ಹಾಸನ: ವರ್ಷಕ್ಕೊಮ್ಮೆಯಷ್ಟೇ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಸನಾಂಬೆಯ (Hassanamba) ದರ್ಶನೋತ್ಸವ ಇಂದು ಚಾಲನೆ ನೀಡಲಾಗಿದೆ.
ಗುರುವಾರ ಬೆಳಿಗ್ಗೆಯಿಂದ ದೇವಾಲಯದ ಆವರಣದಲ್ಲಿ ವಿವಿಧ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು. ಅಂತಿಮವಾಗಿ 12.30 ರ ಆಸುಪಾಸಿನಲ್ಲಿ ಅರ್ಚಕರ ವೇದಘೋಷಗಳ ಮಧ್ಯೆ ಹಾಸನಾಂಬೆ ದೇಗುಲವನ್ನ ತೆರೆಯಲಾಯ್ತು.
ಸಚಿವ ಕೃಷ್ಣಭೈರೇಗೌಡ, ಶಾಸಕ ಶಿವಲಿಂಗೇಗೌಡ ಸೇರಿದಂತೆ ಅನೇಕರು ಈ ವೇಳೆ ಉಪಸ್ಥಿತರಿದ್ದರು.
ಇನ್ನು ದೇವಿಯ ದರ್ಶನಕ್ಕೆ ಬರುವ ಭಕ್ತಾಧಿಗಳಿಗೆ ಜಿಲ್ಲಾಡಳಿತದಿಂದ ಹಲವು ನಿಯಮ ಹೇರಲಾಗಿದೆ.. ಎಲ್ಲ ಭಕ್ತರೂ ಸಾಂಪ್ರದಾಯಿಕ ಉಡುಗೆಗಳನ್ನೇ ಧರಿಸಿಕೊಂಡು ಬರಬೇಕು.
ಜೊತೆಗೆ, ವಿಐಪಿ ಟಿಕೆಟ್, ಹಣಕ್ಕೆ ಖರೀದಿಸಿದ ವಿಶೇಷ ದರ್ಶನ ಟಿಕೆಟ್ ಹಾಗೂ ಧರ್ಮದರ್ಶನ ಮಾಡುವ ಭಕ್ತರಿಗೆ ಪ್ರತ್ಯೇಕ ಸಮಯ ಮತ್ತು ಸರತಿ ಸಾಲುಗಳನ್ನು ವ್ಯವಸ್ಥೆ ಮಾಡಲಾಗಿದೆ.
ಕಳೆದ ವರ್ಷ ವಿಐಪಿ ದರ್ಶನಕ್ಕೆ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಈ ಬಾರಿ ಸಂಸ್ಕೃತಿ ಇರುವುದಿಲ್ಲ. ಎಂದು ಕಂದಾಯ ಸಚಿವರು ಮತ್ತು ಹಾಸನ ಜಿಲ್ಲಾ ಉಸ್ತುವಾರಿಯೂ ಆಗಿರುವ ಕೃಷ್ಣ ಬೈರೇಗೌಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಸುಮಾರು 120 ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದ್ದು, ಅವುಗಳ ನಿರ್ವಹಣೆಗೆ ಓರ್ವ ಸಿಬ್ಬಂದಿ ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.