The history-making Cauvery Aarti will not stop; DCM D.K. Shivakumar

ಇತಿಹಾಸ ಸೃಷ್ಟಿಸಿರುವ ಕಾವೇರಿ ಆರತಿ ನಿಲ್ಲೋದಿಲ್ಲ; ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಇದೇ‌ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು (Cauvery Aarti) ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸನ್ಮಾನಿಸಿದರು.

ಮಂಡ್ಯ ಜಿಲ್ಲೆ ಕೆಆರ್ ಎಸ್ ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 ಮಂದಿ ಅರ್ಚಕರನ್ನು ಶಿವಕುಮಾರ್ ಅವರು ಕುಮಾರಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಸರಕಾರಿ ನಿವಾಸದಲ್ಲಿ ಶುಕ್ರವಾರ ಫಲ, ತಾಂಬೂಲ, ವಸ್ತ್ರ ನೀಡಿ ಸಾಂಪ್ರದಾಯಿಕವಾಗಿ ಅಭಿನಂದಿಸಿದರು.

ತಮ್ಮನ್ನು ಸನ್ಮಾನಿಸಿ ಸತ್ಸಂಪ್ರದಾಯ ಮೆರೆದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕಾವೇರಿ ಆರತಿ ಪ್ರಧಾನ ಅರ್ಚಕ ವಿಜಯಕುಮಾರ್ ಪಂಡಿತ್ ಅವರು ಆಶೀರ್ವದಿಸಿದರು.

ಕಾವೇರಿ ಆರತಿ ನಿಲ್ಲುವುದಿಲ್ಲ

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು,”ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ,‌ ಮುಂದುವರೆಸುತ್ತೇವೆ.‌ ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ.‌ ನಾವೆಲ್ಲರೂ ‌ಸೇರಿ ಪ್ರಾರ್ಥನೆ ಸಲ್ಲಿಸೋಣ.‌ ಆರತಿಗಾಗಿ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ‌‌ ಮಾಡೋಣ‌” ಎಂದರು.

“ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಕಾವೇರಿ ಆರತಿ ನಡೆಯಲಿದೆ. ಇದರಿಂದ ಪುರೋಹಿತರಿಗೆ, ಸ್ಥಳೀಯರಿಗೆ ಉದ್ಯೋಗ ದೊರೆಯಬೇಕು. ನಾನು ಅಥವಾ ಇನ್ಯಾರೋ ಪುರೋಹಿತರಾಗಲು ಸಾಧ್ಯವಿಲ್ಲ. ನೀವೇ ಆ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ‌ಬೆಳಿಗ್ಗೆ ಹೊತ್ತು ಭಕ್ತಾಧಿಗಳು ಕಾವೇರಿಗೆ ಪೂಜೆ ಸಲ್ಲಿಸುವ ರೀತಿಯಲ್ಲೂ ವ್ಯವಸ್ಥೆ ಮಾಡಲಾಗುವುದು. ವಾರ ಪೂರ್ತಿ ಆರತಿ ಕಾರ್ಯಕ್ರಮ ನಡೆಯಬೇಕು ಎಂಬುದು ನನ್ನ ಆಸೆಯಾಗಿದೆ” ಎಂದರು.

“ಕಾವೇರಿ ಆರತಿ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಜೀವನದಿ ಕಾವೇರಿಗೆ ಪೂಜೆ ಸಲ್ಲಿಸುವ ಭಾಗ್ಯ ನಮಗೆ ಹಾಗೂ ನಿಮಗೆ ಸಿಕ್ಕಿದೆ. ಕಾವೇರಿ ಮಾತೆಗೆ ಪ್ರಾರ್ಥನೆ ಸಲ್ಲಿಸಲು ಕೆಲವರು ಅಡಚಣೆ ಮಾಡುತ್ತಿದ್ದಾರೆ. ಅಡಚಣೆ ಮಾಡುವವರಿಗೆ ನಾವು ಏನೂ ಮಾಡಲು ಆಗುವುದಿಲ್ಲ” ಎಂದರು.

“ಕಾವೇರಿ ಆರತಿ ಅತ್ಯುತ್ತಮವಾಗಿ ನೆರವೇರಿದೆ. ಮುಂದಕ್ಕೆ ಯಾವ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು, ಏನೇನು ತಪ್ಪುಗಳಾಗಿವೆ ಎಂಬುದನ್ನು ಗಮನಿಸಬೇಕು. ಇನ್ನೂ ಯಾವ ರೀತಿಯ ಧಾರ್ಮಿಕ ಕೆಲಸಗಳು ನೆರವೇರಬೇಕು ಎಂಬುದನ್ನು ಗಮನಿಸಬೇಕು. ಭಕ್ತಿ ಪ್ರಧಾನವಾಗಿ ಜನರ ಮನಸ್ಸಿಗೆ ಮುಟ್ಟುವಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಬೇಕು” ಎಂದರು.

“ವಾರಣಾಸಿಯ ಗಂಗಾ ಆರತಿಗೆ ಕಡಿಮೆಯಿಲ್ಲದಂತೆ ಇಲ್ಲೂ ಆರತಿ ನೆರವೇರಿದೆ. ದಕ್ಷಿಣ ಭಾರತದಲ್ಲಿ ಪದ್ಧತಿಯಲ್ಲಿ ಈ ಕಾರ್ಯಕ್ರಮ ನಡೆದಿದೆ. ಕಾವೇರಿ ಮಾತೆ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಸ್ಥಳೀಯ ಪುರೋಹಿತರು ತಮ್ಮ ಪಾಂಡಿತ್ಯ ಬಳಸಿಕೊಂಡು ಇನ್ನೂ ಯಾವ ರೀತಿಯ ಪೂಜಾ ಕೈಂಕರ್ಯಗಳನ್ನು ನೆರವೇರಿಸಬಹುದು ಎಂದು ಪರಿಶೀಲನೆ ನಡೆಸಿ” ಎಂದರು.

“ಊರಲ್ಲಿರುವ ಎಲ್ಲಾ ಎತ್ತುಗಳು ಬಸವ ಆಗಲು ಸಾಧ್ಯವಿಲ್ಲ. ಆದ ಕಾರಣಕ್ಕೆ ಉತ್ತಮ ಅಧಿಕಾರಿಯಾದ ರಾಮ ಪ್ರಸಾತ್ ಮೋಹನ್ ಅವರಿಗೆ ಇದರ ಜವಾಬ್ದಾರಿ ನೀಡಲಾಯಿತು. ಇವರ ಜೊತೆಗೆ ಸ್ಥಳೀಯ ಅಧಿಕಾರಿಗಳು ಕೈ ಜೋಡಿಸಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಕಾವೇರಿ ಮಾತೆಯ ಆಶೀರ್ವಾದ ಸದಾ ಎಲ್ಲರ ಮೇಲಿರಲಿ. ಪ್ರತಿವರ್ಷ ಉತ್ತಮ ಮಳೆ, ಬೆಳೆ ಬರಲಿ” ಎಂದು ಪ್ರಾರ್ಥಿಸಿದರು.

“ಕೊಡಗಿನಲ್ಲಿ ಹುಟ್ಟಿ ಅರಬ್ಬೀ ಸಮುದ್ರ ಸೇರುವ ತನಕ ಸುಮಾರು ಎರಡುವರೆ ಕೋಟಿ ಜನರ ಜೀವನಾಡಿಯಾಗಿ ಕಾವೇರಿ ಹರಿಯುತ್ತದೆ. ಕೃಷಿ, ಕೈಗಾರಿಕೆ ಸೇರಿದಂತೆ ಪ್ರತಿಯೊಂದಕ್ಕೂ ಕಾವೇರಿಯೇ ಆಧಾರ” ಎಂದರು.

ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನದಲ್ಲಿ ಈ ಬಾರಿ ಐದು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮವನ್ನು ನಡೆಸಲಾಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮ್ಮಿಲನವಾಗಿದ್ದ ಈ ಕಾವೇರಿ ಆರತಿ ರಾಜ್ಯದಲ್ಲಿ ಐತಿಹಾಸಿಕ ಸುಸಂಪ್ರದಾಯಕ್ಕೆ ನಾಂದಿಯಾಡಿತು. ಭಕ್ತಿ, ಸಂಸ್ಕೃತಿ, ಕಲೆ, ಸಂಗೀತ ಹಾಗೂ ವರ್ಣರಂಜಿತ ದೀಪಾಲಂಕಾರ ಪ್ರವಾಸಿಗರ ಮನಸ್ಸನ್ನು ಸೂರೆಗೊಂಡಿತು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!