ದೊಡ್ಡಬಳ್ಳಾಪುರ: ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.
ಮೃತರನ್ನು ಚಿಕ್ಕತಿಮ್ಮನಹಳ್ಳಿ ನಿವಾಸಿಗಳಾದ ನಂದನ್ ಕುಮಾರ್(22 ವರ್ಷ) ಮತ್ತು ರವಿಕುಮಾರ್(24 ವರ್ಷ) ಎಂದು ಗುರುತಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರಕ್ಕೆ ಕೆಲಸಕ್ಕೆಂದು ದ್ವಿಚಕ್ರ ವಾಹನದಲ್ಲಿ ಬರುವ ವೇಳೆ ರಾಮಯ್ಯನಪಾಳ್ಯದ ಬಳಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಸಾವನಪ್ಪಿದ್ದಾರೆ.
ಶಂಕೆ
ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದ ಯುವಕರ ಮೇಲೆ ಆಟೋ ಒಂದು ಮೇಲೆ ಹರಿದು ಪರಾರಿಯಾಗಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.