ಹಾಸನಾಂಬ ತಾಯಿ ಆಶೀರ್ವಾದದಿಂದ ಎಲ್ಲರ ಆಶಯಗಳು ಈಡೇರಲಿ: ಡಿಸಿಎಂ ಡಿ.ಕೆ. ಶಿವಕುಮಾರ್

May everyone's wishes be fulfilled with the blessings of Mother Hassanamba: DCM D.K. Shivakumar

ಹಾಸನ: “ರಾಜ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಆಡಳಿತ ವ್ಯವಸ್ಥೆ ನಡೆಯುತ್ತಿದೆ. ಇದಕ್ಕೆ ಜನರ ಹಾಗೂ ತಾಯಿ ಹಾಸನಾಂಬೆಯ ಆಶೀರ್ವಾದ ಕಾರಣ‌.‌ ತಾಯಿಯ ಆಶೀರ್ವಾದದಿಂದ ಎಲ್ಲರ ಆಶಯಗಳು ಈಡೇರಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಮಂಗಳವಾರ ಸಂಜೆ ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ದುಃಖವನ್ನು ದೂರ ಮಾಡುವವಳು ದುರ್ಗಾ ದೇವಿ. ಶಕ್ತಿ ಸ್ವರೂಪಿಣಿ, ತಾಯಿ ಹಾಸನಾಂಬೆಯ ದರ್ಶನವನ್ನ ಪ್ರತಿ ವರ್ಷ ತಪ್ಪದೇ ಮಾಡಿಕೊಂಡು ಬರುತ್ತಿದ್ದೇವೆ. ಜನರು ಸಹ ತಾಯಿಯ ಆಶೀರ್ವಾದ ಪಡೆದು ನೆಮ್ಮದಿ, ಶಾಂತಿ, ಬದುಕನ್ನು ಪಡೆಯಬೇಕು ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ. ಜನರಲ್ಲಿ ದೊಡ್ಡ ಸಂಭ್ರಮ ಮನೆ ಮಾಡಿದೆ” ಎಂದರು.

ಸಚಿವ ಕೃಷ್ಣ ಬೈರೇಗೌಡರ ಕಾರ್ಯಕ್ಕೆ ಶ್ಲಾಘನೆ

“ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಜನರು ಎಷ್ಟೇ ದೂರದಿಂದ ಬಂದರೂ ಸಹ ಒಂದು ಕ್ಷಣ ದೇವರ ಸಾನಿಧ್ಯದಲ್ಲಿ ಪ್ರಾರ್ಥನೆ ಮಾಡಿದರೆ ಏನೋ ನೆಮ್ಮದಿ ದೊರೆಯುತ್ತದೆ. ಹಾಸನ‌ ಜಿಲ್ಲಾ ಉಸ್ತುವಾರಿ ಸಚಿವರಾದ‌ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಜಿಲ್ಲಾಡಳಿತ ಅತ್ಯುತ್ತಮವಾಗಿ ವ್ಯವಸ್ಥೆ ಮಾಡಿ ಪ್ರತಿಯೊಬ್ಬರಿಗೂ ದರ್ಶನ ಭಾಗ್ಯ ಕಲ್ಪಿಸಿಕೊಟ್ಟಿದ್ದಾರೆ. ಬಹಳ ಶಿಸ್ತಿನಿಂದ ಕೆಲಸ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

“ಸಾರ್ವಜನಿಕರು ‌ಸಹ ಸಾಕಷ್ಟು ಸಹಕಾರ ನೀಡಿದ್ದಾರೆ. ತಮ್ಮ ಅಂಗಡಿಗಳ ಮುಂದೆ ದೀಪಾಲಂಕಾರ, ವಿವಿಧ ಬಗೆಯ ಅಲಂಕಾರ ಮಾಡಿದ್ದಾರೆ. ನಾನು ದೇವಿಯ ಭಕ್ತನಾಗಿ ಪ್ರತಿಯೊಬ್ಬರಿಗೂ ವಂದಿಸುತ್ತೇನೆ” ಎಂದರು.

ವಿಶೇಷವಾಗಿ ಏನಾದರೂ ಪ್ರಾರ್ಥನೆ ಮಾಡಿದ್ದೀರಾ ಎಂದು ಕೇಳಿದಾಗ, “ನಿಮಗೆ ಹಾಗೂ ನಮಗೆ ತಾಯಿ ಒಳ್ಳೆಯದನ್ನು ಮಾಡಲಿ. ರಾಜ್ಯಕ್ಕೆ ನೆಮ್ಮದಿ, ಶಾಂತಿ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ” ಎಂದರು.

ಹೆಚ್ಚಿನ ಅಧಿಕಾರಕ್ಕೆ ಏನಾದರೂ ಪ್ರಾರ್ಥನೆ ಮಾಡಿದ್ದೀರಾ ಎಂದಾಗ, “ನಾನುಂಟು ತಾಯಿಯುಂಟು. ನಾನುಂಟು ಭಕ್ತಿಯುಂಟು, ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ” ಎಂದು ಹೇಳಿದರು.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]