ಗೌರಿಬಿದನೂರು: ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು 22 ವರ್ಷದ ಸ್ವರ್ಣ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡ್ತಿದ್ದ ಸ್ವರ್ಣ,ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬಳಿಕ ಮನೆಗೆ ಬಂದಿದ್ದ ಮಗಳನ್ನ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರಂತೆ
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವರ್ಣ ಸಾವನಪ್ಪಿದ್ದಾರೆ.
ಕಳೆದ 3 ತಿಂಗಳ ಹಿಂದೆ ತಂದೆಕೂಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರಂತೆ.
ಒಂದ್ಕಡೆ ಗಂಡ ಮತ್ತೊಂದ್ಕಡೆ ಮಗಳು ಆತ್ಮಹತ್ಯೆ ಹಾದಿ ಹಿಡಿದಿದ್ದಕ್ಕೆ ದಿಕ್ಕು ತಾಯಿ ತೋಚದಂತಾಗಿದ್ದಾರೆ.
ಯುವತಿಯ ಆತ್ಮಹತ್ಯೆ (Suicide) ಬಗ್ಗೆ ಮಾಹಿತಿ ಪಡೆದ ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.