ಬೆಂ.ಗ್ರಾ.ಜಿಲ್ಲೆ: 2025-26ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ‘ನನ್ನ ಮತ ನನ್ನ ಹಕ್ಕು’ ಛಾಯಾಗ್ರಹಣ ಸ್ಪರ್ಧೆಯನ್ನು (Photography competition) ಏರ್ಪಡಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಗೊಳಪಡುವ ಕಾಲೇಜು ವಿದ್ಯಾರ್ಥಿಗಳು ಮಾತ್ರ ಛಾಯಾಗ್ರಹಣ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಪ್ರತಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 15 ಸಾವಿರ, ದ್ವಿತೀಯ ಸ್ಥಾನಕ್ಕೆ 10 ಸಾವಿರ, ತೃತೀಯ ಸ್ಥಾನಕ್ಕೆ 5 ಸಾವಿರ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 25 ಸಾವಿರ, ದ್ವಿತೀಯ ಸ್ಥಾನಕ್ಕೆ 15 ಸಾವಿರ, ತೃತೀಯ ಸ್ಥಾನಕ್ಕೆ 10 ಸಾವಿರ ಬಹುಮಾನವನ್ನು ನೀಡಲಾಗುವುದು.
ಇನ್ನೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 1 ಲಕ್ಷ, ದ್ವಿತೀಯ ಸ್ಥಾನಕ್ಕೆ 50 ಸಾವಿರ, ತೃತೀಯ ಸ್ಥಾನಕ್ಕೆ 25 ಸಾವಿರವನ್ನು ಬಹುಮಾನವನ್ನಾಗಿ ನೀಡಲಾಗುವುದು.
ಮತದಾನ ಹಕ್ಕಿನ ಕುರಿತಾಗಿ ಪೋಟೋಗಳನ್ನು ಸೆರೆಹಿಡಿದು http://www.democracydaykarnataka.in ವೆಬ್ಸೈಟ್ ನಲ್ಲಿ ಅಕ್ಟೋಬರ್ 28 ರೊಳಗೆ ಅಪ್ಲೋಡ್ ಮಾಡಬೇಕು.
ಛಾಯಾಗ್ರಹಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನವೆಂಬರ್ 26ರ ಸಂವಿಧಾನ ದಿನಾಚರಣೆಯಂದು ಬಹುಮಾನವನ್ನು ವಿತರಿಸಲಾಗುವುದು. ಆಯ್ಕೆಗಾರರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ, ದೂ. ಸಂಖ್ಯೆ:080-29787447 ಅಥವಾ 2ನೇ ಮಹಡಿ, ಕೊಠಡಿ ನಂ 217, ಜಿಲ್ಲಾಡಳಿತ ಭವನ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕಿಸಬಹುದು.
ಸಹಾಯಕ ನಿರ್ದೇಶಕರು ದೇವನಹಳ್ಳಿ ದೂ.ಸಂಖ್ಯೆ:080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂಖ್ಯೆ: 080-27623681, ಹೊಸಕೋಟೆ ತಾಲ್ಲೂಕು ದೂ.ಸಂಖ್ಯೆ: 080-27931528, ನೆಲಮಂಗಲ ತಾಲ್ಲೂಕು ದೂ.ಸಂಖ್ಯೆ: 080-27723172 ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೋಟೋ ಕೃಪೆ: ಜಿ.ರಾಜು, ಅಂತಾರಾಷ್ಟ್ರೀಯ ಛಾಯಾಗ್ರಾಹಕ