Raising voice against exploitation: Deputy Commissioner A.B. Basavaraju

ಶೋಷಣೆ ವಿರುದ್ಧ ಧ್ವನಿ ಎತ್ತಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬೆಂ.ಗ್ರಾ. ಜಿಲ್ಲೆ: ಮಹಿಳೆಯರು ಮತ್ತು ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗದಂತೆ ಅವರನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ (DC) ಎ.ಬಿ. ಬಸವರಾಜು (A.B. Basavaraju) ಅವರು ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಹಾಗೂ ITPA 1956ರ ಕಾಯ್ದೆಯ’ ಬಗ್ಗೆ ಕ್ಷೇತ್ರ ಮಟ್ಟದ ಭಾಗೀದಾರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಎಲ್ಲಾ ಇಲಾಖೆಗಳು ಪರಸ್ಪರ ಸಹಯೋಗದಿಂದ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಜೊತೆಗೆ ಜಿಲ್ಲೆಯಲ್ಲಿ ಈ ಕುರಿತು ಸಾಕಷ್ಟು ಜಾಗೃತಿ ಕಾರ್ಯಕ್ರಮಗಳು ಇನ್ನೂ ಹೆಚ್ಚು ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಗೆ ದೂಡುವುದೂ ಅಪರಾಧ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಮಕ್ಕಳ ಕಳ್ಳಸಾಗಣೆ, ಲೈಂಗಿಕ ದೌರ್ಜನ್ಯ,ಗುಲಾಮಗಿರಿ, ಜೀತ ಪದ್ಧತಿ, ಬಿಕ್ಷೆ ಕೇಳುವ ಮಕ್ಕಳನ್ನು ಕಂಡಾಗ 122 ಅಥವಾ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ನೀಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಿ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಅವರು ಮಾತನಾಡಿ ಹೆಣ್ಣುಮಕ್ಕಳ ಬಾಲ್ಯವಿವಾಹ ಪ್ರಕರಣಗಳು ಹೆಚ್ಚುತ್ತಲೇ ಇದೆ. ತಾವು ಮಾಡುತ್ತಿರುವ ತಪ್ಪಿನ ಅರಿವಾಗುತ್ತಿಲ್ಲ.

ಬಾಲ್ಯಾವಸ್ಥೆಯಲ್ಲಿರುವ ಹುಡುಗಿಗೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಅರಿವು ಇರುವುದಿಲ್ಲ. ಬಾಲ್ಯವಿವಾಹ ಮಾಡುವವರಿಗೆ ಹಾಗೂ ಪ್ರೇರೇಪಣೆ ನೀಡುವವರಿಗೆ ಶಿಕ್ಷೆ ಆಗಬೇಕು ಜೊತೆಗೆ ಹದಿಹರೆಯದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಕೆಲವು ಪ್ರಕರಣಗಳು ಹುಡುಗಿ ಗರ್ಭಿಣಿಯಾದ ಬಳಿಕ ಗೊತ್ತಾಗುತ್ತದೆ ಅಂತವರಿಗೆ ಶಿಕ್ಷೆಯಾಗಬೇಕು ಎಂದರು.

ಶೋಷಣೆಗೆ ಒಳಗಾದವರಿಗೆ ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರಿಗೆ ಪುನರ್ವಸತಿ ಕಲ್ಪಿಸುವುದು, ಹಾಗೂ ಇದರಲ್ಲಿ ಭಾಗಿಯದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ITPA 1956ರ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಇಂಡಿಯಾ ನಿರ್ದೇಶಕರಾದ ಬೃಂದಾ ಹಾಗೂ ಬಚ್ಪನ್ ಬಚಾವೋ ಆಂದೋಲನದ ರಾಜ್ಯ ಸಂಯೋಜಕರಾದ ಬಿನು ವರ್ಗೀಸ್ ಅವರು ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಹಾಗೂ ITPA 1956ರ ಕಾಯ್ದೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಾಯ್ದೆಯ ಭಾಗಿದಾರ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!