ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ: ಸಿಎಂ ಸಿದ್ದರಾಮಯ್ಯ

It is my privilege to participate in Dussehra as the Chief Minister with the blessings of the people.

ಮೈಸೂರು; ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ತಿಳಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ದಸರಾ ಯಶಸ್ವೀ ಆಯೋಜನೆ

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ಜಂಟಿ ಸಮೀಕ್ಷೆ ನಂತರ ಬೆಳೆಪರಿಹಾರ

ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿ್ಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದ್ದು, ಸರ್ಕಾರ ಮತ್ತು ಎನ್ ಡಿಆರ್ ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17000 ರೂ ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಪುಷ್ಪಾರ್ಚನೆ

ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ: ಸಿಎಂ ಸಿದ್ದರಾಮಯ್ಯ

ಮೈಸೂರು ಅರಮನೆ ಆವರಣದಲ್ಲಿ ವಿಜಯ ದಶಮಿ ನಿಮಿತ್ತ ಗುರುವಾರ ಅಭಿಮನ್ಯು ಹೊತ್ತ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸಚಿವರಾದ ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಯದುವೀರ್ ಒಡೆಯರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಲಕ್ಷೀಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]