ಸೋನಮ್ ವಾಂಗ್ಚುಕ್ ಬಂಧನ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್

Sonam Wangchuk's arrest: Supreme Court notice to the central government

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು (Sonam Wangchuk’s) ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಕೇಂದ್ರ ಸರ್ಕಾರಕ್ಕೆ (Central government) ನೋಟಿಸ್ ಜಾರಿ ಮಾಡಿದೆ.

ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠವು ಕೇಂದ್ರ ಸರ್ಕಾರ ಮತ್ತು ಲಡಾಖ್ ಆಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 14 ರಂದು ನ್ಯಾಯಾಲಯವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಆಂಗ್ಮೋ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಬಂಧನವನ್ನು ವಿರೋಧಿಸುತ್ತಿದ್ದೇವೆ, ಪತ್ನಿಗೆ ನೋಟೀಸ್ ನೀಡದೆ, ಕಾರಣ ತಿಳಿಸದೆ, ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.

ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಬಂಧನಕ್ಕೆ ಆಧಾರಗಳನ್ನು ಬಂಧಿತನಿಗೆ ಒದಗಿಸಲಾಗಿದೆ ಮತ್ತು ಅವರ ವಕೀಲರು ಮತ್ತು ಸಹೋದರ ಜೈಲಿನಲ್ಲಿ ಅವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದರು.

ಲಡಾಖ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾತ್ಮಕ ಘರ್ಷಣೆಗಳ ಹಿನ್ನೆಲೆಯಲ್ಲಿ ಪರಿಸರ ತಜ್ಞ, ಶಿಕ್ಷಣ ತಜ್ಞ, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲು ಕಾರಣಗಳ ಕುರಿತು ಪತ್ನಿ ಗೀತಾಂಜಲಿ ಜೆ ಆಂಗ್ಮೋ ಅವರಿಗೆ ಪೂರ್ವಭಾವಿ ನೋಟಿಸ್ ಏಕೆ ನೀಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ವೇಳಾಪಟ್ಟಿಯ ಸ್ಥಾನಮಾನವನ್ನು ಕೋರಿ ನಡೆದ ಪ್ರತಿಭಟನೆಗಳಲ್ಲಿ ನಡೆದ ಪೊಲೀಸ್ ಗೋಲಿ ಬಾರ್ ವೇಳೆ ನಾಲ್ವರು ಸಾವನ್ನಪ್ಪಿ, 90 ಜನರು ಗಾಯಗೊಂಡಿದ್ದರು.

ಇದಾದ ಎರಡು ದಿನಗಳ ನಂತರ, ಸೆಪ್ಟೆಂಬರ್ 26 ರಂದು ಸೋನಮ್ ವಾಂಗ್ಚುಕ್ ಅವರ ಬಂಧನಕ್ಕೊಳಗಾದಾಗಿನಿಂದ ತನ್ನ ಪತಿಯನ್ನು ಭೇಟಿಯಾಗಲು ಅವಕಾಶ ನೀಡಲಾಗಿಲ್ಲ ಎಂದು ಗೀತಾಂಜಲಿ ಅಂಗ್ಮೋ ಸಲ್ಲಿಸಿದ ಅರ್ಜಿಯ ಮೇರೆಗೆ, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್‌ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಕೇಂದ್ರ, ಜಮ್ಮು ಮತ್ತು ಕಾಶ್ಮೀರ ಮತ್ತು ರಾಜಸ್ಥಾನಕ್ಕೆ ನೋಟಿಸ್ ಜಾರಿ ಮಾಡಿದೆ.

ಅಲ್ಲದೆ ವಾಂಗ್ಚುಕ್ ಅವರನ್ನು ಏಕಾಏಕಿ ತನ್ನ ಯಾವುದೇ ವಸ್ತುಗಳು ಇಲ್ಲದೆ ಬಂಧನಕ್ಕೊಳಗಾಗಿದ್ದರಿಂದ ಮತ್ತು ಬಂಧನಕ್ಕೆ ಮುನ್ನ ಉಪವಾಸವಿದ್ದರಿಂದ, ಅವರಿಗೆ ಅಗತ್ಯ ಔಷಧಿಗಳು, ಬಟ್ಟೆಗಳು ಮತ್ತು ವೈದ್ಯಕೀಯ ಆರೈಕೆಯನ್ನು ಒದಗಿಸಬೇಕೆಂದು ನ್ಯಾಯಾಲಯ ಸೂಚಿಸಿದೆ.

‘ಅಕ್ರಮ ಬಂಧನ’ವನ್ನು ಪ್ರಶ್ನಿಸಿದ ಸೋನಮ್ ವಾಂಗ್ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ, ವಾಂಗ್‌ಚುಕ್‌ ಅವರನ್ನು ಪಾಕಿಸ್ತಾನ ಮತ್ತು ಚೀನಾಕ್ಕೆ ಜೋಡಿಸುವ ಸುಳ್ಳು ಅಭಿಯಾನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಗುಡ್ಮಾರ್ನಿಂಗ್ ನ್ಯೂಸ್: ಸೋನಮ್ ವಾಂಗ್ಚುಕ್ ಬಿಡುಗಡೆ ಕೋರಿ ಸುಪ್ರೀಂಗೆ ಅರ್ಜಿ

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]