ಕ್ರಾಂತಿಗೆ (Farmers’ revolution) ಸಜ್ಜಾಗುತ್ತಿದ್ದಾರೆ.

ಹೌದು ಕರ್ನಾಟಕ ರಾಜ್ಯ ಗೃಹ ಮಂಡಳಿಯು ದೊಡ್ಡಬೆಳವಂಗಳ ಹೋಬಳಿಯ ಕಸಾಘಟ್ಟ ದೊಡ್ಡಹೆಜ್ಜಾಜಿ, ವೆಂಕಟೇಶಪುರ, ಕಾರೇಪುರ, ಐಯ್ಯನಹಳ್ಳಿ ಗ್ರಾಮಗಳ 2,760 ಎಕರೆ ಫಲವತ್ತಾದ ಕೃಷಿ ಭೂಸ್ವಾಧಿನಕ್ಕೆ ಸೆಪ್ಟೆಂಬರ್ 19 ರಂದು ಸಭೆ ನಡೆಸಿರುವುದನ್ನು ಖಂಡಿಸಿ ಸೋಮವಾರ ದೊಡ್ಡಬೆಳವಂಗಲದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನ ಸಭೆಯಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು ಈಗಾಗಲೇ ದೊಡ್ಡಬೆಳವಂಗಲ ಹೋಬಳಿಯಲ್ಲಿ ಕ್ವಿನ್ ಸಿಟಿ, ಹೈಟೆಕ್ ಲಾಜಿಸ್ಟಿಕ್ ಪಾರ್ಕ್, ಬಿಬಿಎಂಪಿ ಕಸವಿಲೇವಾರಿ ಘಟಕ ಸೇರಿದಂತೆ ಹತ್ತಾರು ಯೋಜನೆಗಳ ನೆಪದಲ್ಲಿ ಸಾವಿರಾರು ಎಕರೆ ರೈತರ ಫಲವತ್ತಾದ ಕೃಷಿ ಜಮೀನನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಈಗ ಗೃಹ ಮಂಡಳಿ ನೆಪದಲ್ಲಿ 2,760 ಎಕರೆ ಕೃಷಿ ಜಮೀನು ಕಬಳಿಸಲು ಮುಂದಾಗಿರುವುದು ಖಂಡನೀಯ ಎಂದರು.

ದೊಡ್ಡಬೆಳವಂಗಲ ಹೋಬಳಿಯ ರೈತರನ್ನು ಸಂಪೂರ್ಣವಾಗಿ ಒಕ್ಕಲೆಬ್ಬಿಸುವ ವ್ಯವಸ್ಥಿತಿ ಸಂಚು ನಡೆಯುತ್ತಿದೆ. ಇಲ್ಲಿಯವರೆಗೂ ಸ್ವಾಧಿನ ಮಾಡಿಕೊಂಡಿರುವ ಜಮೀನುಗಳಲ್ಲೇ ಇನ್ನೂ ಯಾವುದೇ ಕೆಲಸಗಳು ಪ್ರಾರಂಭವಾಗಿಲ್ಲ. ಆದರೆ ಕೃಷಿ ಜಮೀನುಗಳ ಸ್ವಾಧಿನ ಮಾತ್ರ ನಡೆಯುತ್ತಿದೆ.

ರಿಯಲ್ ಎಸ್ಟೇಟ್ ದಂದೆ

ಕೈಗಾರಿಕೆಗಳ ಸ್ಥಾಪನೆ ನೆಪದಲ್ಲಿ ರಿಯಲ್ ಎಸ್ಟೇಟ್ ದಂದೆ ನಡೆಯುತ್ತಿದೆ. ಕೃಷಿ ಜಮೀನು ಸ್ವಾಧೀನಕ್ಕೂ ಒಂದು ಮಿತಿ ಇರಬೇಕು. ಎಲ್ಲಾ ಯೋಜನೆಗಳನ್ನು ದೊಡ್ಡಬೆಳವಂಗಲ ಹೋಬಳಿಯಲ್ಲೇ ಜಾರಿಗೊಳೀಸುವ ಬದಲಿಗೆ ರಾಜ್ಯ ಇತರೆ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದರು.

ಕರ್ನಾಟಕ ರಾಜ್ಯ ಗೃಹ ಮಂಡಳಿಗೆ ಭೂಸ್ವಾಧಿನ ಮಾಡಿಕೊಳ್ಳಲು ಯಾವುದೇ ಕಾರಣಕ್ಕು ಇಲ್ಲಿ ಅವಕಾಶ ನೀಡುವುದಿಲ್ಲ. ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚು ಕೃಷಿ ಚಟುವಟಿಕೆಗಳು ನಡೆಯುತ್ತಿರುವ ಫಲವತ್ತಾದ ಜಮೀನುಗಳು ಇರುವ ಸ್ಥಳದಲ್ಲಿ ಗೃಹ ಮಂಡಳಿ ಭೂಸ್ವಾಧಿನಕ್ಕೆ ಮುಂದಾಗಿರುವುದು ಅತ್ಯಂತ ಅವೈಜ್ಞಾನಿಕ ಕ್ರಮವಾಗಿದೆ. ಸ್ಥಳೀಯ ಜನರ ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ನಡೆಸದೆ ನಡೆಯುತ್ತಿರುವ ಭೂಸ್ವಾಧಿನದ ವಿರುದ್ಧ ತೀವ್ರಗತಿಯ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!