ಬೆಂ.ಗ್ರಾ.ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

79% survey work completed in Bengaluru district: DC A.B. Basavaraju

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (Survey) ಅವಧಿಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ ಶೇಕಡ 79.19% ರಷ್ಟು ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು (A.B. Basavaraju) ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ಹಾಗೂ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸಮೀಕ್ಷೆ ಅವಧಿ ವಿಸ್ತರಿಸಲಾಗಿದೆ. ನಿಗದಿತ ಅವಧಿಯೊಳಗೆ ಜಿಲ್ಲೆಯಲ್ಲಿ ಶೇಕಡ 100ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ 2024-25 ನೇ ಸಾಲಿಗೆ ಅಂದಾಜಿಸಿದಂತೆ ಅಂಕಿಅಂಶಗಳ ವರದಿ ಪ್ರಕಾರ ಜಿಲ್ಲೆಯಲ್ಲಿ 3,85,237 ಕಟುಂಬಗಳಿದ್ದು 12,26,357 ಜನಸಂಖ್ಯೆ ಇದೆ. ಇದುವರೆಗೆ 2,65,119 ಕುಟುಂಬಗಳ 9,03,742 ಜನರ ಸಮೀಕ್ಷೆ ನಡೆಸಲಾಗಿದ್ದು ಶೇಕಡ 79.19% ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಿರ್ಭೀತಿಯಿಂದ ಸಮೀಕ್ಷೆಗೆ ಸಹಕರಿಸಿ
ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವ ಉದ್ದೇಶವಾಗಿದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಸಮೀಕ್ಷೆಯ ದತ್ತಾಂಶ ಗೌಪ್ಯತೆ ಕಾಪಾಡಲಿದೆ. ಜೊತೆಗೆ ದತ್ತಾಂಶವು ಸೋರಿಕೆ ಆಗುವುದಿಲ್ಲ. ಸಾರ್ವಜನಿಕರು ನಿರ್ಭಿತಿಯಿಂದ ಸಮೀಕ್ಷೆಗೆ ಸಹಕರಿಸಿ ಗಣತೀದಾರರಿಗೆ ಮಾಹಿತಿ ನೀಡಿ ಎಂದರು.

ಸಮೀಕ್ಷೆ ಕುರಿತಂತೆ 6000 ಸ್ವಸಹಾಯ ಗುಂಪುಗಳ ಮಹಿಳೆಯರಿಂದ ಗ್ರಾಮಗಳಲ್ಲಿ ಅರಿವು ಮೂಡಿಸಲಾಗಿದೆ, ನಗರಸಭೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಚತಾ ವಾಹಿನಿಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ. ಬಾಕಿ ಉಳಿದಿರುವ ಸಾರ್ವಜನಿಕರು ಸಮೀಕ್ಷೆಯಲ್ಲಿ ಭಾಗವಹಿಸಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಿ ಎಂದರು.

ಸಹಾಯವಾಣಿ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರಲಿದ್ದಾರೆ ಗಣತಿದಾರರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಸಮೀಕ್ಷೆಯಲ್ಲಿ ಬಿಟ್ಟು ಹೋದ ಕುಟುಂಬಗಳು, ಭಾಗವಹಿಸದೇ ಇರುವವರು ಸಹಾಯವಾಣಿ ಸಂಪರ್ಕಿಸಿದರೆ ಗಣತಿದಾರರು ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆ ಮಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999, ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಈ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಇತರರು ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]