ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್.ಗವಾಯಿ (B.R.Gawai) ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಪ್ರಕರಣದ ವಿಚಾರದಲ್ಲಿ ಬಿಜೆಪಿ (BJP) ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವರು ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದರ ಬೆನ್ನಲ್ಲೇ, ದೊಡ್ಡಬಳ್ಳಾಪುರದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಕಾನೂನು ಘಟಕದಿಂದ ದೂರು ನೀಡಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕಾಂಗ್ರೆಸ್ ಯುವ ಮುಖಂಡರು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರಿಗೆ, ಭಾರತದ ಮುಖ್ಯ ನ್ಯಾಯಮೂರ್ತಿ ಗೌರವಾನ್ವಿತ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯುವ ಘಟನೆಗೆ ಬೆಂಬಲವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ವಕ್ತಾರ ಭಾಸ್ಕರ್ ರಾವ್ ವಿರುದ್ಧ ದೂರು ನೀಡಿದ್ದಾರೆ.

ಈ ವೇಳೆ ರಾಜ್ಯ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಎಚ್.ಎನ್., ರಾಜ್ಯ ಕಾರ್ಯದರ್ಶಿ ನವೀನ್ ಕುಮಾರ್ ಬಿ.ಸಿ., ಬೆಂಗಳೂರು ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ಬೆಂಗಳೂರು ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ನವೀನ್ ಕುಮಾರ್ ಎಂ., ಉಪಾಧ್ಯಕ್ಷ ಹರ್ಷ ಹಾಗೂ ದೇವನಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂದೀಪ್ ಕೆ.ಎಂ. ಇದ್ದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಪ್ರಕರಣದ ವಿಚಾರದಲ್ಲಿ ಬಿಜೆಪಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.
ಪ್ರಶಂಸೆ
‘ಇದು ಕಾನೂನಿನ ಪ್ರಕಾರ ತಪ್ಪು ಎನಿಸಿದ್ದರೂ ಈ ವಯಸ್ಸಿನಲ್ಲಿ ಯಾವುದೇ ಪರಿಣಾಮ ಲೆಕ್ಕಿಸದೆ ನಿಲುವು ತೆಗೆದುಕೊಂಡು ಅದರಲ್ಲಿ ದೃಢವಾಗಿ ನಿಲ್ಲುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ’ ಎಂದು ವಕೀಲ ರಾಕೇಶ್ ಕಿಶೋರ್ ‘ಎಕ್ಸ್’ ಪೋಸ್ಟ್‌ಗೆ ಭಾಸ್ಕರ್ ರಾವ್ ಅವರು ಪ್ರತಿಕ್ರಿಯಿಸಿದ್ದರು.
ಪೊಸ್ಟ್ ಡಿಲೀಟ್
ಆ ಪೋಸ್ಟ್ ಅನ್ನು ಗಮನಿಸಿದ್ದ ಹಲವರು ಭಾಸ್ಕರ್ ಅವರನ್ನು ಟೀಕಿಸಿ ಆಕ್ರೋಶ ಹೊರಹಾಕಿದ್ದರು. ತಮ್ಮ ‘ಎಕ್ಸ್’ ಪೋಸ್ಟ್‌ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಅವರು ಆ ಪೋಸ್ಟ್ ಅನ್ನು ಅಳಿಸಿ ಹಾಕಿದ್ದರು.
ಕ್ಷಮಿಸಿ
ಬಳಿಕ ನೋವಾಗಿದ್ದರೆ ಕ್ಷಮಿಸಿ… ‘ಕೃತ್ಯ ಎಸಗಿದ (ವಕೀಲ) ವ್ಯಕ್ತಿಯ ನಡೆ ನನಗೆ ಆಘಾತವನ್ನು ಉಂಟು ಮಾಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಯಾವುದೇ ಸಮುದಾಯವನ್ನು ಅವಮಾನಿಸಿಲ್ಲ. ನನ್ನ “ಎಕ್ಸ್’ ಪೋಸ್ಟ್‌ನಿಂದ ಯಾರಿಗಾದರೂ ನೋವು ತಂದಿದ್ದರೆ ಕ್ಷಮಿಸಿ’ ಎಂದು ಭಾಸ್ಕರ್ ರಾವ್ ಪ್ರತಿಕ್ರಿಯಿಸಿದ್ದರು.