Basavanna's name for the metro: What is inside Siddaramaiah?: B.Y. Vijayendra questions

ಮೆಟ್ರೋಗೆ ಬಸವಣ್ಣರ ಹೆಸರು: ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆ?: ಬಿ.ವೈ‌.ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಎಲ್ಲ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y. Vijayendra) ಅವರು ಆಗ್ರಹಿಸಿದ್ದಾರೆ.

ಬಿ.ಎಲ್.ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆಯು ಇಂದು “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹಿರಂಗವಾಗಿ ಹೇಳುವುದು ಬೇರೆ, ಮುಖ್ಯಮಂತ್ರಿಗಳ ಅಂತರಂಗದ ಅಪೇಕ್ಷೆ ಏನೆಂಬುದನ್ನು ಅವರು ಬಹಿರಂಗಪಡಿಸಬೇಕಿದೆ ಎಂದು ಹೇಳಿದರು.

ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಇದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದು ತಿಳಿಸಿದರು.

ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮಾಜ, ಒಕ್ಕಲಿಗ, ವೀರಶೈವ ಲಿಂಗಾಯತ ಸಮಾಜ, ಸೇರಿ ಎಲ್ಲ ಸಮಾಜಗಳಲ್ಲಿ ಆರ್ಥಿಕ- ಸಾಮಾಜಿಕ- ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಎಲ್ಲ ಸಮಾಜಕ್ಕೆ ನ್ಯಾಯ ಕೊಡುವ ಕೆಲಸ ಆಗಬೇಕಾಗಿದೆ. ಸಿದ್ದರಾಮಯ್ಯನವರಿಗೆ ಆತುರವೇಕೆ? ಎಂದು ಕೇಳಿದರು.

ಜಾತಿ ಜನಗಣತಿಯಲ್ಲಿ ಕೆಲವೆಡೆ ವಿಕಲಚೇತನರನ್ನೂ ಬಳಸಿಕೊಳ್ಳುತ್ತಿದ್ದಾರೆ. ಸಮರ್ಪಕ ಸಿದ್ಧತೆಯೂ ಇಲ್ಲ; ಆತುರಾತುರವಾಗಿ ಮುಖ್ಯಮಂತ್ರಿಗಳೇ 15 ದಿನದಲ್ಲಿ ಮುಗಿಸಬೇಕೆನ್ನುತ್ತಾರೆ. ಈ ಆತುರ ಯಾಕೆ ಎಂಬುದು ಯಕ್ಷಪ್ರಶ್ನೆ ಎಂದು ನುಡಿದರು. ಕೆಲವು ಶಕ್ತಿಗಳು ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿವೆ. ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಹಿಂದೆಯೂ ಇಂಥ ಷಡ್ಯಂತ್ರ, ಪ್ರಯತ್ನ ನಡೆದಿತ್ತು ಎಂದು ಟೀಕಿಸಿದರು. ಅದರಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಮುಂದೆಯೂ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಎರಡು ನಾಮಪತ್ರ ಸಲ್ಲಿಕೆ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಎರಡು ನಾಮಪತ್ರ ಸಲ್ಲಿಕೆ

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ಈವರೆಗೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

[ccc_my_favorite_select_button post_id="117076"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!