ದೊಡ್ಡಬಳ್ಳಾಪುರ: ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ ಪದಕ (Gold medal) ಪಡೆದಿದ್ದಾರೆ.
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ 50ನೇ ಗೋಲ್ಡನ್ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ಆಯೋಜಿಸಲಾಗಿತ್ತು.
ರಾಜ್ಯ ಅಮೇಚೂರ್ ಯೋಗ ಸ್ಪೋರ್ಟ್ಸ್ ಅ. ಕಾರ್ಯದರ್ಶಿ ಎ.ನಟರಾಜ್ ಮತ್ತಿತರರು ವಿ.ವರ ಪ್ರಸಾದ್ ಅವರನ್ನು ಅಭಿನಂದಿಸಿದರು.