ಕಳಪೆ ರಸಗೊಬ್ಬರ, ಕ್ರಿಮಿನಾಶಕಗಳಿಂದ ಮಾರಕ ಪರಿಣಾಮ; ಹೆಚ್.ಡಿ. ಕುಮಾರಸ್ವಾಮಿ ಕಳವಳ

Poor quality fertilizers and pesticides have fatal effects; H.D. Kumaraswamy concerned

ಬೆಂಗಳೂರು: ಕಳಪೆ ರಸಗೊಬ್ಬರ, ಕಳಪೆ ಕೀಟನಾಶಕಗಳು ( fertilizers and pesticides) ರೈತನ ಬದುಕನ್ನು ನಾಶ ಮಾಡುತ್ತಿವೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನವನ್ನು ಉದ್ಘಾಟಿಸಿ ಕೇಂದ್ರ ಸಚಿವರು ಮಾತನಾಡಿದರು.‌

ಮನುಕುಲಕ್ಕೆ ಭೂಮಿ ಬಹಳ ಮುಖ್ಯ ಎಂಬುದನ್ನು ನಾವು ಮರೆಯಬಾರದು. ಮನುಷ್ಯನ ಆರೋಗ್ಯದಂತೆ ಭೂಮಿಯ ಆರೋಗ್ಯವು ಅತೀ ಮುಖ್ಯ. ಆದರೆ, ಕಳಪೆ ರಸಗೊಬ್ಬರ ಹಾಗೂ ಕೀಟನಾಶಕಗಳು ಮನುಷ್ಯ, ಭೂಮಿಯ ಆರೋಗ್ಯವನ್ನು ಹಾಳು ಮಾಡುತ್ತಿವೆ ಎಂದು ಕುಮಾರಸ್ವಾಮಿ ಅವರು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ತೆಂಗು ಬೆಳೆಗಾರರು ಕಷ್ಟದಲ್ಲಿ ಇದ್ದಾರೆ. ಕಪ್ಪುತಲೆ ಹುಳದ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ವತಃ ನನ್ನ ತೋಟವು ಈ ಸಂಕಷ್ಟಕ್ಕೆ ತುತ್ತಾಗಿದ್ದು, ತೆಂಗಿನ ಮರಗಳ ಗರಿಗಳು ಒಣಗುತ್ತಿವೆ. ಸ್ವತಃ ನಾನೇ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದು ಸಚಿವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿಗೆ ಹೆಚ್ಚು ಒತ್ತು ನೀಡಿದ್ದಾರೆ. ಹನ್ನೊಂದು ವರ್ಷಗಳ ಅವರ ಆಡಳಿತದಲ್ಲಿ ಕೃಷಿ ವಲಯಕ್ಕೆ ಹೆಚ್ಚು ಉತ್ತೇಜನ ಸಿಕ್ಕಿದೆ. ರಾಷ್ಟ್ರವು ಕೃಷಿಯಲ್ಲಿ ದೊಡ್ಡ ಸಾಧನೆಗಳನ್ನು ಮಾಡುತ್ತಿದೆ. ಪ್ರಧಾನಿಗಳಿಗೆ ರೈತರ ಬಗ್ಗೆ ಕಳಕಳಿ ಹೆಚ್ಚು, ರೈತರಿಗೆ ಆರ್ಥಿಕ ಶಕ್ತಿ ತುಂಬಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಇದೇ ವೇಳೆ ಸಚಿವರು ನುಡಿದರು.

ಬೇಳೆಕಾಳು ಬೆಳೆಯಲು ರೈತರು ಮುಂದಾಗಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದಾರೆ. ಕೇವಲ ಅಕ್ಕಿಯಿಂದ ಪೌಷ್ಟಿಕಾಂಶ ದೊರೆಯಲು ಸಾಧ್ಯವಿಲ್ಲ. ಆದ್ದರಿಂದ ದ್ವಿದಳ ಧಾನ್ಯದಿಂದ ಪೌಷ್ಟಿಕಾಂಶಗಳು ಸಿಗುತ್ತವೆ. ಈ ಹಿನ್ನೆಲೆಯಲ್ಲಿ ದ್ವಿದಳ ಧಾನ್ಯ ಉತ್ಪಾದನೆಗೆ ಮೋದಿ ಅವರು ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. ಇದಕ್ಕಾಗಿ ಅವರು ರೂ.35,000 ಕೋಟಿ ರೂ.ಗಳ ಯೋಜನೆಯನ್ನು ಘೋಷಣೆ ಮಾಡಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್, ಐಸಿಎಆರ್ ನಿರ್ದೇಶಕ ಡಾ. ಸುಶೀಲ್ ಸೇರಿದಂತೆ ಅನೇಕ ಕೃಷಿ ವಿಜ್ಞಾನಿಗಳು, ವಿವಿಧ ಜಿಲ್ಲೆಗಳಿಂದ ಬಂದಿದ್ದ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹಾಗೆಯೇ, ಪ್ರಗತಿಪರ ಹಾಗೂ ನಿಸರ್ಗ ಪ್ರೇರಿತ ಕೃಷಿ ಮಾಡುತ್ತಿರುವ ಅನೇಕ ರೈತರನ್ನು ಇದೇ ಸಂದರ್ಭದಲ್ಲಿ ಸಚಿವರು ಗೌರವಿಸಿದರು. ಜತೆಗೆ, ವಿಜ್ಞಾನಿಗಳ ಆವಿಷ್ಕಾರಗಳನ್ನು ಅನಾವರಣಗೊಳಿಸಿದರು.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!