Doddaballapura: Idol installation ceremony at the Eshwara temple..

ದೊಡ್ಡಬಳ್ಳಾಪುರ: ಈಶ್ವರ ದೇವಾಲಯದಲ್ಲಿ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ.. ಸಿದ್ಧಲಿಂಗ ಮಹಾಸ್ವಾಮೀಜಿ ಭಾಗಿ

ದೊಡ್ಡಬಳ್ಳಾಪುರ: ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ದೇವರಾಜ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ಈಶ್ವರ ದೇವಾಲಯದಲ್ಲಿ (Eshwara temple) ಮೂರು ದಿನಗಳ ಕಾಲ ಗಣೇಶ, ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಬಸವೇಶ್ವರ, ಆಂಜನೇಯ, ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಅ.25 ಸಂಜೆ 4-00 ಗಂಟೆಗೆ ಮಂಗಳವಾದ್ಯ ಸಮೇತ ಪೂರ್ಣಕುಂಭಗಳೊಡನೆ ಗಂಗಾಪೂಜೆ, ಆಲಯ ಪ್ರವೇಶ, ಮಹಾಗಣಪತಿ ಪೂಜಾ, ಶೈವ ಪುಣಣ್ಯಾಹ, ದೇವನಾಂದಿ ಪಂಚಗವ್ಯಾ ಪೂಜಾ, ಋತ್ವಿಗರಣ, ರಕ್ಷಾಬಂಧನ, ಅಸ್ತ್ರ ರಾಜಪೂಜಾ, ರಾಕ್ಷೆಜ್ಞ ಪೂಜಾ, ಅಂಕುರಾರೋಪಣ, ಕಳಶ ಸ್ಥಾಪನಾದಿ ಕಾರ್ಯ. ರಾತ್ರಿ 7-30 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಸಲಾಯಿತು.

ಅ.26 ರಂದು ಬೆಳಿಗ್ಗೆ 10-00 ಗಂಟೆಗೆ ಶ್ರೀ ಮಹಾಗಣಪತಿ ಪೂಜಾ, ಧ್ವಜಾರೋಹಣ, ಶೈವಾಗ್ನಿ ಪ್ರತಿಷ್ಠಾ. ಮಹಾಹೋಮ, ಪೂಜೆ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮ ನೂತನ ಕಳಶ ಪ್ರತಿಷ್ಠಾಪನೆ, ವಿಗ್ರಹ ಧಾನ್ಯಾಧಿವಾಸ, ಶೈಯ್ಯಾಧಿವಾಸ. ರಾತ್ರಿ 7-30 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನೆರವೇರಿತು.

ಅ.27 ರಂದು ಬೆಳಗಿನ ಜಾವ 4-30 ರಿಂದ 5-30 ಗಂಟಗೆ ಮಹಾಚಕ್ರ ಸ್ಥಾಪನೆ, ನವರತ್ನ ಪಂಚಲೋಹ ಸಮೇತ ವಿಗ್ರಹಗಳ ಪ್ರತಿಷ್ಠಾಪನೆಯನ್ನು ನೆರವೇರಿಸಲಾಗುತ್ತದೆ. ನಂತರ ಬೆಳಗ್ಗೆ 9-00 ರಿಂದ 9-45 ಗಂಟೆಯೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೇತ್ರೋಲನ, ಪೂರ್ಣಾಹುತಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸಿದ್ದರು..

ಈ ವೇಳೆ ಶ್ರೀಗಳಿಗೆ ಪಾದಪೂಜೆ ಸಲ್ಲಿಸಲಾಯಿತು.

ಈ ವೇಳೆ ಟ್ರಸ್ಟ್ ಗೌರವ ಅಧ್ಯಕ್ಷ ಎ.ರಾಜಣ್ಣ, ಅಧ್ಯಕ್ಷ ಎಲ್.ವೆಂಕಟೇಶ್, ಉಪಾಧ್ಯಕ್ಷ ಆರ್.ಲಕ್ಷ್ಮೀನಾರಾಯಣ್, ಪ್ರಧಾನ ಕಾರ್ಯದರ್ಶಿ ಜೆ.ಮಂಜುನಾಥ್, ಖಜಾಂಚಿ ಸತ್ಯನಾರಾಯಣ, ಕಾರ್ಯದರ್ಶಿ ಕೆ.ಎಸ್. ಬಾಲಕೃಷ್ಣ, ಸದಸ್ಯರಾದ ಜಿ.ವೆಂಕಟೇಶ್, ಎಸ್.ಶಿವಣ್ಣ, ಲತಾ ಆರಾಧ್ಯ, ಕೆ. ಭರತ್ ಕೃಷ್ಣಮೂರ್ತಿ, ವಸಂತ್ ಕುಮಾರ್.ಕೆ.ವಿ., ಬಿ.ಆರ್.ಜಯಶಂಕರ್, ಕೆ.ಗಂಗಾಧರ್, ಎಂ.ಮಂಜುನಾಥ್, ನಟರಾಜ್, ರಾಕೇಶ್, ಪ್ರಧಾನ ಅರ್ಚಕ ಕೆ.ಎನ್.ಶಶಿಧರ್‌ಸ್ವಾಮಿ, ನಗರಸಭೆ ಸದಸ್ಯ ಶಿವಶಂಕರ್ ಮತ್ತಿತರರಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!