ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆ: ಕಮಲ-ದಳಕ್ಕೆ ಮೈತ್ರಿ ಗೊಂದಲ..!

Doddaballapura TAPMCS elections: Alliance confusion for BJP-JDS..!

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ(TAPMCS) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರವದಿ ಮುಕ್ತಾಯವಾಗಿದೆ. ನವೆಂಬರ್ 2ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣ ದಿನಾಂಕ ನಿಗದಿಯಾಗಿದೆ. ಆದರೆ ಇನ್ನು ಚುನಾವಣೆ ವೇಳಾಪಟ್ಟಿ ಪ್ರಕಟವಾಗಿಲ್ಲ.

ಈ ಹಿನ್ನೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು ‘ಬಿ’ ತರಗತಿಯಿಂದ(ಷೇರುದಾರರು) 6,557 ಜನ ಮತದಾರರು ಇದ್ದಾರೆ. ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘಗಳಿಂದ ‘ಎ’ ತರಗತಿಗೆ 20 ಜನ ಮತದಾನ ಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದಾರೆ.

13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ನಲ್ಲಿ ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ,1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ಸಹಕಾರಿ ಕ್ಷೇತ್ರದಲ್ಲಿ ಯಾವುದೇ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ನಡೆಯುವುದಿಲ್ಲ. ಆದರೂ ಸಹ ಮೂರು ರಾಜಕೀಯ ಪಕ್ಷಗಳಿಗು ಟಿಎಪಿಎಂಸಿಎಸ್ ಆಡಳಿತದ ಚುಕ್ಕಾಣಿ ನಮ್ಮ ಪಕ್ಷದವರ ಕೈಯಲ್ಲೇ ಇರಬೇಕು ಎನ್ನುವ ಪ್ರತಿಷ್ಟೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ.

ಸಂಘದ ಅಧಿಕಾರವದಿ ಮುಕ್ತಾಯವಾಗುತ್ತಿದಂತೆ ಅರ್ಹ ಹಾಗೂ ಸಮರ್ಥ ಅರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಮೊದಲ ಸುತ್ತಿನ ಪೂರ್ವಭಾವಿ ಸಭೆಗಳನ್ನು ನಡೆಸಿ ಆಕಾಂಕ್ಷಿಗಳ ಪಟ್ಟಿಯನ್ನು ಪಡೆದಿದ್ದಾರೆ.

ಪ್ರಸ್ತುತ ‘ಎ’ ತರಗತಿಯಿಂದ ನಿರ್ದೇಶಕರಾಗಿದ್ದ ಎಂ.ಗೋವಿಂದರಾಜು, ಎಂ.ವೆಂಕಟೇಶ್, ಡಿ.ಸಿದ್ದರಾಮಯ್ಯ ಅವರು ‘ಎ’ತರಗತಿಗೆ ಸ್ಪರ್ಧಿಸಲು ಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದು ಟಿಎಪಿಎಂಸಿಎಸ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಅರ್ಹತೆ ಪಡೆದಿದ್ದಾರೆ.

ಬಿಜೆಪಿಗೆ ಪ್ರತಿಷ್ಠೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬಿಜೆಪಿ ಶಾಸಕರು ಅಧಿಕಾರದಲ್ಲಿ ಇರುವ ಹಿನ್ನೆಲೆಯಲ್ಲಿ ಟಿಎಪಿಎಂಸಿಎಸ್ನಲ್ಲಿ ಹೆಚ್ಚಿನ ನಿರ್ದೇಶಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವ ಪ್ರತಿಷ್ಠೆಯಾಗಿದೆ.

ಸೋಮವಾರ ಕಾಂಗ್ರೆಸ್ ಪಟ್ಟಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಹೆಚ್ಚಿನ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಪಕ್ಷ ಸಂಘಟನೆಗೆ ಈ ಚುನಾವಣೆಯನ್ನು ದಿಕ್ಸೂಚಿಯಾಗಿಸಿಕೊಳ್ಳುವ ತವಕ ಕಾಂಗ್ರೆಸ್ಗಿದ್ದು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿಸಿದ್ದು, ಅಂತಿಮವಾಗಿ ಪರಿಶೀಲಿಸಿ ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಜೆಡಿಎಸ್‌ಗೆ ಮೈತ್ರಿ ಗೊಂದಲ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಅವರ ನೇತೃತ್ವದಲ್ಲಿ ಹಲವು ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದೆ. ಆದರೆ ಇತ್ತೀಚೆಗೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಪಂಚಾಯಿತಿಯಿಂದ ಶಾಸಕ ಸ್ಥಾನದವರೆಗೆ ಜೆಡಿಎಸ್- ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಡೆ ಬಿದ್ದಿದೆ ಎನ್ನಲಾಗುತ್ತಿದೆ.

ಜೆಡಿಎಸ್ ಪಕ್ಷದ ಕೆಲ ಮುಖಂಡರು ಬಿಜೆಪಿಯೊಂದಿಗಿನ ಎನ್ಡಿಎ ಮೈತ್ರಿಯನ್ನು ಮುಂದುವರೆಸಿಕೊಂಡು ಹೋಗಬೇಕು ಎನ್ನುವವಾದ ಹಾಗೂ ಕೆಲವರು ಕಾಂಗ್ರೆಸ್ ಅಥವಾ ಸ್ವತಂತ್ರವಾಗಿಯೇ ಸ್ಪರ್ಧಿಸಿದರೆ ಆಕಾಂಕ್ಷಿಗಳಿಗೆ ಹೆಚ್ಚಿನ ಸ್ಥಾನ ದೊರೆಯಲಿವೆ, ಪಕ್ಷ ಸಂಘಟನೆಗು ಸಹಕಾರಿಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]