ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

Indian cinema is looking at Kannada with admiration; H.D. Kumaraswamy

ಬೆಂಗಳೂರು: ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದರು.

ಕನ್ನಡ ಚಿತ್ರರಂಗಕ್ಕೆ ಭವ್ಯ ಇತಿಹಾಸವಿದೆ. ಗಟ್ಟಿ ಅಡಿಪಾಯವಿದೆ. ಡಾ. ರಾಜ್ ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರು ಕನ್ನಡ ಚಿತ್ರರಂಗವನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದ್ದಾರೆ. ಇದು ಇನ್ನಷ್ಟು ಭದ್ರವಾಗಬೇಕಾದರೆ ಹೆಚ್ಚೆಚ್ಚು ಸಿನಿಮಾಗಳು ಬರಬೇಕು. ಆ ಶ್ರೇಷ್ಠ ನಟರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ಪ್ರತಿಪಾದಿಸಿದರು.

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ಮಾತೃಭಾಷೆಯ ಸಿನಿಮಾಗಳು ಕಡಿಮೆ ಪ್ರಮಾಣದಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ಡಬ್ಬಿಂಗ್ ಸಿನಿಮಾಗಳನ್ನು ಜನ ನೋಡುತ್ತಿದ್ದಾರೆ. ನಮ್ಮಲ್ಲಿ ಉತ್ತಮ ನಿರ್ದೇಶಕರು, ಉತ್ತಮ ಕಥೆಗಳು ಲಭ್ಯ ಇರುವುದರಿಂದ ನಮ್ಮವೇ ಚಿತ್ರಗಳು ದೊಡ್ಡ ಸಂಖ್ಯೆಯಲ್ಲಿ ಬರಲಿ ಎನ್ನುವುದು ನನ್ನ ಆಶಯ ಎಂದು ಸಚಿವರು ಹೇಳಿದರು.

ಇವತ್ತು ಕನ್ನಡ ಚಿತ್ರರಂಗ ಎತ್ತರದ ಸಾಧನೆಗಳನ್ನು ಮಾಡುತ್ತಿದೆ. ಉತ್ತಮ ಸಿನಿಮಾಗಳು ಬರುತ್ತಿವೆ. ಭಾರತೀಯ ಚಿತ್ರರಂಗ ನಮ್ಮನ್ನು ಬೆರಗಿನಿಂದ ನೋಡುತ್ತಿದೆ. ಆದರೂ ಕನ್ನಡ ಚಿತ್ರಗಳು ಇನ್ನು ಹೆಚ್ಚಿನ ಸಂಖೆಯಲ್ಲಿ ಯಶಸ್ಸು ಸಾಧಿಸಬೇಕು ಹಾಗೂ ನಿರ್ಮಾಪಕರು ಉತ್ತಮ ಚಿತ್ರಗಳನ್ನು ನಿರ್ಮಿಸಲು ಅವಕಾಶ ಆಗಬೇಕು ಎಂದು ಕುಮಾರಸ್ವಾಮಿ ಅವರು ನುಡಿದರು.

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು; ನಿರ್ದೇಶಕರಾಗಿ, ನಿರ್ಮಾಪಕರಾಗಿ ಐದು ದಶಕಗಳ ಕಾಲ ನಿಲ್ಲುವುದು ಸುಲಭದ ಮಾತಲ್ಲ. ತಮ್ಮ ಇಡೀ ಕುಟುಂಬವನ್ನೇ ಚಿತ್ರರಂಗಕ್ಕೆ ಸಮರ್ಪಣೆ ಮಾಡಿಕೊಂಡ ಕುಟುಂಬ ಅವರದ್ದು.

ನಾನು ಚಿತ್ರ ಪ್ರದರ್ಶಕನಾಗಿ, ಹಂಚಿಕೆದಾರನಾಗಿ ಹಾಗೂ ನಿರ್ಮಾಪಕನಾಗಿ ಕೆಲಸ ಮಾಡಿದ್ದೇನೆ. ರಾಜೇಂದ್ರ ಸಿಂಗ್ ಬಾಬು ಅವರ ಚಿತ್ರಗಳನ್ನು ನಾನು ಹಂಚಿಕೆ ಮಾಡಿ ಪ್ರದರ್ಶಿಸಿದ್ದೇನೆ ಎಂದು ನೆನಪು ಮಾಡಿಕೊಂಡರು.

ಉತ್ತಮ ಕಥೆಗಳು, ಅಂದರೆ ಕಾದಂಬರಿ ಆಧರಿತ ಚಿತ್ರಗಳನ್ನು ನಿರ್ದೇಹಿಸುತ್ತಿದ್ದ ಪುಟ್ಟಣ್ಣ ಕಣಗಾಲ್, ಸಿದ್ಧಲಿಂಗಯ್ಯ ಅವರ ಸಾಲಿಗೆ ಸೇರುವಂತಹ ನಿರ್ದೇಶಕರು ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್ ಅಶ್ವತ್ಥನಾರಾಯಣ, ಮಾಜಿ ಸಚಿವ ಮುನಿರತ್ನ, ನಟ ಕಿಚ್ಚ ಸುದೀಪ್, ಬ್ರಹ್ಮಾಂಡ ಗುರೂಜಿ, ರಾಕ್ ಲೈನ್ ವೆಂಕಟೇಶ್, ಬಸಂತ ಕುಮಾರ್ ಪಾಟೀಲ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಪ್ರಕಾಶಕ ವೀರಕಪುತ್ರ ಶ್ರೀನಿವಾಸ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]