ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಶಕ್ತಿ ಚಂಡ ಮಾರುತದಿಂದಾಗಿ ರಾಜ್ಯದಲ್ಲಿ ವಾರಪೂರ್ತಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.5ರಿಂದ 11ರವರೆಗೆ ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭಾರಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಬ್ಬರದ ಮಳೆಯಾಗಲಿದೆ. ಕರಾವಳಿ ಕರ್ನಾಟಕ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸೆಂಟರ್ ಪ್ರಕಾರ, ಮುಂಬರುವ ದಿನಗಳಲ್ಲಿ ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಕೊಪ್ಪಳ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮೈಸೂರು, ತುಮಕೂರು, ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಯಾಗಲಿದೆ ಎಂದು ಮುನೂಚನೆ ನೀಡಿದೆ.
ಹಲವು ದಿನ ಮಳೆ (Rain)
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಆಗಾಗ್ಗೆ ಮಳೆಯಾಗುತ್ತಿದೆ. ಇನ್ನೂ ಹಲವು ದಿನಗಳ ಕಾಲ ಮಳೆ ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಇದನ್ನು ಓದಿ; ಬಿಜೆಪಿಯಿಂದ ಹಾನಿ ಪರಿಶೀಲನೆ, ಸರ್ಕಾರದಿಂದ ಯಾರೂ ಬಂದಿಲ್ಲ: ಆರ್.ಅಶೋಕ ವಾಗ್ದಾಳಿ