If it is written on the forehead, D.K. Shivakumar will become CM, otherwise not: D.K. Suresh

ಹಣೆಯಲ್ಲಿ ಬರೆದಿದ್ದರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

ಬೆಂಗಳೂರು; “ನಮ್ಮ ಸಹೋದರ ಡಿ.ಕೆ.ಶಿವಕುಮಾರ್ (D.K. Shivakumar) ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು” ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ (D.K. Suresh) ಅವರು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು.

ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅಣ್ಣನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆಯಿದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ” ಎಂದರು.

ಪಕ್ಷನಿಷ್ಠರಾಗಿ ಡಿ.ಕೆ. ಶಿವಕುಮಾರ್ ನಡೆದುಕೊಳ್ಳುತ್ತಿದ್ದಾರೆ. ಅವರು ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಅವರು ಗಮನ ಹರಿಸುತ್ತಿಲ್ಲವಲ್ಲ ಎಂದು ಕೇಳಿದಾಗ, “ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ” ಎಂದು ಹೇಳಿದರು.

ನವೆಂಬರ್ 15 ರ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂದು ಕೇಳಿದಾಗ, “ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕು”ಎಂದರು.

2028 ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ

2028 ರ ಚುನಾವಣೆಗೂ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ಕೇಳಿದಾಗ, “ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ.‌ ಅವರು ನಮ್ಮ ನಾಯಕರು. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ” ಎಂದರು.

ಸಿದ್ದರಾಮಯ್ಯ ಅವರು ಅನಿವಾರ್ಯವೇ ಎಂದು ಕೇಳಿದಾಗ, “ಒಬ್ಬ ನಾಯಕನಿಗೆ ಇರಬೇಕಾದ ಎಲ್ಲಾ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ದಿನನಿತ್ಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ” ಎಂದರು.

ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಎನ್ನುವ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಹೆಚ್ಚು ಮಾಹಿತಿಯಿಲ್ಲ. ಇದು ಎರಡೂವರೆ ವರ್ಷದ ವಿಚಾರವಲ್ಲ. ಐದು ವರ್ಷಗಳ ಕಾಲ ಕೆಲಸ ಮಾಡಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. 140 ಸ್ಥಾನಗಳನ್ನು ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಯಬೇಕು. ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ‌ ಮಾಡುತ್ತಿವೆ” ಎಂದರು.

ನಾಯಕತ್ವ ಬದಲಾವಣೆಯ ಗೊಂದಲ ಆಡಳಿತದ ಮೇಲೆ ಪರಿಣಾಮ ಬೀರುತ್ತಿಲ್ಲವೇ ಎಂದು ಕೇಳಿದಾಗ, “ನನಗೆ ಆಡಳಿತ ನಡೆಸಿ ಅನುಭವವಿಲ್ಲ. ಸಂಸದನಾಗಿ ಇರುವುದೇ ಬೇರೆ. ಆಡಳಿತ ನಡೆಸುವುದೇ ಬೇರೆ” ಎಂದರು.

ಸರ್ಕಾರದ ಆಡಳಿತ ನೋಡಿ ಕಾರ್ಯಕರ್ತರು ತೃಪ್ತರಾಗಿದ್ದಾರೆಯೇ ಎಂದು ಕೇಳಿದಾಗ, “ಎಲ್ಲರನ್ನೂ ತೃಪ್ತಿಪಡಿಸಲು ಆಗುವುದಿಲ್ಲ. ಯಾವುದೇ ಸರ್ಕಾರ ಇದ್ದರೂ ನಾಯಕರು ಕಾರ್ಯಕರ್ತರ ಅಭಿಪ್ರಾಯ ಬೇರೆ, ಬೇರೆ ಇದ್ದೇ ಇರುತ್ತದೆ. ಇದನ್ನು ಸರಿದೂಗಿಸುವ ಕೆಲಸವನ್ನು ಪಕ್ಷ ಹಾಗೂ ನಾಯಕತ್ವ ಮಾಡುತ್ತದೆ” ಎಂದರು.

ಶ್ರಮಕ್ಕೆ ತಕ್ಕ ಪ್ರತಿಫಲ ಡಿ.ಕೆ. ಶಿವಕುಮಾರ್ ಅವರಿಗೆ ದೊರೆಯಲಿದೆಯೇ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಶಾಸಕರು ಕೇಳುವುದರಲ್ಲಿ ತಪ್ಪೇನಿಲ್ಲ” ಎಂದರು.

ಮೈಗೆ ಎಣ್ಣೆ ಸವರಿಕೊಂಡು ಉತ್ತರ ನೀಡಲು ಕುಳಿತಿದ್ದೀರಾ ಎಂದಾಗ, “ನಾನು ಎಂದಿಗೂ ಮೈಗೆ ಎಣ್ಣೆ ಹಚ್ಚಿಕೊಳ್ಳುವವನಲ್ಲ. ಒಳಗೆ ಹಾಕಿಕೊಳ್ಳುವವನಲ್ಲ. ನನಗೆ ಎರಡೂ ಅಭ್ಯಾಸ ಇಲ್ಲ” ಎಂದರು.

ಸಮುದಾಯವಾರು ಡಿಸಿಎಂ ಸ್ಥಾನ ನೀಡಬೇಕು ಎನ್ನುವ ಕೂಗಿನ ಬಗ್ಗೆ ಕೇಳಿದಾಗ, “ಎಲ್ಲರ ಸಲಹೆಗಳನ್ನು ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿಗಳು ಗಮನಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಾರೆ. ಇದರಲ್ಲಿ ನನ್ನ ಪಾತ್ರ ಹಾಗೂ ಹೇಳಿಕೆ ಅಪ್ರಸ್ತುತ” ಎಂದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಕಚೇರಿಗಳಿಗೆ ಬೀಗ ಹಾಕಬೇಕಾಗುತ್ತದೆ ಎನ್ನುವ ಕೆ.ಎನ್. ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಹಿರಿಯ ನಾಯಕರಾದ ಅವರು ಸಲಹೆಗಳನ್ನು ನೀಡುತ್ತಿದ್ದಾರೆ. ತಮ್ಮ ಸಲಹೆಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತಿದ್ದಾರೆ” ಎಂದರು.

ಆರ್‌ ಎಸ್ ಎಸ್ ತನ್ನ ಕೆಲವು ಬದಲಾವಣೆ ಮಾಡಿಕೊಳ್ಳಬೇಕು

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಅನುಮತಿ ವಿಚಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಬಗ್ಗೆ ಕೇಳಿದಾಗ, “ಆರ್‌ ಎಸ್ ಎಸ್ ಪಥಸಂಚಲ‌ನಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ದೊಣ್ಣೆ ಹಿಡಿದುಕೊಂಡು ಮಾಡುವ ಪಥ ಸಂಚಲನಕ್ಕೆ ವಿರೋಧವಿದೆ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನ ಹಿಂದಿನ ಕಾಲದಲ್ಲಿ ಸರಿ ಎನಿಸುತ್ತಿತ್ತು. ಬೇರೆಯವರು ಇದೇ ಸಂದರ್ಭದಲ್ಲಿ ಲಾಠಿ ಹಿಡಿದು ಓಡಾಡುವುದಕ್ಕೆ ಅವಕಾಶ ನೀಡುತ್ತೀರಾ ಎನ್ನುವುದು ಇಲ್ಲಿನ ಪ್ರಶ್ನೆ” ಎಂದರು.

“ಇವರು ದೊಣ್ಣೆ ಹಿಡಿದು ಓಡಾಡುತ್ತಾರೆ. ಬೇರೆ ಸಮುದಾಯ, ಸಂಘಟನೆಗಳು ಇದೇ ಕೆಲಸ ಮಾಡಿದರೆ ಆಗ ಏನಾಗುತ್ತದೆ ಎನ್ನುವುದನ್ನು ಚಿಂತನೆ ಮಾಡಬೇಕಾದ ಕಾಲವಿದು. ಅದರ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಈ ಮೊದಲು ಆರ್ ಎಸ್ ಎಸ್ ನವರು ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಧರಿಸುತ್ತಿದ್ದಾರೆ. ಅಂದರೆ ಬದಲಾವಣೆಗಳನ್ನು ಅವರೂ ಸಹ ಮಾಡಿಕೊಳ್ಳಬೇಕು. ನಾನು ಅವರಿಗೆ ಹೇಳುವಷ್ಟು ದೊಡ್ಡವನಲ್ಲ. ಅವರೇ ಇದರ ಬಗ್ಗೆ ಅರಿತುಕೊಂಡರೆ ಒಳ್ಳೆಯದು” ಎಂದರು.

ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಬಗ್ಗೆ ಕೇಳಿದಾಗ, “ತಪ್ಪೇನೂ ಇಲ್ಲ. ಸಮಾವೇಶ ಮಾಡುವುದು ತಪ್ಪಲ್ಲ. ಪಕ್ಷದ ಸಂಘಟನೆಗೆ ಇದು ಶಕ್ತಿ” ಎಂದರು.

ಪಕ್ಷದ ಅಡಿಯಲ್ಲಿಯೇ ಕಾರ್ಯಕ್ರಮ ಮಾಡುತ್ತಾರೆಯೇ ಎಂದು ಕೇಳಿದಾಗ, “ಅದು ಅವರವರಿಗೆ ಸಂಬಂಧಪಟ್ಟಿದ್ದು. ಯಾವ ವಿಚಾರವಾಗಿ ಮಾಡುತ್ತಿದ್ದಾರೆ, ಯಾರು ಮಾಡುತ್ತಿದ್ದಾರೋ ಅವರಿಗೆ ಬಿಟ್ಟಿದ್ದು” ಎಂದರು.

“ಗಾಂಧಿ ಭಾರತ ಕಾರ್ಯಕ್ರಮ ನಡೆಯುವ ವೇಳೆಯಲ್ಲಿಯೇ ನೂರು ಕಾಂಗ್ರೆಸ್ ಕಚೇರಿಗಳನ್ನು ಕಟ್ಟಬೇಕು ಎಂದು ತೀರ್ಮಾನ ಮಾಡಲಾಗಿತ್ತು. ಎಲ್ಲೆಲ್ಲಿ ನಿವೇಶನಗಳಿವೆಯೋ ಅಲ್ಲೆಲ್ಲಾ ಕಚೇರಿ ನಿರ್ಮಾಣಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪಕ್ಷದ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು ನೀಡುತ್ತಾರೆ” ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!