ಅತ್ಯಾಚಾರ ಪ್ರಕರಣ: ಜೀವಾವಧಿ ಶಿಕ್ಷೆ ರದ್ದುಕೋರಿ ಪ್ರಜ್ವಲ್ ಹೈಕೋರ್ಟ್ ಮೊರೆ

Rape case: Prajwal moves High Court seeking cancellation of life sentence

ಬೆಂಗಳೂರು: ಮನೆ ಕೆಲಸದ ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ ಆರೋಪದಲ್ಲಿ (Rape case) ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅಲ್ಲದೇ, ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಶಿಕ್ಷೆಯ ಆದೇಶ ರದ್ದುಪಡಿಸಬೇಕು. ಪ್ರಕರಣದಿಂದ ಅರ್ಜಿದಾರರನ್ನು ಖುಲಾಸೆಗೊಳಿಸ ಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯಲ್ಲಿ ಪ್ರಕರಣದಲ್ಲಿ ಅತ್ಯಾಚಾರಕ್ಕೊಳಗಾಗಿದ್ದೇನೆ ಎಂಬುದಾಗಿ ದೂರು ದಾಖಲಿಸಿರುವ ಮಹಿಳೆ ತೋಟದ ಮನೆಯಲ್ಲಿದ್ದ ಸಂದರ್ಭದಲ್ಲಿ ಪೊಲೀಸರು ಅಲ್ಲಿಗೆ ಬಂದಿದ್ದರು. ಪೊಲೀಸರನ್ನು ಕಂಡು ಭಯಭೀತಳಾಗಿ ಓಡಲು ಪ್ರಯತ್ನ ಮಾಡಿದ್ದೆ. ಈ ಸಂದರ್ಭದಲ್ಲಿ ಪೊಲೀಸರು ತನ್ನನ್ನು ಎಸ್ ಐಟಿಗೆ ಕರೆತಂದು ದೂರು ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಈ ಅಂಶ ಸಂತ್ರಸ್ತೆಯನ್ನು ಪೊಲೀಸರು ಬೆನ್ನಟ್ಟಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ ಎಂಬುದು ಗೊತ್ತಾಗಲಿದೆ. 2021ರ ಜನವರಿ ತಿಂಗಳಿನಿಂದ 2022ರ ಜನವರಿ ಅಂತ್ಯದವರೆಗೂ ಬಸವನಗುಡಿಯ ಮನೆಯಲ್ಲಿ ಅತ್ಯಾಚಾರವೆಸಗಲಾಗಿದೆ. ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ಜತೆಗೆ 2022ರಲ್ಲಿ ಕೆಲಸ ಬಿಟ್ಟಿರುವುದಾಗಿಯೂ ತಿಳಿಸಿದ್ದಾರೆ. ಆದರೆ, 2024ರ ಮೇ 10 ರಂದು ಅದೇ ಮನೆಗೆ ತನಿಖಾಧಿಕಾರಿಗಳು ಬಂದು ಹಾಸಿಗೆಯ ಮೇಲಿನ ಕಲೆಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಅವು ಅರ್ಜಿದಾರರದ್ದೇ ಎಂಬುದಾಗಿ ಹೇಳಿದ್ದಾರೆ. ಆದರೆ, ಸತತ ಮೂರು ವರ್ಷಗಳ ಕಾಲ ಹಾಸಿಗೆ ಮೇಲಿನ ಬಟ್ಟೆಗಳನ್ನು ಬದಲಾಯಿಸದೇ, ತೊಳೆಯದೆ ಹೇಗೆ ಹಾಕಬಹುದು ಎಂಬ ಅಂಶವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ.

ಅಲ್ಲದೇ, ತನಿಖಾಧಿಕಾರಿಗಳು 2025ರ ಮೇ 28 ರಂದು ಗನ್ನಿ ಕಡ ತೋಟದ ಮನೆಯಲ್ಲಿ ಕೊಠಡಿ ಸಂಖ್ಯೆ 2ರಲ್ಲಿದ್ದ ಸಂತ್ರಸ್ತೆಯ ಬಟ್ಟೆಗಳು ಮತ್ತು ಕೂದಲನ್ನು ಸಂಗ್ರಹಿಸಿದ್ದಾರೆ. ಆದರೆ, ಸಂತ್ರಸ್ತೆಯನ್ನು ಕರೆದೊಯ್ಯದೇ ಅವರು ಅದೇ ರೂಮಿನಲ್ಲಿ ವಾಸವಾಗಿದ್ದರು ಎಂಬುದು ತನಿಖಾಧಿಕಾರಿಗಳಿಗೆ ಹೇಗೆ ತಿಳಿದಿತ್ತು ಎಂಬ ಅಂಶವನ್ನು ವಿವರಿಸಿಲ್ಲ. ಇದೊಂದು ಸಂಶಯಕ್ಕೆ ಕಾರಣವಾಗಿದ್ದು, ತನಿಖೆಯಲ್ಲಿ ಗಂಭೀರ ಲೋಪವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮಹಿಳೆ ಕೆಲಸ ಬಿಟ್ಟು 3 ವರ್ಷ

ತೋಟದ ಮನೆಯ ಕೊಠಡಿ ಸಂಖ್ಯೆ 2ರಲ್ಲಿ ಗೋಡೌನ್ ರೀತಿಯಲ್ಲಿ ಬಳಕೆ ಮಾಡಿಕೊಳ್ಳ ಲಾಗುತ್ತಿತ್ತು. ಅದರಲ್ಲಿ ಖಾಲಿ ಪೇಂಟಿಂಗ್ ಡಬ್ಬಗಳು, ಬ್ಯಾಟರಿಗಳು, ಕಾರ್ಪೇಟ್‌ಗಳು ಮತ್ತು ಮ್ಯಾಟ್‌ಗಳನ್ನು ಹಾಕಲಾಗಿತ್ತು. ಆದರೆ, 2022ರಲ್ಲಿಯೇ ಸಂತ್ರಸ್ತೆ ಕೆಲಸ ಬಿಟ್ಟರುವುದಾಗಿ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಕರೆದುಕೊಂಡು ಹೋಗದೆಯೇ ಮೂರು ವರ್ಷ ಬಳಿಕ ಅದೇ ಕೊಠಡಿಯಲ್ಲಿ ಬಟ್ಟೆಗಳ ಮೇಲಿನ ಕಲೆಗಳು ಮತ್ತು ಕೂದಲಿನ ಮಾದರಿಗಳನ್ನು ಸಂಗ್ರಹಿಸಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಯಾವುದೇ ವ್ಯಕ್ತಿಯೂ ನಂಬುವುದಕ್ಕೆ ಸಾಧ್ಯವೇ ಇಲ್ಲ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]