MLA Munirathna Hydrama at DCM DK Shivakumar's program..!

ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮ..!

ಬೆಂಗಳೂರು: ನಗರದ ಉದ್ಯಾನವನಗಳಲ್ಲಿ ನಾಗರೀಕರು ಹಾಗೂ ವಾಯು ವಿಹಾರಿಗಳ ಧ್ವನಿ ಆಲಿಸಲು ವಿನೂತನವಾಗಿ ರೂಪಿಸಿರುವ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರು ಭಾನುವಾರ ಬೆಳಗ್ಗೆ ಜೆಪಿ ಪಾರ್ಕ್ ಉದ್ಯಾನದಲ್ಲಿ ಜನಸಾಮಾನ್ಯರ ಜತೆ ಹೆಜ್ಜೆ ಹಾಕಿದರು.

ಅವರ ಅಹವಾಲು ಆಲಿಸಿದರು, ಸಲಹೆಗಳನ್ನು ಪಡೆದರು. ಸಂವಾದ ನಡೆಸಿದರು, ಸಮಸ್ಯೆಗಳ ಪರಿಹಾರದ ಭರವಸೆ ನೀಡಿದರು.

ಈ ವೇಳೆ ಸ್ಥಳೀಯ ಶಾಸಕ ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲವೆಂದು ಹೈಡ್ರಾಮ ಸೃಷ್ಡಿಸಿದ ಕಾರಣ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು.

ಜನರ ಜೊತೆ ಕುಳಿತ್ತಿದ್ದ ಮುನಿರತ್ನ (Munirathna) ಅವರನ್ನು ಶಾಸಕ ಬನ್ನಿ ಎಂದರು, ಈ ವೇಳೆ ಮುನಿರತ್ನ ಗಮನಿಸದೆ ಇದ್ದಾಗ ಕರಿ ಟೋಪಿ ಶಾಸಕರೇ ಬನ್ನಿ ಮೇಲೆ, ಇದೇನು ಹೊಸದಾಗಿ ಕರಿ ಟೋಪಿ ಎಂದು ಡಿಕೆ ಕಿಚಾಯಿಸಿದರು.

ಮುನಿರತ್ನ ಧನ್ಯವಾದ

ಡಿಕೆ ಶಿವಕುಮಾರ್ ಅವರ ಕರೆಯ ಹಿನ್ನೆಲೆಯಲ್ಲಿ ವೇದಿಕೆಗೆ ಬಂದ ಮುನಿರತ್ನ ಮೈಕ್ ಕೊಡಿ ಕೊಡಿ ಕೇಳಿದ್ದಾರೆ. ಆದರೆ ಇದಕ್ಕೆ ಈಗ ಆಗಲ್ಲ ಆಮೇಲೆ ಕೊಡ್ತೀನಿ ಹೋಗಿ ಕೂತುಕೊಳ್ಳಿ ಎಂದು ಹೇಳಿದರು‌

ಪಟ್ಟು ಬಿಡದ ಮುನಿರತ್ನ ಡಿಕೆ ಶಿವಕುಮಾರ್ ಕೈಯಿಂದ ಮೈಕ್ ಪಡೆದು ವೇದಿಕೆಗೆ ಆಹ್ವಾನಿಸಿದಕ್ಕೆ ಧನ್ಯವಾದ ಅರ್ಪಿಸಿದರು‌.

ಮುನಿರತ್ನ ಆಕ್ರೋಶ

ಬಳಿಕ ಅಧಿಕಾರಿಗಳು ಸ್ವಾಗತ ಕೋರುವ ವೇಳೆ ರೊಚ್ಚಿಗೆದ್ದ ಮುನಿರತ್ನ ಅವರು ಶಾಸಕರಿಗೆ, ಸಂಸದರಿಗೆ ಆಹ್ವಾನ ನೀಡಿಲ್ಲ. ಇದು ಕಾಂಗ್ರೆಸ್ ಕಾರ್ಯಕ್ರಮವಲ್ಲ, ಸರ್ಕಾರಿ ಕಾರ್ಯಕ್ರಮ ಎಂದು ಜೋರಾಗಿ ಹೇಳಿದರು.

ಈ ವೇಳೆ ಮುನಿರತ್ನ ಹಾಗೂ ಕಾರ್ಯಕರ್ತರ ನಡುವೆ ವೇದಿಕೆ ಮೇಲೆಯೇ ತಳ್ಳಾಟ ನೂಕಾಟ ನಡೆದಿದ್ದು ಮೈಕ್ ಕಿತ್ತು ಕಳಿಹಿಸಿ ಅವನನ್ನು ಎಂದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕೂಡಲೇ ಮೈಕ್ ಆಫ್ ಮಾಡಿ ಮುನಿರತ್ನ ಕೈಯಿಂದ ಮೈಕ್ ಕಿತ್ತುಕೊಳ್ಳಲು ಪೊಲೀಸರ ಮುಂದಾಗಿದ್ದಾರೆ.

ಆದರೂ ಮೈಕ್ ಅನ್ನು ಕೊಡಲು ಹಿಂದೇಟು ಹಾಕಿದ್ದಾರೆ. ಕೊನೆಯಲ್ಲಿ ಹೇಗೋ ಹರಸಾಹಸ ಪಟ್ಟು ಮೈಕ್ ಅನ್ನು ಕಿತ್ತುಕೊಂಡು ವೇದಿಕೆ ಮೇಲಿಂದಲೇ ಎತ್ತಿಕೊಂಡು ಹೋಗಿ ಪಾರ್ಕ್ ನ ಹೊರಗಡೆ ಬಿಟ್ಟಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರೇಪಿಸ್ಟ್ ಮುನಿ ಎಂದು ಕೂಗಿದರು.

ಬಳಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಮುನಿರತ್ನ ಜೆಪಿ ಪಾರ್ಕ್ ಗೇಟ್ ಬಳಿ ಧರಣಿ ಕುಳಿತರು‌. ಅಲ್ಲದೇ ನನ್ನ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿದ್ದಾರೆ. ಆರ್ ಎಸ್ ಎಸ್ ವೇಷಕ್ಕೆ ಗೌರವ ಕೊಟ್ಟಿಲ್ಲ. ಶಾಸಕನಿಗೆ ಹೇಗೆ ಮರ್ಯಾದೆ ಕೊಡಬೇಕು ಡಿಕೆ ಶಿವಕುಮಾರ್ಗೆ ಗೊತ್ತಿಲ್ವಾ?, ಒಂದು ಹೆಣ್ಣಿಗಾಗಿ ನನ್ನ ಕ್ಷೇತ್ರದಲ್ಲಿ ಹೈಡ್ರಾಮ ಸೃಷ್ಟಿಸುತ್ತಿದ್ದಾರೆ ಎಂದು ಮುನಿರತ್ನ ಆಕ್ರೋಶ ಹೊರಹಾಕಿದ್ದಾರೆ.

ಸೂಕ್ತ ಸಮಯದಲ್ಲಿ ಉತ್ತರ ನೀಡಲು ಜನರಿಗೆ ಕರೆ: ಡಿಸಿಎಂ ಕರೆ

“ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಂವಾದ ವೇಳೆ ಶಿವಕುಮಾರ್ ಅವರು ಮಾತನಾಡಿದರು.

ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.

“ಸ್ಥಳೀಯ ಶಾಸಕ ಮುನಿರತ್ನ ಅವರಿಗೆ ತಾಳ್ಮೆಯಿಲ್ಲ. ಅವರು ಕಾರ್ಯಕ್ರಮವನ್ನು ಹಾಳು ಮಾಡಬೇಕು ಎಂದೇ ಬಂದರೋ ಏನೋ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೂ ತಲೆಕೆಡಿಸಿಕೊಳ್ಳಬೇಡಿ. ಇಂತಹವರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ನಿಮ್ಮ ಮನಸ್ಸಿಗೆ ಬಹಳ ನೋವಾಗುತ್ತಿದೆ ಎಂದು ನನಗೆ ಚನ್ನಾಗಿ ಗೊತ್ತಿದೆ. ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಉತ್ತರ ನೀಡಿ” ಎಂದು ಹೇಳಿದರು.

“ಇಂತಹ ಪ್ರತಿನಿಧಿಯನ್ನು (ಮುನಿರತ್ನಂ ನಾಯ್ಡು) ಇಟ್ಟುಕೊಳ್ಳುವುದೋ, ಬೇಡವೋ ಎಂಬುದನ್ನು ಜನ ತೀರ್ಮಾನ ಮಾಡಬೇಕು. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗುವುದಿಲ್ಲ. ಜನಪ್ರತಿನಿಧಿಗಳಿಗೆ ಏನು ಗೌರವ ನೀಡಬೇಕು ಎನ್ನುವ ಅರಿವು ನನಗಿದೆ. ರಾಜಕಾರಣದಲ್ಲಿ ಸೋಲು, ಗೆಲುವು ಇದ್ದೇ ಇರುತ್ತದೆ ಯಾವುದೂ ಶಾಶ್ವತವಲ್ಲ” ಎಂದು ತಿಳಿಸಿದರು.

ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ಮಾಜಿ ಕಾರ್ಪೊರೇಟರ್ ನಂಜುಂಡಪ್ಪ, ಅಪರ ಆಯುಕ್ತರಾದ ಲತಾ, ಜಂಟಿ ಆಯುಕ್ತರಾದ ಮೊಮಿನ್‌, ಬಿ‌.ಎಸ್.ಡಬ್ಲ್ಯೂ.ಎಂ.ಎಲ್ ನ ಸಿಇಒ ಕರೀಗೌಡ ಮತ್ತಿತರರು ಉಪಸ್ಥಿತರಿದ್ದರು.DCM

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!